ಬೀದರ್‌ | ಮಾಧ್ಯಮಗಳ ಸಾಮಾಜಿಕ ಕಾಳಜಿಯಿಂದ ಸಮಾಜದ ಪ್ರಗತಿ : ಮಾರ್ಥಂಡ ಜೋಷಿ

Date:

ಮಾನವೀಯ ಮೌಲ್ಯಗಳು ಬೆಳೆಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ದೊಡ್ಡದು. ವ್ಯಕ್ತಿತ್ವ ವಿಕಾಸದಲ್ಲಿ ಮಾಧ್ಯಮಗಳು ಮಹತ್ವ ಪಡೆದಿವೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಮಾರ್ಥಂಡ ಜೋಷಿ ಹೇಳಿದರು.

- Advertisement -

ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರ ವೇದಿಕೆ ಹಾಗೂ ಈದಿನ.ಕಾಮ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಮಾಧ್ಯಮ, ಸಮಾಜ ಮತ್ತು ಸ್ವಾತಂತ್ರ್ಯ’ ಕುರಿತ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

“ಮಾಧ್ಯಮಕ್ಕೆ ಸಾಮಾಜಿಕ ಬದ್ಧತೆ ಮತ್ತು ಹೊಣೆಗಾರಿಕೆ ಎರಡೂ ಮುಖ್ಯ. ಮಾನವೀಯತೆಯ ದಾರಿಯೇ ಮಾಧ್ಯಮಕ್ಕಿರಬೇಕು. ಶಿಕ್ಷಣ, ಸಿನಿಮಾ, ರಾಜಕೀಯದಂತೆ ಪತ್ರಿಕೆಗಳು ಉದ್ಯಮಗಳಾಗಿವೆ. ಲಾಭ ಮತ್ತು ಸೇವೆ ಎರಡೂ ಒಳಗೊಂಡಿದೆ. ಮಾಧ್ಯಮಗಳಿಗೆ ಸಾಮಾಜಿಕ ಕಾಳಜಿ, ಜವಾಬ್ದಾರಿಗಳಿದ್ದರೆ ಸಮಾಜದ ಪ್ರಗತಿ ಸಾಧ್ಯ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ರೂಢಿಸಿಕೊಳ್ಳಬೇಕು.‌ ಮೊಬೈಲ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳು ಸದ್ಬಳಕೆಯಾಗಲಿ” ಎಂದು ಸಲಹೆ ನೀಡಿದರು.

ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, “ಜನಪರ ಕಾಳಜಿಯೇ ಮಾಧ್ಯಮದ ಬಹುದೊಡ್ಡ ಜವಾಬ್ದಾರಿ. ಮುದ್ರಣ ಮಾಧ್ಯಮಕ್ಕೆ ಹೆಚ್ಚು ನಿಖರತೆ, ಸಾಮಾಜಿಕ ಹೊಣೆಗಾರಿಕೆಯಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳು ಮಹತ್ವದ ಪಾತ್ರ ನಿರ್ವಹಿಸಿದ್ದವು. ಜಗತ್ತಿನ ಎಲ್ಲ ಜಾಗಗಳಲ್ಲಿ ಮಾಧ್ಯಮಗಳಿವೆ. ಮಾಧ್ಯಮ ಜನ ಬದುಕಿನ ಕನ್ನಡಿಯಾಗಿದೆ” ಎಂದು ಹೇಳಿದರು.

“ಒಂದು ಮನೆಯಲ್ಲಿ ಟಿ.ವಿ. ಒಂದೇ ಇರಬಹುದು. ಮೊಬೈಲ್ ಮನೆಯ ಎಲ್ಲರಲ್ಲೂ ಇವೆ. ಹಾಗಾಗಿ ಈ ಕಾಲದಲ್ಲಿ ಸಾಮಾಜಿಕ ಮಾಧ್ಯಮ ಹೆಚ್ಚು ಪ್ರಭುತ್ವ ಪಡೆದಿವೆ. ಇಂದು ಸಾಮಾಜಿಕ ಜಾಲತಾಣಗಳಿಂದ ವೇಗವಾಗಿ ಸುದ್ದಿ ಪ್ರಸಾರ, ಸಂಪರ್ಕಕ್ಕೆ ಅನುಕೂಲವಾಗಿದೆ. ವಿದ್ಯಾರ್ಥಿಗಳು ಮಾಧ್ಯಮ ಕ್ಷೇತ್ರಕ್ಕೆ ಬರಬೇಕು. ಭಾಷೆ, ಬರಹ ಮತ್ತು ಸಾಮಾಜಿಕ ಪ್ರಜ್ಞೆ ಹಾಗೂ ಕಳಕಳಿಗಳಿಂದ ಉತ್ತಮ ಪತ್ರಕರ್ತನಾಗಲು ಸಾಧ್ಯ. ಪತ್ರಿಕಾ ರಂಗದಲ್ಲಿ ವೃತ್ತಿಪರತೆಯಿಂದ ಹೆಚ್ಚು ಬೆಳೆಯಲು ಸಾಧ್ಯವಿದೆ. ಹಳ್ಳಿಗಳ ಮೂಲಭೂತ ಸೌಕರ್ಯ, ನಗರ ಸಮಸ್ಯೆಗಳು, ಜನರ ಕೊರತೆ ಬಿಂಬಿಸುವ ಕೆಲಸ ಮಾಧ್ಯಮಗಳಿಂದ ನಡೆಯಬೇಕು. ಮಾಧ್ಯಮ ಜನರ ದನಿಯಾಗಬೇಕು” ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಡಾ. ಮಲ್ಲಿಕಾರ್ಜುನ ಲಕಶೆಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, “ಅತ್ಯಂತ ಸಂವೇದನಾಶೀಲರ, ಚಿಂತನಾಶೀಲರ, ಸೂಕ್ಷ್ಮ ವಿವೇಚನೆವುಳ್ಳವರದು ಮಾಧ್ಯಮರಂಗ. ಯಾವುದೇ ಒಪ್ಪಂದವಿಲ್ಲದೆ, ಬದ್ಧತೆಯಿಂದ ಕೆಲಸ ಮಾಡುವ ಕ್ಷೇತ್ರ. ಕೋವಿಡ್ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮಕ್ಕೆ ಹಿನ್ನಡೆಯಾಗಿತ್ತು. ಈಗ ಮತ್ತೆ ಪತ್ರಿಕೆ ಪ್ರಸರಣ ಹೆಚ್ಚಾಗಿದೆ” ಎಂದರು.

ಕಾಲೇಜು ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, “ಮಾಧ್ಯಮಗಳು ಲೋಕಪ್ರಜ್ಞೆ, ಕಾಲಪ್ರಜ್ಞೆ ಜೀವಂತವಾಗಿಟ್ಟಿವೆ. ಸಮಕಾಲೀನ ಬಿಕ್ಕಟ್ಟುಗಳನ್ನು ಅತ್ಯಂತ ಪ್ರಜ್ಞಾಪೂರ್ವಕವಾಗಿ ಸ್ಪಂದಿಸುವ ಗುಣ ಮಾಧ್ಯಮಗಳಿಗಿದೆ. ಅದರಲ್ಲೂ ಮುದ್ರಣ ಮಾಧ್ಯಮ ಲೋಕವಿಮರ್ಶೆಯ ಬಹುದೊಡ್ಡ ಮಾದರಿಯಾಗಿವೆ. ಸಮಾಜ, ರಾಜಕಾರಣ, ಅರ್ಥವ್ಯವಸ್ಥೆ, ಎಲ್ಲದರ ಕುರಿತು ಸಾಂಸ್ಕೃತಿಕ ವಿವೇಚನೆಯಲ್ಲಿ ತೊಡಗುವ ಪರಿಕರಗಳಾಗಿವೆ. ವಿಜ್ಞಾನ- ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರಗಳು, ಚರಿತ್ರೆ, ಕಲೆ ಮತ್ತು ಸಾಹಿತ್ಯ ವಲಯಗಳ ಹೊಸ ಸಂಶೋಧನೆಗಳನ್ನು ಜಗತ್ತಿಗೆ ಕಾಣಿಸುವ ದಾರಿಯಾಗಿ ಮಾಧ್ಯಮಗಳು ಕೆಲಸ ಮಾಡುತ್ತಿವೆ” ಎಂದು ಹೇಳಿದರು.

“ಸರ್ಕಾರಗಳ ಕಣ್ಣಿಗೆ ಬೀಳದ ಸಮಸ್ಯೆಗಳು, ನಿರ್ಲಕ್ಷಿತ ವಲಯಗಳ, ಅಸಂಘಟಿತ ವಲಯಗಳ, ಕೃಷಿಕರ ಸವಾಲುಗಳು, ಕೃಷಿ ಬಿಕ್ಕಟ್ಟು ಸೇರಿ ಹಲವು ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕೆಲಸ ಮಾಧ್ಯಮಗಳಿಂದ ಸಾಧ್ಯ. ಮಾಧ್ಯಮ ಆ ನಿಟ್ಟಿನಲ್ಲಿ ಚುರುಕಾಗಿ ಕಾರ್ಯನಿರ್ವಹಿಸಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಾರದೊಳಗೆ ಮನರೇಗಾ ಕೂಲಿ ಹಣ ಪಾವತಿಸಲು ಬಿಎಸ್‌ಪಿ ಆಗ್ರಹ

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ನಾಗಪ್ಪ ನಿಣ್ಣೆ, ಡಾ. ಶಾಂತಲಾ ಪಾಟೀಲ, ಶ್ರೀನಿವಾಸ ಉಮಾಪುರೆ, ವಿವೇಕಾನಂದ ಶಿಂಧೆ, ಸಚಿನ ಬಿಡವೆ,ಜಗದೇವಿ ಜವಳಗೆ, ಅಶೋಕರೆಡ್ಡಿ ಗದಲೇಗಾಂವ ಇದ್ದರು. ಗಂಗಾಧರ ಸಾಲಿಮಠ ಸ್ವಾಗತಿಸಿದರು. ಸೌಮ್ಯಾ ಕರಿಗೌಡ ನಿರೂಪಿಸಿದರು. ರೋಶನ್ ಬೀ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...