ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ, ಮೇ 20ರಂದು ಜನಾಗ್ರಹ ಸಮಾವೇಶ: ಬಡಗಲಪುರ ನಾಗೇಂದ್ರ

Date:

Advertisements

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಮೇ 20ರಂದು ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು, “ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ವಿದ್ಯುತ್ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ” ಎಂದು ಆರೋಪಿಸಿದರು.

“ಈ ಸಮಾವೇಶದಲ್ಲಿ ರಾಜ್ಯದ ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖ 250 ಕಾರ್ಯಕರ್ತರು ಭಾಗವಹಿಸುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ” ಎಂದು ಹೇಳಿದರು.

Advertisements

“ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೋಟಿಫಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೆ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲ ಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ನಡೆಸಿ ಒಕ್ಕಲೆಬ್ಬಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಛೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಅಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ ಈ ಎಲ್ಲ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ” ಎಂದರು.

“ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೆ ಮತ್ತೆ ಹೊಸ ಹೊಸ ಭೂಸ್ವಾಧೀನವನ್ನು ರಿಯಲ್ ಎಸ್ಟೇಟ್ ಹಿತಾಸಕ್ತಿ ರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು, ಕೃಷಿ ಪಂಪಸೆಟ್‌ಗಳಿಗೂ ಪ್ರೀಪೇಯ್ಡ್ ಮೀಟರ್ ಅಳವಡಿಕೆಗೆ ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿದ್ದೀರಾ? ಮಂಡ್ಯ | ಸಾರ್ವಜನಿಕ ಕಚೇರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ; ಸ್ವಯಂ ಪ್ರೇರಿತ ಪ್ರಕರಣ ದಾಖಲು

“ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗಿಕರಿಸಲಾಗುತ್ತಿದ್ದು, ಹತ್ತು ತಿಂಗಳ ಅತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ, ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು” ಎಂದು ಸಂಯುಕ್ತ ಹೋರಾಟ ಕರ್ನಾಟಕದ ಪರವಾಗಿ ಬಡಗಲಪುರ ನಾಗೇಂದ್ರ ಅವರು ತಿಳಿಸಿದರು.

ಈ ವೇಳೆ ಸಂಯೋಜಕ ಟಿ ಯಶವಂತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X