ಧಾರವಾಡ | ಬಿಆರ್‌ಟಿಎಸ್ ರಸ್ತೆಯಲ್ಲಿ ಖಾಸಗಿ ವಾಹನಗಳಿಗೂ ಅವಕಾಶ ಕಲ್ಪಿಸಿ: ಸಂಘಟನೆಗಳಿಂದ ಪ್ರತಿಭಟನೆ

Date:

ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಮಾರ್ಗಮದ್ಯೆ ಸಂಚರಿಸುವ ಚಿಗರಿ ಬಸ್ ಅರ್ಥಾತ್ ಬಿಆರ್‌ಟಿಎಸ್ ಯೋಜನೆಯು ಕೆಲವರಿಗೆ ಅನುಕೂಲವಾದರೆ ಇನ್ನು ಕೆಲವು ಅನಾನುಕೂಲವೆಂಬ ಧ್ವನಿಗಳು ಎಂದಿನಿಂದಲೂ ಕೇಳಿ ಬರುತ್ತಿವೆ.

- Advertisement -

ಬಿಆರ್‌ಟಿಎಸ್ ಯೋಜನೆಯ ಅವೈಜ್ಞಾನಿಕತೆ ವಿರೋಧಿಸಿ ಧಾರವಾಡ ಧ್ವನಿ ಎಂಬ ಪಕ್ಷಾತೀತ ಹೋರಾಟ ಸಂಘಟನೆಯೊಂದು ಬಿಗರಿ ಬಸ್ ಸಂಚರಿಸುವ ರಸ್ತೆಯಲ್ಲಿ, ಕೆಲ ಪ್ರದೇಶಗಳಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸೋಮವಾರ ಧಾರವಾಡದ ನವಲೂರು ಬ್ರಿಡ್ಜ್ ನಿಂದ ಹೊರಟು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡುವ ಮೂಲಕ ಒತ್ತಾಯ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹುಬ್ಬಳ್ಳಿ-ಧಾರವಾಡ ಮಹಾನಗರ ದಿನದಿಂದ‌ ದಿನಕ್ಕೆ ಬೆಳೆಯುತ್ತಿದೆ. ಅದರೊಂದಿಗೆ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಅವಳಿನಗರಗಳ ಮಾರ್ಗಮಧ್ಯದಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಬಿಆರ್‌ಟಿಎಸ್ ಯೋಜನೆ ಜಾರಿಯಾದ ನಂತರ ಬಿಗರಿ ಬಸ್‌ಗಳು ಸಂಚರಿಸಲು ಪ್ರತ್ಯೇಕ ರಸ್ತೆಯ ವ್ಯವಸ್ಥೆಯು ಇದೆ. ಚಿಗರಿ ಬಸ್ ಹೊರತುಪಡಿಸಿ ಖಾಸಗಿ ವಾಹನಗಳ ಸಂಚಾರಕ್ಕೆ ಈ ಪ್ರತ್ಯೇಕ ರಸ್ತೆಯಲ್ಲಿ ಅನುಮತಿ ನೀಡಿಲ್ಲ. ಹೀಗಾಗಿ ಖಾಸಗಿ ವಾಹನಗಳು ಚಿಗರಿ ರಸ್ತೆಯನ್ನು ಬಿಟ್ಟು ನಿಗದಿತ ರಸ್ತೆಯಲ್ಲಿ ಮಾತ್ರ ಸಂಚರಿಸಬೇಕಿದೆ. ಇದರ ಪರಿಣಾಮವಾಗಿ ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಿದರು.

ಬಸ್ 10

ಸಾರ್ವಜನಿಕ ರಸ್ತೆಗೆ ಹೋಲಿಸಿದರೆ ಚಿಗರಿ ಬಸ್ ಸಂಚರಿಸುವ ರಸ್ತಯು ಪ್ರತಿದಿನ ಶೇ. 95 ರಷ್ಟು ಖಾಲಿಯಾಗಿಯೇ ಇರುತ್ತದೆ. ಸಾರ್ವಜನಿಕ ರಸ್ತೆಯಲ್ಲಿ ದಿನಂಪ್ರತಿ ವಾಹನಗಳಿಂದ ಜನರು ಕಿಕ್ಕಿರಿದಿರುತ್ತಾರೆ. ಹೀಗಾಗಿ ಬಿಆರ್‌ಟಿಎಸ್ ರಸ್ತೆಯಲ್ಲಿ ಧಾರವಾಡದ ಜ್ಯುಬಿಲಿ ವೃತ್ತದಿಂದ ನವಲೂರಿನವರೆಗೆ, ಉಣಕಲ್‌ನಿಂದ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದವರೆಗೂ ಬೈಕ್, ಆಟೊ, ಕಾರು ಮತ್ತು ಲಘು ವಾಹನಗಳು ಸಂಚರಿಸಲು ಅನುಮತಿ ನೀಡಬೇಕು ಎಂದು ಧಾರವಾಡ ಧ್ವನಿ ಸಂಘಟನೆ ಸದಸ್ಯರು ಬಿಆರ್ ಟಿಎಸ್ ರಸ್ತೆಯಲ್ಲಿಯೇ ಪಾದಯಾತ್ರೆ ಮೂಲಕ ಘೋಷಣೆಯನ್ನು ಕೂಗಿದರು.

ಪಾದಯಾತ್ರೆ ನಡೆದಿದ್ದ ಸಂದರ್ಭದಲ್ಲಿ ಚಿಗರಿ ಬಸ್‌ ಮಧ್ಯೆ ಬಂದಿದ್ದಕ್ಕೆ ಆಕ್ರೋಶಗೊಂಡ ಹೋರಾಟಗಾರರು ಚಿಗರಿ ಬಸ್‌ಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿ, ಚಿಗರಿ ಬಸ್‌ಗೆ ಪೂಜೆ ಮಾಡಿ ತೆಂಗಿನಕಾಯಿ ಒಡೆದು ಆಕ್ರೋಶ ವ್ಯಕ್ತಪಡಿಸಿದರು.

‘ಯಾಲಕ್ಕಿ ಶೆಟ್ಟರ್ ಕಾಲೊನಿ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ’ ಭಿತ್ತಿಫಲಕಗಳನ್ನು ಕೈಯಲ್ಲಿ ಹಿಡಿದು ಬಿಆರ್ ಟಿಎಸ್ ಯೋಜನೆಯ ವಿರುದ್ಧ ಘೋಷಣೆ ಕೂಗಿದರು. ಒಟ್ಟಾರೆ ಬಿಆರ್‌ಟಿಎಸ್ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಒಂದು ಸಮಿತಿ ರಚಿಸಬೇಕು. ಆ ಸಮಿತಿಯಲ್ಲಿ ಸಾರ್ವಜನಿಕರನ್ನೂ ಸೇರಿಸಿ ಶೀಘ್ರ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕು ಎಂದು ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಧಾರವಾಡ ಧ್ವನಿ ಸಂಘಟನೆ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸುರಕ್ಷತಾ ಸಂಘ ಹಾಗೂ ಜನತಾ ಶಿಕ್ಷಣ ಸಮಿತಿ, ಜೆಎಸ್‌ಎಸ್ ಸಂಸ್ಥೆ ಈ ಪಾದಯಾತ್ರೆಗೆ ಬೆಂಬಲ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...