ಧಾರವಾಡ | ವಿದ್ಯುತ್ ದರ ಹೆಚ್ಚಳ; ಕೈಗಾರಿಕಾ ಉದ್ಯಮಿಗಳ ಸಂಘ ಖಂಡನೆ

Date:

ವಿದ್ಯುತ್ ಶುಲ್ಕ ಗಣನೀಯ ಹೆಚ್ಚಳವನ್ನು ವಿರೋಧಿಸಿ ಧಾರವಾಡ ಬೆಳವಣಿಗೆ ಕೇಂದ್ರ ಮತ್ತು ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಉದ್ಯಮಿ ಕೇಂದ್ರದ ಸದಸ್ಯ ಸಿ ಎಸ್ ಸಿದ್ಧರಾಮಗೌಡ ಪಾಟೀಲ್ ಮಾತನಾಡಿ, ಸರ್ಕಾರ ರಚನೆಯಾಗಿ ಒಂದು ತಿಂಗಳಿನಲ್ಲೆ ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅತೀವ ಪೆಟ್ಟು ಬೀಳಲಿದೆ. ಈ ಕಾರಣದಿಂದಾಗಿ ಕೈಗಾರಿಕೆಗಳನ್ನು ಮುಚ್ಚುವ ಕಾಲ ಬರಬಹುದು. ಇದರಿಂದ ಸರ್ಕಾರದ ಕೈಗಾರಿಕಾ ವಿರೋಧಿ ನೀತಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳ ಆಗುವ ಪರಿಣಾಮಗಳ ಕುರಿತು ಕೂಡಲೆ ಸರ್ಕಾರವು ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಬೇಕು. ವಿದ್ಯುತ್‌ ದರವನ್ನು ಕೂಡಲೇ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ನೂತನ ಸರ್ಕಾರದ ವಿದ್ಯುತ್ ದರ ಹೆಚ್ಚಳದ ನಡೆಯನ್ನು ಖಂಡಿಸಿ ದಿಕ್ಕಾರ ಕೂಗಿದರು. ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...