ಚಿತ್ತಾಪುರದಲ್ಲಿ ಪಥಸಂಚಲನ ಕಗ್ಗಂಟು: ವಾಗ್ವಾದ ಉಂಟಾಗಿ ಶಾಂತಿಸಭೆ ಮೊಟಕು

Date:

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅವಕಾಶ ನೀಡುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ಕೊನೆಗೆ ಆರೆಸ್ಸೆಸ್‌ ಪರವಾಗಿ ಮಾತನಾಡಿದ ಬಿಜೆಪಿಯ ದಲಿತ ಮುಖಂಡ ಮತ್ತು ದಲಿತ ಸಂಘಟನೆಗಳ ನಡುವಿನ ವಾಗ್ವಾದದ ಮೂಲಕ ಸಭೆ ಮುಕ್ತಾಯಗೊಂಡಿದೆ.

- Advertisement -

ಬಿಜೆಪಿ ರಾಜ್ಯ ಪರಿಶಿಷ್ಟ ಜಾತಿ(ದಲಿತ) ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಆರೆಸ್ಸೆಸ್ ಪರವಾಗಿ ಮಾತನಾಡುವ ವೇಳೆ ವಾಗ್ವಾದ ಉಂಟಾಗಿದೆ. ಹಾಗಾಗಿ ಸಭೆಯನ್ನು ಮುಕ್ತಾಯಗೊಳಿಸಿ ಎಲ್ಲ ಸಂಘನಟನೆಯ ಮುಖಂಡರನ್ನು ಸಭೆಯಿಂದ ಹೊರಗೆ ಕಳುಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಭೆಗೆ ಸಂಬಂಧಿಸಿದಂತೆ ಭೀಮ್‌ ಆರ್ಮಿ ಸಂಘಟನೆಯ ಸಂತೋಷ್‌ ಬಿ ಪಾಲ ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್), ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ಸ್, ಗೊಂಡ ಕುರುಬ ಎಸ್‌ಟಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ‌, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ 10 ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿತ್ತು. ಅದರಂತೆ ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಪ್ರಾರಂಭವಾದ ಸಭೆಗೆ ಸಂಘಟನೆಯ ಗರಿಷ್ಠ ಮೂವರು ಸದಸ್ಯರು ಪ್ರತಿನಿಧಿಸುವಂತೆ ತಿಳಿಸಲಾಗಿತ್ತು” ಎಂದರು.

ಅದರಂತೆ ಸಭೆಯಲ್ಲಿ ಪಥಸಂಚಲನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರು ಎಲ್ಲರಿಂದಲೂ ಲಿಖಿತ ಹೇಳಿಕೆಗಳನ್ನು ಪಡೆದಿದ್ದು, ನ್ಯಾಯಾಲಯಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬಳಿಕ ನ್ಯಾಯಾಲಯ ಯಾವ ರೀತಿಯ ಆದೇಶ ನೀಡುವುದೋ ಅದರಂತೆ ಪಥಸಂಚಲನಕ್ಕೆ ಅನುಮತಿ ನೀಡಲಾಗುವುದೆಂದು ಹೇಳಿದ್ದಾರೆ. ಬಿಜೆಪಿಯಲ್ಲಿರುವ ದಲಿತ ಸಮುದಾಯದ ಮುಖಂಡ ಅಂಬರಾಯ ಅಸ್ಟಗಿ ಆರೆಸ್ಸೆಸ್‌ ಪರವಾಗಿ ಮಾತನಾಡಲು ಮುಂದಾದಾಗ ಪೊಲೀಸರು ಮತ್ತು ಅವರ ನಡುವೆ ವಾಗ್ವಾದ ಉಂಟಾಯಿತು. ಇದರಿಂದ ಸಭೆಯನ್ನು ಅರ್ಧಕ್ಕೇ ಮೊಟಕುಗೊಳಿಸಲಾಯಿತು” ಎಂದು ಹೇಳಿದರು.

ಶಾಂತಿಸಭೆ ನೇತೃತ್ವ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸೇಡಂ ಸಹಾಯ ಆಯುಕ್ತರು, ಚಿತ್ತಾಪೂರ ತಹಶೀಲ್ದಾರ್, ಪುರಸಭೆಯ ಮುಖ್ಯಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ, ಶಹಾಬಾದ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು, ಚಿತ್ತಾಪುರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11.30ಕ್ಕೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ಎಲ್ಲ ಸಂಘಟನೆಗಳಿಗೂ 10 ನಿಮಿಷ ಮಾತನಾಡುವ ಅವಕಾಶ ನೀಡಲಾಗಿತ್ತು. ಈ ವೇಳೆ ಆರೆಸ್ಸೆಸ್ ಸಂಘಟಕರು ನ್ಯಾಯಾಲಯ ನೀಡುವ ದಿನಾಂಕಕ್ಕೆ ಪಥಸಂಚಲನ ಮಾಡುವುದಾಗಿ ತಿಳಿಸಿದ್ದಾರೆ.

ಆರೆಸ್ಸೆಸ್, ಭಾರತೀಯ ದಲಿತ ಪ್ಯಾಂಥರ್, ಭೀಮ್ ಆರ್ಮಿ, ರಾಜ್ಯ ಯುವ ಘಟಕ, ಗೊಂಡ-ಕುರುಬ ಎಸ್‌ಟಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ, ಬೀದರ್‌ನ ಕ್ರಿಶ್ಚನ್ ಹೌಸನ ಸಂಜಯ ಜಾಗೀರದಾರ, ದಲಿತ ಸಂಘರ್ಷ ಸಮಿತಿ ಭೀಮ ಮಾರ್ಗ, ಡಾ. ವಿಠಲ ದೊಡ್ಡಮನಿ, ಸಂತೋಷ ಬಿ ಪಾಳಾ, ಜೈಭೀಮ್ ಸೇನೆ‌ ಪಥಸಂಚಲನಕ್ಕೆ ಅವಕಾಶ ಕೇಳಿರುವುದಾಗಿ ತಿಳಿದುಬಂದಿದೆ.

ಘಟನೆ ಹಿನ್ನೆಲೆ

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನವನ್ನು ವಿರೋಧಿಸಿ ಸುಮಾರು 12 ಸಂಘಟನೆಗಳು ತಾವೂ ಬೀದಿಗಿಳಿಯುವುದಾಗಿ ಅನುಮತಿ ಕೋರಿದ ಬೆನ್ನಲ್ಲೇ ಸಂಘಟನೆಗಳ ನಡುವೆ ಶಾಂತಿಸಭೆ ನಡೆಸುವಂತೆ ಕಲಬುರಗಿ ಹೈಕೋರ್ಟ್‌ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಂತಿಸಭೆ ಹಮ್ಮಿಕೊಳ್ಳಲಾಗಿತ್ತು.

ಆರೆಸ್ಸೆಸ್‌ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನ ನಡೆಸುವಂತೆ ಅನುಮತಿ ಪಡೆಯಲು ಸಂಘಟನೆಗೆ ಅವಕಾಶ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ಪಥಸಂಚಲನಕ್ಕೆ ಅನುಮತಿ ಕೋರಿ 12 ಸಂಘಟನೆಗಳ ಮನವಿ: ಶಾಂತಿಸಭೆಗೆ ಹೈಕೋರ್ಟ್‌ ನಿರ್ದೇಶನ

ಈ ಹಿನ್ನೆಲೆಯಲ್ಲಿ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಕೂಡ ಅದೇ ದಿನ ಅಂದರೆ ನವೆಂಬರ್ 2ರಂದು ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ ಅಕ್ಟೋಬರ್‌ 21ರ ಮಂಗಳವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು.

“ಆರೆಸ್ಸೆಸ್‌ನ ಕಾರ್ಯಗಳು ಮತ್ತು ಆಲೋಚನೆಗಳು ಯುವಜನರು ಹಾಗೂ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದಲಿತ ಪ್ಯಾಂಥರ್ಸ್, ಒಂದು ಕೈಯಲ್ಲಿ ಸಂವಿಧಾನದ ಪೀಠಿಕೆ, ಇನ್ನೊಂದು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ರ‍್ಯಾಲಿ ನಡೆಸಲು ಅನುಮತಿ ಕೋರಿತ್ತು. ಇದರ ನಡುವೆ ಭೀಮ್ ಆರ್ಮಿ ಕೂಡ ತ್ರಿವರ್ಣ ಧ್ವಜ, ಬೌದ್ಧ ಧರ್ಮದ ಪಂಚಶೀಲ ಧ್ವಜ ಮತ್ತು ಬಿದಿರಿನ ಕೋಲು ಹಿಡಿದು ರ‍್ಯಾಲಿ ನಡೆಸಲು ಅನುಮತಿ ಕೇಳಿತ್ತು. ಇದಾದ ನಂತರ ಈವರೆಗೆ ಸುಮಾರು 12 ಸಂಘಟನೆಗಳು ನವೆಂಬರ್‌ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...