ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳ ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements
  • ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ
  • ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಲು ಮನವಿ

ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಬಳಿಕ ಅವರು ಭರವಸೆ ನೀಡಿದರು.

“ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದರು.

Advertisements

ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ, ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದು ಧರ್ಮದ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ನಿಯೋಗ ಸಿಎಂಗೆ ಮನವರಿಕೆ ಮಾಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನತಂತ್ರವೆಂಬುದು ಭಾರತದ ವಂಶವಾಹಿಯಲ್ಲಿದೆಯೇ ಮೋದಿಯವರೇ, ಹೌದೇ?

ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಕ್, ರಹಮತ್ ತರೀಕೆರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X