ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

Date:

  • ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ರಸ್ತೆ ತಡೆ
  • ನಂದಿನಿ ಹಾಲು, ಉತ್ಪನ್ನಗಳು ಕನ್ನಡಿಗರ ಅಸ್ಮಿತೆ

ಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್‌ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ ರಂ ಶ್ರೀನಿವಾಸಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಕರ್ನಾಟಕದ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ನಮ್ಮ ಸ್ವಾಭಿಮಾನದ ಸಂಕೇತ ಇದು. ಈ ನಂದಿನಿ ಹಾಲಿನ ಉತ್ಪನ್ನಗಳ ಮೇಲೆ ರಾಜ್ಯದಲ್ಲಿ ಲಕ್ಷಾಂತರ ರೈತರು, ಅವರು ಕುಟುಂಬ ಅವಲಂಬಿತರಾಗಿದ್ದಾರೆ” ಎಂದಿದ್ದಾರೆ.

“ನಂದಿನಿಯನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡಿದರೆ ಲಕ್ಷಾಂತರ ಜನರು ಬೀದಿಪಾಲಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಲೀನ ಮಾಡಬಾರದು. ಒಂದು ವೇಳೆ ಮಾಡಿದರೆ ರಾಜ್ಯದಾದ್ಯಂತ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಸ್ತೆ ತಡೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಾ ಮರುಳಿ, ಚಾ ವೆಂ ರಾಜ್‌ಗೋಪಾಲ್, ಪಣ್ಯದಹುಂಡಿ ರಾಜು, ಚಾ ರಾ ಕುಮಾರ್, ಗು ಪುರುಷೋತ್ತಮ್, ಮೂರ್ತಿ, ಶಿವರುದ್ರಸ್ವಾಮಿ, ಬಸವಣ್ಣ, ನಂಜಂಡಸ್ವಾಮಿ, ರವಿಚಂದ್ರ ಪ್ರಸಾದ್‌ಕಹಳೆ, ಅಭಿಷೇಕ್, ಸಂಜಯ್, ಶಿವಣ್ಣ, ತಾಂಡವಮೂರ್ತಿ ಹಾಗೂ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಿಜಯನಗರ ಸಾಮ್ರಾಜ್ಯದ ಮೂಲ ನೆಲೆ ಕುಮ್ಮಟದುರ್ಗ; ಶಾಸಕ ಗಾಲಿ ಜನಾರ್ದನರೆಡ್ಡಿ

ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ...

ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...