ಬೀದರ್ |‌ ಕೋಲಿ ಸಮಾಜದ ಯುವತಿ ಕೊಲೆ; ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಆಗ್ರಹ

Date:

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದ ಕೋಲಿ ಸಮಾಜದ ಭಾಗ್ಯಶ್ರೀ ಯುವತಿಯ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮನ್ನಾಏಖೇಳ್ಳಿಯಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು.

- Advertisement -

ಬೀದರ್‌ ದಕ್ಷಿಣ ಟೋಕರಿ ಕೋಲಿ ಸಮಾಜದಿಂದ ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳ್ಳಿಯ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರ ಭಾಗ್ಯಶ್ರೀ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಘೋಷಣೆ ಕೂಗಿದರು. ಬಳಿಕ ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್‌ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ʼಮಗಳ ಬಗ್ಗೆ ಹಲವು ಕನಸುಗಳನ್ನು ಕಂಡಿದ್ದ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರಿಗೆ ತುಂಬಲಾರದಷ್ಟು ನಷ್ಟವಾಗಿದೆ. ಕೂಡಲೇ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು ಭಾಗ್ಯಶ್ರೀ ಪಾಲಕರಿಗೆ ಭೇಟಿ ನೀಡಿ ಸಾಂತ್ವನ ಹೇಳಬೇಕು. ಕುಟುಂಬಕ್ಕೆ 50 ಲಕ್ಷ ರೂಪಾಯಿ, ಮನೆ ಹಾಗೂ 5 ಎಕರೆ ಜಮೀನು ಹಾಗೂ ಸರ್ಕಾರಿ ಹುದ್ದೆ ಕೊಟ್ಟು ಸರ್ಕಾರ ಮಾನವೀಯತೆ ತೋರಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

WhatsApp Image 2024 09 11 at 2.01.14 PM
ಮನ್ನಾಏಖೇಳ್ಳಿಯಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ʼಯುವತಿಯ ತಲೆ ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದು ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟು ಹೋದ ಕಾರಣ ಇಂತಹ ಅಮಾನವೀಯ ಕೊಲೆ ರಾಜಾರೋಷವಾಗಿ ನಡೆಯುತ್ತವೆ. ಈಗಲಾದರೂ ಸರ್ಕಾರ ಎಚ್ಚೆತುಕೊಂಡ ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ಜಾರಿಗೆ ತರಬೇಕು. ಭಾಗ್ಯಶ್ರೀ ಕೊಲೆಯನ್ನು ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕುʼ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಟೋಕರಿ ಕೋಲಿ ಸಮಾಜದ ಅಧ್ಯಕ್ಷ ಸನ್ಮುಖಪ್ಪಾ ವಾಲೀಕರ್‌, ಪ್ರಧಾನ ಕಾರ್ಯದರ್ಶಿ ಗೋವಿಂದ ಜಾಲಿ, ದಲಿತ ಸೇನೆ ಸಂಘಟನೆಯ ಅನೀಲ ಮುದಾಳೆ, ಮುಖಂಡರಾದ ಪುಂಡಲಿಕಪ್ಪ ನಿಂಗನವಾಡ್‌, ಮಾರುತಿ ಮಾಸ್ಟರ್‌, ಶರಣಪ್ಪಾ ಅಣ್ಣಾಜಿ, ಅಶೋಕ ಕಾಗೆ, ಸಂತೋಷ ಹಳ್ಳಿಖೇಡಕರ್‌, ಶಕುಂತಲಾ ಬಿರಾದರ್‌ ಸಂತೋಷಿ ನಿಡವಂಚಾ ಸೇರಿದಂತೆ ವಿವಿಧ ಸಂಟಟನೆಗಳ ಪ್ರಮುಖರು, ಸ್ಥಳೀಯರು ಪಾಲ್ಗೊಂಡಿದ್ದರು.

ಕಲಬುರಗಿ : ಯುವತಿ ಕೊಲೆ ಖಂಡಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ :

ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದ ಯುವತಿ ಭಾಗ್ಯಶ್ರೀಯ ಕೊಲೆ ಕೃತ್ಯ ಖಂಡಿಸಿ ಕಿಡಗೇಡಿಗಳನ್ನು ಗಲ್ಲಿಗೇರಿಸಿ, ರಾಜ್ಯ ಸರ್ಕಾರವು ಮಹಿಳಾ ರಕ್ಷಣಾ ಯೋಜನೆಯನ್ನು ಜಾರಿಗೆ ತರಲು ಒತ್ತಾಯಿಸಿ ಚಿಂಚೋಳಿ ತಾಲ್ಲೂಕಿನ ಚಂದಾಪುರ ಪಟ್ಟಣದ ತಾಂಡೂರ ಕ್ರಾಸ್‌ನಿಂದ ತಹಸೀಲ್ ಕಚೇರಿವರೆಗೆ ಪ್ರತಿಭಟಿನಾ ಮೆರವಣಿಗೆ ನಡೆಸಲಾಯಿತು.

ತಾಲ್ಲೂಕು ಕೋಲಿ ಸಮಾಜ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಬೇಡಿಕೆ ಪತ್ರವನ್ನು ಸಲ್ಲಿಸಿದರು.

WhatsApp Image 2024 09 11 at 1.56.10 PM 1
ಚಿಂಚೋಳಿಯಲ್ಲಿ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಪ್ತತಿಭಟನೆ ನಡೆಯಿತು.

ʼಶರಣರ ನಾಡಿನಲ್ಲಿ ಇಂತಹ ಹೇಯ ಕೃತ್ಯ ನಡೆದಿರುವುದು ಇಡೀ ಮನುಕುಲಕ್ಕೆ ನಾಚಿಕೆಯಾಗುವಂತದ್ದು, ಮೃತ ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು, ಕುಟುಂಬಸ್ಥರಿಗೆ ಸರ್ಕಾರಿ ನೌಕರಿ, ಹಾಗೂ ಮೃತ ಬಾಲಕಿಯ ಕುಟುಂಬಸ್ಥರಿಗೆ ಸೂಕ್ತ ರಕ್ಷಣೆಯನ್ನು ಒದಗಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

ಪ್ರತಿಭಟನೆಯಲ್ಲಿ ಪ್ರಮುಖರಾದ ಗೋಪಾಲರಾವ ಕಟ್ಟಿಮನಿ, ಲಕ್ಷ್ಮಣ ಆವುಂಟಿ, ಹಣಮಂತ ಪೂಜಾರಿ, ಮಾರುತಿ ಗಂಜಗಿರಿ, ಶರಣು ಪಾಟೀಲ ಮೊತಕಪಳ್ಳಿ,ರೇವಣಸಿದ್ದಪ್ಪ ಅಣಕಲ್‌, ಗಣಪತರಾವ, ಗುಂಡಪ್ಪ ಅವರಾದಿ, ಶರಣು ನಾಟಿಕಾರ, ಗೋಪಾಲ ಗಾರಂಪಳ್ಳಿ, ಸುರೇಶ ದೇಶಪಾಂಡೆ, ಆನಂದ ಹಿತ್ತಲ, ರಾಜು ತೋಡಿ, ಮೌನೇಶ ಮುಸ್ತರಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...