ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ!

Date:

ಬೆಂಗಳೂರು ನಗರದ ಪ್ರತಿಷ್ಠಿತ ಮಂತ್ರಿ ಸ್ಕ್ವೇರ್ ಮಾಲ್‌​ಗೆ ಮತ್ತೆ ಬೀಗ ಹಾಕಲಾಗಿದೆ. 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ನ ಪ್ರಮುಖ ದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ ನೇತೃತ್ವದ ಅಧಿಕಾರಿಗಳ ತಂಡ ಆಗಮಿಸಿ, ಬೀಗ ಜಡಿದಿದೆ. 2019-20ರವರೆಗಿನ ತೆರಿಗೆ ಬಾಕಿಯಿದ್ದ ಹಿನ್ನೆಲೆ ಬೀಗ ಹಾಕಲಾಗಿದೆ.

- Advertisement -

2020ರ ಆಗಸ್ಟ್​​​ನಲ್ಲೇ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಹಿಂದೆ ಮಂತ್ರಿ ಮಾಲ್ ಸುಮಾರು 42,63,40,874 ರೂ. ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಆ ವೇಳೆ ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು.

ಇದನ್ನು ಓದಿದ್ದೀರಾ? ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರವೇಯಿಂದ ಸ್ಪಷ್ಟ ಸಂದೇಶ: ನಾರಾಯಣಗೌಡ

ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್​​ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ 2021ರಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.

ಮಂತ್ರಿ ಮಾಲ್, ಬಿಬಿಎಂಪಿ ಎರಡೂ ನಿಯಮಗಳನ್ನು ಉಲ್ಲಂಘಿಸಿವೆ. ನಿಗದಿತ ಅವಧಿಯಲ್ಲಿ ಮಂತ್ರಿ ಮಾಲ್ ತೆರಿಗೆ ಪಾವತಿಸಿಲ್ಲ. ಸೀಲ್ ಮಾಡಿ ಬಿಬಿಎಂಪಿಯೂ ನಿಯಮಾವಳಿ ಉಲ್ಲಂಘಿಸಿದೆ ಎಂದು ಹೈಕೋರ್ಟ್ ಹೇಳಿತ್ತು. ತೆರಿಗೆ ಬಾಕಿಯ ಸ್ವಲ್ಪ ಭಾಗವನ್ನು ತಕ್ಷಣ ಪಾವತಿಸುವಂತೆ ಹೈಕೋರ್ಟ್​ನ ಏಕಸದಸ್ಯ ಪೀಠ 2021ರ ಡಿಸೆಂಬರ್​​​ನಲ್ಲಿ ಸೂಚನೆ ನೀಡಿತ್ತು. ಈಗ ಮತ್ತೆ 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಬೀಗ ಜಡಿಯಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...