ಬೀದರ್‌ | ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ : ಡಾ. ಎಸ್.ಎಸ್ ಮೈನಾಳೆ

Date:

Advertisements

ಕನ್ನಡ ಪುರಾತನ ಭಾಷೆಯಾಗಿದ್ದು, ದ್ರಾವಿಡ ಭಾಷೆಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕ್ರಿ.ಶ.450 ರಲ್ಲಿ ದೊರೆತ ಹಲ್ಮಿಡಿ ಶಾಸನ ಕನ್ನಡದ ಪ್ರಥಮ ಶಾಸನವಾಗಿದ್ದು, ಇದರಿಂದ ಕನ್ನಡ ನಾಡಿನ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸಿದೆ ಎಂದು ನಿವೃತ್ತ ಪ್ರಾಚಾರ್ಯಡಾ.ಎಸ್.ಎಸ್.ಮೈನಾಳೆ ಹೇಳಿದರು.

ಕಮಲನಗರ ಪಟ್ಟಣದ ಲತಾ ಮಂಗೇಶ್ಕರ್ ಕನ್ಯಾ ಪ್ರೌಢ ಶಾಲೆಯಲ್ಲಿ ಕರ್ನಾಟಕ 50ರ ಸಂಭ್ರಮ
ಘೋಷವಾಕ್ಯದೊಂದಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಕಾರ್ಯಕ್ರಮದಲ್ಲಿ ವಿಶೇಷ ಅವರು ಉಪನ್ಯಾಸ ನೀಡಿದರು.

“ಕನ್ನಡವೆಂದರೆ ನಮ್ಮ ಅಸ್ಮಿತೆ ಮತ್ತು ಸ್ವಾಭಿಮಾನ.ಕನ್ನಡ ನಾಡು ಶ್ರೀಗಂಧದ ಬೀಡು. ಅಚ್ಚ ಹಸಿರಿನ ಸುಂದರ ಬೆಟ್ಟ, ಸಾಧು ಸಂತರು, ದಾಸರು, ಶಿವಶರಣರು, ಕವಿಗಳು ಇರುವ ನಾಡು ನಮ್ಮದು. ಕನ್ನಡ ಭಾಷೆ, ನೆಲ, ಜಲ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದರು.

Advertisements

ಪ್ರಾಥಮಿಕ ಶಾಲಾ ಶಿಕ್ಷಕ್ಷರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ದೇಶದಲ್ಲಿ ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿರುವ ಮತ್ತು ಶಾಸ್ತ್ರೀಯ ಭಾಷೆಯಾಗಿರುವ ಕನ್ನಡ ಸಾಹಿತ್ಯಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ನಮ್ಮ ಭಾಷೆಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ” ಎಂದರು.

ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಮಾತನಾಡಿ, “ಮೈಸೂರು ರಾಜ್ಯವು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣವಾಗಿ ಇಂದಿಗೆ 50 ವರ್ಷ ಪೂರ್ಣಗೊಂಡಿದ್ದು, ಅದನ್ನು ಸ್ಮರಣೀಯವಾಗಿಸಲು ಕರ್ನಾಟಕ 50ರ ಸಂಭ್ರಮದಡಿ ಒಂದು ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ,
ಸಂಸ್ಕೃತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಶಾಲಾ ಕಾಲೇಜಿನ ಮಕ್ಕಳಿಗೆ ಅರಿವು ಮೂಡಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ರೂಪಿಸಿದೆ” ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಗುರು ರಾಜಕುಮಾರ ವಡಗಾವೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ತಾಲೂಕು ಉಪಾಧ್ಯಕ್ಷ ಧನರಾಜ ಭವರಾ, ಸಾಹಿತಿ ಸಂಗಮೇಶ್ವರ ಮುರ್ಕೆ, ಸಂಘಟನಾ ಕಾರ್ಯದರ್ಶಿ ವಿಶಾಲ ಮಹಾಜನ, ಸಂತೋಷ ಸುಲಾಕೆ, ರಮಾಕಾಂತ ಕಣಜೆ, ಅನಿಲ ಬಿರಾದಾರ, ದಿಲೀಪ ಸಂತಪುರೆ, ಸರಸ್ವತಿ ಮಹಾಜನ ಇತರರಿದ್ದರು.

ಈ ಸುದ್ದಿ ಓದಿದ್ದೀರಾ? ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಲಕ್ಷ್ಮೀ ಸ್ವಾಮಿ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಕಾವ್ಯಾಂಜಲಿ ಬನವಾಸೆ ಪ್ರಾರ್ಥನೆ ಗೀತೆ ಹಾಡಿದರು. ಕಸಾಪ ತಾಲೂಕು ಯುವ ಘಟಕದ ಅಧ್ಯಕ್ಷ ಬಂಟಿ ರಾಂಪುರೆ ಸ್ವಾಗತಿಸಿದರು. ಕೋಶಾಧ್ಯಕ್ಷ ಯಶವಂತ ಬಿರಾದಾರ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮಹಾದೇವ ಮಡಿವಾಳ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X