ಮೈಸೂರು | ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ-ಮನವಿ ಸಲ್ಲಿಕೆ

Date:

ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ವತಿಯಿಂದ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಸಂಘದ ಮುಖಂಡರು ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎರಡು ತಿಂಗಳ ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಎರಡು ತಿಂಗಳ ಗೌರವಧನ ಇನ್ನೂ ಬಾಕಿಯಿದ್ದು, ವೇತನವನ್ನು ಪ್ರತೀ ತಿಂಗಳು ನಿಗದಿತ ಸಮಯಕ್ಕೆ ಬಿಡುಗಡೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಿದರು. ಕಾರ್ಯಕರ್ತೆಯರು ನಿರ್ವಹಿಸಿದ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹಧನ ದೊರೆಯುತ್ತಿಲ್ಲ ಹಾಗೂ ಟಿಬಿ, ಕುಷ್ಠರೋಗ, ಟಿಬಿಐ, ಎನ್‌ಸಿಡಿ ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಹಣವೂ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು (ಎಂಎಚ್ & ಆಶಾ) 2026ರ ಏಪ್ರಿಲ್ 21ರ ಪತ್ರದಂತೆ ಆಶಾ ನಿಧಿ ತಂತ್ರಾಂಶದಲ್ಲಿ ಒಂಬತ್ತು ವಿವಿಧ ಸೇವೆಗಳನ್ನು ನಿಷ್ಕ್ರಿಯಗೊಳಿಸಲು ಮುಂದಾಗಿರುವುದು ಕಾರ್ಯಕರ್ತೆಯರ ಆದಾಯದ ಮೇಲೆ ಪರಿಣಾಮ ಬೀರುವುದಾಗಿ ಆತಂಕ ವ್ಯಕ್ತಪಡಿಸಿದರು. ಇದರಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಗೆ ತಿಂಗಳಿಗೆ ಸುಮಾರು ₹1,000ರವರೆಗೆ ಪ್ರೋತ್ಸಾಹಧನ ನಷ್ಟವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಈ ಸೇವೆಗಳು ತಾಯಿ-ಮಗು ಆರೋಗ್ಯ ರಕ್ಷಣೆ ಹಾಗೂ ಗ್ರಾಮೀಣ ಬಡಜನರ ಆರೋಗ್ಯ ಸೇವೆಗಳಿಗೆ ಅತ್ಯಂತ ಅಗತ್ಯವಾಗಿದ್ದು, ಅವುಗಳನ್ನು ಸ್ಥಗಿತಗೊಳಿಸಿದರೆ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಅಲ್ಲದೆ, ಆಶಾ ಕಾರ್ಯಕರ್ತೆಯರಿಂದ ವಿವಿಧ ಆನ್‌ಲೈನ್ ಆ್ಯಪ್‌ಗಳಲ್ಲಿ ದಾಖಲೆಗಳನ್ನು ಮಾಡಿಸುವ ಪದ್ಧತಿಯನ್ನು ಕೈಬಿಡಬೇಕು ಹಾಗೂ ಮೌಲ್ಯಮಾಪನದ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಂಘವು ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಬಾಕಿ ಇರುವ ಗೌರವಧನ ಮತ್ತು ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡುವುದು, ಹಲವು ವರ್ಷಗಳಿಂದ ಬಾಕಿ ಇರುವ ವಿವಿಧ ಯೋಜನೆಗಳ ಹಣವನ್ನು ಪಾವತಿಸುವುದು, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಇಡಿಗಂಟು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದೆ.

ಇದೇ ವೇಳೆ, 2025ರ ಜನವರಿಯಲ್ಲಿ ಮುಖ್ಯಮಂತ್ರಿ ಘೋಷಿಸಿದಂತೆ ಕೇಂದ್ರದ ಪ್ರೋತ್ಸಾಹಧನ ಹಾಗೂ ರಾಜ್ಯದ ಗೌರವಧನವನ್ನು ಒಟ್ಟುಗೂಡಿಸಿ ಕನಿಷ್ಠ ಮಾಸಿಕ ₹10,000 ಗೌರವಧನ ನಿಗದಿಪಡಿಸಬೇಕು. ಜೊತೆಗೆ 2025ರ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ತಿಂಗಳಿಗೆ ₹1,000 ಗೌರವಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಮೇಲಿನ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಂಘದ ಪದಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದಲ್ಲಿ ಕುಂದುಕೊರತೆ ನಿವಾರಣಾ ಸಭೆಯನ್ನು ತಕ್ಷಣ ಕರೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಮಳೆ ಕೊರತೆ: ಕಾಫಿ, ಮೆಣಸು ಇಳುವರಿ ಕುಂಠಿತ, ರೈತರಿಗೆ ಆರ್ಥಿಕ ನಷ್ಟ

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಭಾಗ್ಯ, ಸಂಘದ ಗೌರವಾಧ್ಯಕ್ಷೆ ಪಿ.ಎಸ್. ಸಂಧ್ಯಾ, ಪ್ರೊ. ಹೆಚ್.ಎಂ. ಹೇಮಲತಾ, ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಜಿ.ಎಸ್. ಸೀಮಾ, ಹೇಮಾ, ಮಣಿಲಾ, ಶಾಂತ, ಕೋಮಲ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...