ಚಾಮರಾಜನಗರ | ಹೆಣ್ಣು ಮಕ್ಕಳ ರಕ್ಷಣೆ, ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾಯಾಧೀಶ ಈಶ್ವರ

Date:

ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕೇಂದ್ರ ಪುರಸ್ಕೃತ ಯೋಜನೆ ‘ಬೇಟಿ ಬಚಾವೋ-ಬೇಟಿ ಪಡಾವೋ’ ಅಭಿಯಾನದಡಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ‘ಹೆಣ್ಣು ಮಕ್ಕಳ ರಕ್ಷಣೆ, ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯ’ ಎಂದರು.

- Advertisement -

“ಹಿಂದಿನ ಕಾಲದ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳು, ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗಿದ್ದರು. ಸಾಕಷ್ಟು ದೌರ್ಜನ್ಯಗಳನ್ನು ಅನುಭವಿಸುತ್ತಿದ್ದರು. ಲಿಂಗ ತಾರತಮ್ಯ, ಲೈಂಗಿಕ ದೌರ್ಜನ್ಯ, ಹೆಣ್ಣು ಮಕ್ಕಳು ಕುಟುಂಬಕ್ಕೆ ಭಾರ, ಸಾಮಾಜಿಕ ತಾತ್ಸಾರಕ್ಕೆ ಒಳಗಾಗಿದ್ದ ಹೆಣ್ಣುಮಕ್ಕಳು ಬದಲಾದ ಕಾಲಘಟ್ಟದಲ್ಲಿ ಸಂವಿಧಾನ ಜಾರಿಯಾದ ಬಳಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಕ್ಷೇತ್ರಗಳು ಸೇರಿದಂತೆ ಎಲ್ಲಾ ರಂಗದಲ್ಲಿಯು ಮುಂಚುಣಿಯಲ್ಲಿದ್ದಾರೆ. ಸಂವಿಧಾನದಡಿ ಹೆಣ್ಣುಮಕ್ಕಳ ರಕ್ಷಣೆಗೆ ಹಲವಾರು ಕಾನೂನುಗಳು ಜಾರಿಯಾಗಿದ್ದು, ಉನ್ನತ ವಿದ್ಯಾಭ್ಯಾಸ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಹೆಣ್ಣು ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಹೊಂದಬೇಕು. ಮಕ್ಕಳ ರಕ್ಷಣೆಗೆ 54 ಹಕ್ಕುಗಳಿದ್ದು, ಅವುಗಳಲ್ಲಿ ಬದುಕುವ ಹಕ್ಕು, ಅಭಿವೃದ್ಧಿ ಹೊಂದುವ, ಭಾಗವಹಿಸುವ ಹಕ್ಕು, ದೌರ್ಜನ್ಯದಿಂದ ರಕ್ಷಣೆ ಹಕ್ಕು, ಮಾನವ ಕಳ್ಳ ಸಾಗಣೆ ತಡೆಯುವ ಹಕ್ಕುಗಳು ಪ್ರಮುಖವಾಗಿವೆ. ಹೆಣ್ಣು ಮಕ್ಕಳು ಬಾಲ್ಯ ವಿವಾಹವಾಗಬಾರದು. ಮಕ್ಕಳಿಗೆ 18 ವರ್ಷ ತುಂಬಿದ ತಕ್ಷಣವೇ ಪೋಷಕರು ಮದುವೆ ಮಾಡಲು ನಿರ್ಧರಿಸುತ್ತಾರೆ, ಇದು ಸಲ್ಲದು. 18 ವರ್ಷದ ನಂತರವೂ ಉನ್ನತ ಶಿಕ್ಷಣ ಪಡೆದು ಅಭಿವೃದ್ಧಿ ಹೊಂದಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, “2018ರಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಕಾರ್ಯಕ್ರಮ ಜಾರಿಯಾಗಿದೆ. ದೇಶ ಸ್ವಾತಂತ್ರ್ಯನಂತರ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಸರ್ಕಾರದಿಂದ ಸಾಕಷ್ಟು ಕಾಯ್ದೆಗಳು ಜಾರಿಯಾಗಿವೆ. ಹೆಣ್ಣು ಮಕ್ಕಳಿಗೆ ಕಾನೂನಿನ ರಕ್ಷಣೆ ಇದ್ದರು, ಇನ್ನೂ ರಕ್ಷಣೆ ಮಾಡಬೇಕೆನ್ನುವುದು ವಿಪರ್ಯಾಸವೇ ಆಗಿದೆ. ಯಾವುದು ಸರಿ, ಯಾವುದು ತಪ್ಪು ಎಂಬುದರ ಬಗ್ಗೆ ಹೆಣ್ಣು ಮಕ್ಕಳು ಚಿಂತನೆ ಮಾಡಬೇಕು. ಹೆಣ್ಣುಮಕ್ಕಳ ಆಲೋಚನೆ, ಚಿಂತನೆ, ನಿರ್ಧಾರಗಳೇ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿವೆ” ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, “ಹೆಣ್ಣು ಮತ್ತು ಗಂಡು ಮಕ್ಕಳಲ್ಲಿನ ವ್ಯತ್ಯಾಸವೆಂದರೇ ಅದು ಜೈವಿಕ ಬದಲಾವಣೆ ಮಾತ್ರವಾಗಿದೆ. ಪುರುಷ, ಮಹಿಳೆಯರಿಬ್ಬರೂ ಸಮಾನರೇ ಆಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಹೆಣ್ಣುಮಕ್ಕಳು ಮುಂದಿದ್ದಾರೆ. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವರೆಗೂ ಹೆಣ್ಣು ಮಕ್ಕಳು ಉನ್ನತ ರ್ಯಾಂಕಿಂಗ್‍ನಲ್ಲಿದ್ದರು ಬಳಿಕ ಕಳೆಗುಂದುತ್ತಿದ್ದಾರೆ. ಈ ಹಂತದಲ್ಲಿ ಚಿಂತನೆ ಅಗತ್ಯವಿದೆ. ಮಕ್ಕಳು ಏನೇ ಸಮಸ್ಯೆಗಳಿದ್ದರು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಮಾತನಾಡಿ, ಸಂವಿಧಾನದಡಿ ಎಲ್ಲರಿಗೂ ಸಮಾನ ಅವಕಾಶಗಳಿವೆ. ಹೆಣ್ಣುಮಕ್ಕಳು ತಮ್ಮ ಹಕ್ಕುಗಳ ಅರಿವನ್ನು ಪಡೆದುಕೊಳ್ಳಬೇಕು. ಬಾಲ್ಯ ವಿವಾಹವನ್ನು ಹೆಣ್ಣು ಮಕ್ಕಳೆ ವಿರೋಧಿಸಬೇಕು. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸಿದ್ದವಿದೆ. ಇಲಾಖೆಯಿಂದ ಎಲ್ಲಾ ಅಗತ್ಯ ನೆರವನ್ನು ನೀಡಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಗಾಂಧಿ ಹುತಾತ್ಮ ದಿನದಂದು ನಡೆದ ‘ಸೌಹಾರ್ದ ನಡಿಗೆ’

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಆರ್. ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಕೃಷಿ ಇಲಾಖೆ ಉಪನಿರ್ದೇಶಕಿ ಸುಷ್ಮಾ, ಪದವಿಪೂರ್ವ ಇಲಾಖೆಯ ಉಪನಿರ್ದೇಶಕಿ ಪುಟ್ಟಗೌರಮ್ಮ, ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕಿ ತ್ರಿವೇಣಿ, ಮಕ್ಕಳ ಕಲ್ಯಾಣ ಸಮಿತಿಯ ಲತಾ, ಸ್ವಯಂ ಸೇವಾ ಸಂಸ್ಥೆಯ ಗಂಗಾಧರ್, ಜಿಲ್ಲಾ ನಿರೂಪಣಾಧಿಕಾರಿ ಮಂಜುಳ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...