ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರಾಜ್ಯ ಸಮಿತಿ ವತಿಯಿಂದ ಬಹುಜನ ವಿಮೋಚಕ ಪ್ರೊ.ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ನೆನಪಿನಲ್ಲಿ ನಾಗರಿಕ ಹಕ್ಕು ರಕ್ಷಣಾ ದಿನವನ್ನು ಜೂನ್ 9 ರಂದು ಬೆಂಗಳೂರಿನ ಅರಮನೆ ಮೈದಾನದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.
ಅಂಬೇಡ್ಕರವಾದ ಮಾಸಪತ್ರಿಕೆ ವಿಶೇಷ ಸಂಚಿಕೆ ಮತ್ತು ʼದಾರ್ಶನಿಕ-ನಮ್ಮ ಮಾರ್ಗದರ್ಶಕʼ ಪುಸ್ತಕ ಬಿಡುಗಡೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೆರವೇರಿಸಲಿದ್ದು, ರಾಜ್ಯ ಸಮಿತಿಯ ಎಲ್ಲ ಜಿಲ್ಲೆಗಳ ಪದಾಧಿಗಳು, ಅಂಬೇಡ್ಕರ್ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ʼಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ಅಧ್ಯಕ್ಷ ಇಂದಿರಾ ಕೃಷ್ಣಪ್ಪ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ನಟರಾಜ್ ಹುಳಿಯಾರ್ ದಿಕ್ಸೂಚಿ ಮಾತು ಹೇಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಕೆ.ಮುರುಳಸಿದ್ದಪ್ಪ, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಮಹಿಳಾ ಒಕ್ಕೂಟದ ನಿರ್ಮಲಾ, ಹಿರಿಯ ದಲಿತ ನಾಯಕ ರುದ್ರಪ್ಪ ಹನಗವಾಡಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಯಾದಗಿರಿ | ರೈತ ಮುಖಂಡ ಚನ್ನಪ್ಪ ಆನೆಗುಂದಿ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ