ತಾಳಿಕೋಟೆ | ಸಂಗೀತ ಪರೀಕ್ಷಾ ಕೇಂದ್ರ ರದ್ದು ಖಂಡಿಸಿ ಪ್ರತಿಭಟನೆ: ಮರು ಆರಂಭಕ್ಕೆ ಒತ್ತಾಯ

Date:

Advertisements

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಖಾಸ್ಗತೇಶ್ವರ ಸಂಗೀತ ಮಹಾ ವಿದ್ಯಾಲಯದಲ್ಲಿ 40 ವರ್ಷಗಳಿಂದ ನಡೆಯುತ್ತಿರುವ ಹಿಂದುಸ್ತಾನಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷಾ ಕೇಂದ್ರವನ್ನು ರದ್ದುಗೊಳಿಸಿರುವುದನ್ನು ಖಂಡಿಸಿದ ವಿವಿಧ ಸಂಗೀತ ಶಾಲೆಯ ಮುಖ್ಯಸ್ಥರು, ಅದನ್ನು ಮತ್ತೆ ಪುನ‌ರ್ ಆರಂಭಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

ನಂತರ ತಹಶೀಲ್ದಾ‌ರ್ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ, ಸಂಗೀತ ಮತ್ತು ಪ್ರಾದೇಶಿಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಕುಲಪತಿಗಳಿಗೆ ಮನವಿ ಸಲ್ಲಿಸಿದರು.

1001189222

ಕಳೆದ 40 ವರ್ಷಗಳಿಂದ ಈ ಭಾಗದಲ್ಲಿರುವ ಅಂಧರು, ಅನಾಥರು ಹಾಗೂ ನಿರ್ಗತಿಕರಿಗೆ ಊಟ ವಸತಿ ವ್ಯವಸ್ಥೆ ಕಲ್ಪಿಸಿ ಸಂಗೀತ ವಿದ್ಯೆಯನ್ನು ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಖಾಸ್ಗತೇಶ್ವರ ಸಂಗೀತ ಮಹಾವಿದ್ಯಾಲಯದಲ್ಲಿ ನಡೆಯುತ್ತಿದ್ದ ಪರೀಕ್ಷಾ ಕೇಂದ್ರವನ್ನು ಏಕಾಏಕಿ ರದ್ದುಗೊಳಿಸಿದ್ದು ಖಂಡನೀಯ ಎಂದರು.

Advertisements

ಪ್ರತಿಭಟನೆಯಲ್ಲಿ ಖಾಸ್ಗತೇಶ್ವರ ಮಠದ ಆಡಳಿತಾಧಿಕಾರಿ ಮುರುಘೇಶ ವಿರಕ್ತ ಮಠ, ಆದಯ್ಯ ಹಿರೇಮಠ, ದಿಲೀಪ್ ಸಿಂಗ್ ಹಜೇರಿ, ಸಂಗಮೇಶ ಶಿವಣಗಿ ಮುದ್ದೇಬಿಹಾಳ, ಕಾಶೀನಾಥ್ ಕಾರಗನೂರು. ವಿನೋದ ಕುಮಾರ ಚಿಕ್ಕಮಠ ಗೋಪಾಲ್ ಕಟ್ಟಿಮನಿ, ದೇವರಾಜ್ ಯರಿಕ್ಯಾಳ, ಅಮರೇಶ್ ಇಂಗಳಗಿ, ಈಶ್ವರ್ ಬಡಿಗೇರ, ನಿಂಗಣ್ಣ ಪತ್ತಾರ ಕೊಡೆಕಲ್, ಪ್ರವೀಣ ಪತ್ತಾರ ಹುಣಸಗಿ, ಗುರು ಬಿರಾದಾರ ಹುಣಸಗಿ, ಬಸವರಾಜ್ ಸಾವಳಗಿ ಮುದ್ದೇಬಿಹಾಳ, ಶ್ವೇತಾ ಯರಗಲ್, ರಿಯಾಜ್ ಮುಲ್ಲಾ, ಪರುಶುರಾಮ್ ಚಳ್ಳಗಿ, ನಾಗರಾಜ್ ಹೂಗಾರ, ಸುರೇಶ್ ಹೂಗಾರ, ಯಲ್ಲಪ್ಪ ವೀರೇಶ್ ಬಡಿಗೇರ, ಹನುಮಂತ ಭಂಟನೂರ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X