ಯಾದಗಿರಿ | ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

Date:

Advertisements
  • ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ
  • ಬಿಜೆಪಿ ಸಂಸದ ಬ್ರಿಜ್ ಭೂಷಣ್‌ನನ್ನು ಬಂಧಿಸಿ ಕಾನೂನು ಕ್ರಮಕ್ಕೆ ಆಗ್ರಹ

ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿ ಪಟುಗಳು ಸೇರಿದಂತೆ ಹಲವರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಆರೋಪಿ ಸ್ಥಾನದಲ್ಲಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫೇಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ ಚರಣ್ ಸಿಂಗ್‌ನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

‘ಬೇಟಿ ಬಚಾವೋ ಬೇಟಿ ಪಡಾವೋ’ ಎಂದು ಹೇಳುವ ಪ್ರಧಾನಿ, ದಿಲ್ಲಿಯಲ್ಲೇ ಹಲವು ತಿಂಗಳಿನಿಂದ ಹೋರಾಟ ನಿರತ ಮಹಿಳಾ ಕುಸ್ತಿ ಪಟುಗಳ ಅಹವಾಲು ಕೇಳದೆ, ತಮ್ಮ ಸಂಸದ ಹಾಗೂ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಕ್ಷಣೆಗೆ ನಿಂತಿರುವುದು ಖಂಡನೀಯ ಎಂದು ಕಿಡಿಕಾರಿದರು.

Advertisements

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಇಂದು ಎಲ್ಲ ಕ್ಷೇತ್ರವನ್ನು ವ್ಯಾಪಿಸಿಕೊಂಡಿದೆ. ದೇಶಕ್ಕೆ ಪದಕ ಗೆದ್ದು ದೇಶದ ಹಿರಿಮೆ ಹೆಚ್ಚಿಸಿರುವ ಹೆಮ್ಮೆಯ ಮಹಿಳಾ ಕುಸ್ತಿ ಪಟುಗಳಿಗೆ ಈ ಗತಿಯಾದರೆ ಇನ್ನು ಸಾಮಾನ್ಯ ಮಹಿಳೆಯರ ಪರಿಸ್ಥಿತಿ ಏನು? ತಮ್ಮ ಬೇಡಿಕೆ ಈಡೇರಿಕೆಗೆ ಕಟಿಬದ್ಧವಾಗಿ ಹೋರಾಟ ಮಾಡುತ್ತಿರುವ ಕೆಚ್ಚೆದೆಯ ಮಹಿಳೆಯ ಜೊತೆ ಇಡೀ ದೇಶವೇ ಬೆಂಬಲ ನೀಡಿದ್ದು, ಸರ್ಕಾರ ಎಚ್ಚೆತ್ತು ಆರೋಪಿ ಮಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಅಶ್ವತ್ಥ ನಾರಾಯಣ ವಿರುದ್ಧದ ಎಫ್‌ಐಆರ್‌ಗೆ ನಾಲ್ಕು ವಾರ ತಡೆ ನೀಡಿದ ಹೈಕೋರ್ಟ್‌

ಮಹಿಳಾ ಕುಸ್ತಿ ಪಟುಗಳ ಮೇಲೆ ಸರ್ಕಾರ ನಡೆಸಿದ ಪೊಲೀಸ್ ದೌರ್ಜನ್ಯ ಅತ್ಯಂತ ಖಂಡನೀಯ, ಪದಕ ಗೆದ್ದಾಗ ಶುಭಕೋರಿ ಪ್ರಚಾರ ಗಿಟ್ಟಿಸಿಕೊಂಡ ಮಾನ್ಯ ಪ್ರಧಾನ ಮಂತ್ರಿಗಳು ಇಂದು ಪ್ರಜಾಪ್ರಭುತ್ವದ ಹೆಬ್ಬಾಗಿಲು ಎಂದು ಹೇಳಿ ಹೊಸ ಸಂಸತ್ ಭವನ ಉದ್ಘಾಟಿಸುವಲ್ಲಿ ಇರುವ ಉತ್ಸಾಹ ಕುಸ್ತಿ ಪಟುಗಳ ಬೇಡಿಕೆಗಳನ್ನು ಆಲಿಸುವಲ್ಲಿ ಇರದೇ ಇರುವುದು ವಿಷಾದನೀಯ ಆದ್ದರಿಂದ ಕೇಂದ್ರ ಸರ್ಕಾರ ಈ ಕೂಡಲೇ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮುಖಂಡರಾದ ರಾಹುಲ್ ಕೊಲ್ಲೂರಕರ್, ಕಾಶೀನಾಥ್ ನಾಟೀಕಾರ, ದೂ ಸಾಬಣ್ಣ ಕೆ, ಭೀಮಾಶಂಕರ, ಮರೆಪ್ಪ ಗುರುಸುಣಗಿ, ಹಣಮಂತನಾಯಕ, ಮಲ್ಲಿಕಾರ್ಜುನ ಕುಮನೂರ, ಮಲ್ಲಪ್ಪ ವಗ್ಗನೋರಿ, ಹಾಸ, ಸದಸ್ಯರಾದ ಸಾಯಬಣ್ಣ ನಾಟೀಕಾರ, ಹಂಪಯ್ಯ ಶೇಂಗಿನೋರ, ಮೌನೇಶ ನಾಟೀಕಾರ, ಭೀಮಪ್ಪ ಗೌಂಡಿ ಕ್ಯಾತ್ನಾಳ, ಎಸ್ ಎಚ್ ಹಂಚಿನಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X