ಬೀದರ್‌ | ಶಾಸಕ ಸ್ಥಾನದಿಂದ ಯತ್ನಾಳ ವಜಾಕ್ಕೆ ಬಸವಪರ ಸಂಘಟನೆಗಳ ಆಗ್ರಹ

Date:

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರೀಯ ಬಸವ ದಳ ಹಾಗೂ ಬಸವಪರ ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿದರು.

- Advertisement -

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ವಿಧಾನಸಭೆ ಸಭಾಪತಿ ಯು.ಟಿ.ಖಾದರ್‌ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ರಾಷ್ಟ್ರೀಯ ಬಸವದಳ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ.ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ʼವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಬೀದರ್‌ನಲ್ಲಿ ವಕ್ಫ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಸವಣ್ಣನವರ ಲಿಂಗೈಕ್ಯರಾದ ವಿಷಯ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿ ಬಸವಣ್ಣನವರಿಗೆ ಅವಮಾನ ಎಸಗಿದ್ದಾರೆ. ಬಸವಣ್ಣನವರು ಹೊಳೆಗೆ ಹಾರಿ ಪ್ರಾಣಬಿಟ್ಟರು ಎಂಬ ಆಧಾರ ರಹಿತ ಸುಳ್ಳು ಹೇಳಿ, ಬಸವಣ್ಣನವರು ಓರ್ವ ಹೇಡಿಯಾಗಿದ್ದರು ಎಂಬರ್ಥದಲ್ಲಿ ಮಾತನಾಡಿ ಬಸವಣ್ಣನವರಿಗೆ ಅಪಮಾನ ಮಾಡಿರುವುದು ಖಂಡನೀಯʼ ಎಂದರು.

ʼಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಲಿಂಗಾಯತ ಎಂದು ಹೇಳಿಕೊಂಡು ಪಕ್ಷದಿಂದ ಟಿಕೆಟ್‌ ಪಡೆಯುತ್ತಾರೆ. ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ಪಡೆಯಲು ಹೋರಾಟ ನಡೆಸುತ್ತಾರೆ. ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಲಿಂಗಾಯತ ಮೀಸಲಾತಿ ಬಳಸಿಕೊಳ್ಳುತ್ತಾರೆ. ಲಿಂಗಾಯತ ಹೆಸರಿನಲ್ಲಿ ಸರ್ಕಾರದ ಸೌಲಭ್ಯ ಪಡೆಯುತ್ತಾರೆ. ಆದರೆ, ಅದೇ ಲಿಂಗಾಯತ ಧರ್ಮದ ಸ್ಥಾಪಕ ಬಸವಣ್ಣನವರ ಕುರಿತು ಅವಹೇಳನಕಾರಿ ಮಾತನಾಡುವುದು ಎಷ್ಟು ಸರಿ. ಅವಹೇಳಕಾರಿ ಮಾತನಾಡುವ ಶಾಸಕ ಬಸನಗೌಡ ಯತ್ನಾಳ ಲಿಂಗಾಯತ ಧರ್ಮದವರೇ ಅಲ್ಲ, ಇನ್ಮುಂದೆ ಅವರನ್ನು ಲಿಂಗಾಯತ ಧರ್ಮದಿಂದ ಬಹಿಷ್ಕಾರ ಹಾಕುತ್ತೇವೆʼ ಎಂದು ಹೇಳಿದರು.

ʼಬಸವಣ್ಣನವರನ್ನು ಅವಮಾನಿಸಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ ಇನ್ಮುಂದೆ ಪಕ್ಷ ಹಾಗೂ ಸರ್ಕಾರದಿಂದ ಲಿಂಗಾಯತ ಮೀಸಲಾತಿ ಕೋಟಾದಲ್ಲಿ ಯಾವುದೇ ಸೌಲಭ್ಯಗಳನ್ನು ನೀಡಬಾರದು. ಯತ್ನಾಳ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಂಡು ಇವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕುʼ ಎಂದು ಆಗ್ರಹಿಸಿದರು.

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಸಂಚಾಲಕ ಶ್ರೀಕಾಂತ ಸ್ವಾಮಿ ಮಾತನಾಡಿ, ʼಬಸನಗೌಡ ಪಾಟೀಲ್‌ ಯತ್ನಾಳ ಅವರಲ್ಲಿ ಸಮಾನತೆ, ಪ್ರೀತಿ ಇರಬೇಕು. ದೇಶದ ಬಗ್ಗೆ ಗೌರವ ಇರಬೇಕು. ಆದರೆ, ಯತ್ನಾಳ ಬಾಯ್ತೆರೆದರೆ ಬಚ್ಚಲು ಮೋರಿಯಾಗಿದೆ. ಇಂತಹ ನಾಲಾಯಕ್‌ ವ್ಯಕ್ತಿ ಲಿಂಗಾಯತ ಧರ್ಮದಲ್ಲಿ ಹುಟ್ಟಲು ಸಾಧ್ಯವೇ ಇಲ್ಲ. ಕೂಡಲೇ ಯತ್ನಾಳ ಅವರನ್ನು ಲಿಂಗಾಯತ ಧರ್ಮದಿಂದ ಉಚ್ಛಾಟನೆ ಮಾಡಬೇಕುʼ ಎಂದು ಒತ್ತಾಯಿಸಿದರು.

ಲಿಂಗಾಯತ ಮಾಹಮಠದ ಪ್ರಭುದೇವರು ಮಾತನಾಡಿ, ʼಬಸನಗೌಡ ಪಾಟೀಲ್‌ ಅವರು ಜವಾಬ್ದಾರಿ ಸ್ಥಾನದಲ್ಲಿದ್ದರೂ ಸಹ ಏನು ಮಾತನಾಡಬೇಕೆಂಬ ಅರಿವಿಲ್ಲ, ಅವರಿಗೆ ಇತಿಹಾಸದ ಪ್ರಜ್ಞೆ ಇಲ್ಲ. ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯತ್ನಾಳ ಅವರ ಹೇಳಿಕೆ ಲಿಂಗಾಯತ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಬ್ಬರು ಕರೆ ಕೊಡುವುದು, ಇನ್ನೊಬ್ಬರು ಗೇಲಿ ಮಾಡುವುದು, ಏನಿದು ಮಕ್ಕಳಾಟ?

ಪ್ರತಿಭಟನೆಯಲ್ಲಿ ಬೀದರ್‌ ಬಸವ ಮಂಟಪದ ಸತ್ಯದೇವಿ ಮಾತಾಜಿ, ಬಸವ ಕೇಂದ್ರ ಜಿಲ್ಲಾಧ್ಯಕ್ಷ ಶರಣಪ್ಪಾ ಮಿಠಾರೆ ಹಾಗೂ ಪ್ರಮುಖರಾದ ಶಿವರಾಜ ಪಾಟೀಲ್‌ ಅತಿವಾಳ, ಚನ್ನಬಸವ ಹಂಗರಗಿ, ಓಂಪ್ರಕಾಶ ರೊಟ್ಟೆ, ಅಕ್ಕಮಹಾದೇವಿ ಸೇರಿದಂತೆ ರಾಷ್ಟ್ರೀಯ ಬಸವದಳ , ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿಗಂಗೋತ್ರಿ ಅಕ್ಕನಾಗಲಾಂಬಿಕ ಮಹಿಳಾ ಗಣದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...

ವಿದ್ಯಾರ್ಥಿಗಳೆದರು ಹರೀಶ್ ಪೂಂಜಾ ದ್ವೇಷ ಭಾಷಣ; ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ...

ಕುಮಟಾ–ಹೊನ್ನಾವರ ಕ್ಷೇತ್ರಕ್ಕೆ ರೂ.12 ಲಕ್ಷ ಅನುದಾನ; ಮನ್ಸೂರ್ ಅಲಿ ಖಾನ್‌ಗೆ ನಿವೇದಿತ್ ಆಳ್ವಾ ಕೃತಜ್ಞತೆ

ಕುಮಟಾ–ಹೊನ್ನಾವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ...

ಯಲ್ಲಾಪುರ | ಚೆಕ್‌ಡ್ಯಾಮ್‌ನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ಸಾವು

ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಚೆಕ್‌ಡ್ಯಾಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ...