ಮೈಸೂರು | ಸೆ.13 ರಂದು ‘ಪ್ರವಾದಿ ಮುಹಮ್ಮದ್ (ಸ) ನ್ಯಾಯದ ಹರಿಕಾರ’ ಸೀರತ್ ಸಮಾವೇಶ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆ ಪತ್ರಿಕಾಗೋಷ್ಠಿ ನಡೆಸಿ, ಇದೇ ಸೆಪ್ಟೆಂಬರ್.13 ರಂದು ಶನಿವಾರ ಸಂಜೆ 7 ಗಂಟೆಗೆ ಸಿದ್ವಿಕ್ ನಗರದಲ್ಲಿರುವ ಮಿಲನ್ ಫಂಕ್ಷನ್ ಹಾಲ್ ನಲ್ಲಿ ‘ಪ್ರವಾದಿ ಮುಹಮ್ಮದ್(ಸ) ನ್ಯಾಯದ ಹರಿಕಾರ’ ವಿಷಯದಲ್ಲಿ ಸೀರತ್ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

- Advertisement -

ಪ್ರವಾದಿ ಮುಹಮ್ಮದ್ (ಸ) ರವರು ಅರೆಬಿಕ್ ಕ್ಯಾಲೆಂಡರ್ ಪ್ರಕಾರ ರಬೀವುಲ್ ಅವ್ವಲ್ ತಿಂಗಳಿನಲ್ಲಿ ಜನಿಸಿದರು. ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾದಿ ಮುಹಮ್ಮದ್‌ (ಸ) ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಸೀರತ್ ಭಾಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ನಗರ ಶಾಖೆವತಿಯಿಂದ ಈಗಾಗಲೇ, ರಕ್ತದಾನ ಶಿಬಿರ ಮತ್ತು ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿದ್ದು, ಇನ್ನೊಂದು ಸ್ವಚ್ಛತಾ ಕಾರ್ಯವನ್ನು ಸೆಪ್ಟೆಂಬರ್. 3 ರಂದು ನಡೆಸಲಾಗುವುದು. ಅಭಿಯಾನದ ಸಂದರ್ಭದಲ್ಲಿ ಸಮಾಜದ ಗಣ್ಯ ವ್ಯಕ್ತಿಗಳನ್ನು ಹಾಗೂ ಜನ ಸಾಮಾನ್ಯರನ್ನು ಭೇಟಿಯಾಗಿ ಪ್ರವಾದಿ ಮುಹಮ್ಮದರು ಸಾರಿದ ಜೀವನ ಮೌಲ್ಯಗಳನ್ನು, ಜಾತಿ- ಮತ-ಧರ್ಮ-ಲಿಂಗ ವ್ಯತ್ಯಾಸವಿಲ್ಲದೇ ಪರಿಚಯಿಸಲಾಗುವುದು ಎಂದು ವಲಯ ಸಂಚಾಲಕರಾದ ಅಬ್ದುಲ್ ಸಲಾಂ. ಯು. ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮುಖಂಡ ಕೆ.ಶಿವರಾಮು, ಮೆಸ್ಕೊ ಕಲೀಮ್ ಅಹಮದ್, ಮೈಸೂರು ನಗರ ಸ್ಥಾನಿಕ ಅಧ್ಯಕ್ಷ ಮುಹಮ್ಮದ್ ಅಸ್ಲಾಂ, ಸೀರತ್ ಅಭಿಯಾನದ ಸಂಚಾಲಕ ಖಲಿಲ್ ಉರ್ ರೆಹಮಾನ್, ನೂರ್ ಮರ್ಚೆಂಟ್, ಮುಹಮ್ಮದ್ ಉಮರ್ ಫಾಝಿಲ್, ಸ್ಥಾನಿಕ ಉಪಾಧ್ಯಕ್ಷ ಶೇಕ್ ಅಸಾದುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...