ಮೈಸೂರು | ಮಾರ್ಚ್.4ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ: ದೇವಗಳ್ಳಿ ಸೋಮಶೇಖರ್

Date:

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮಿನಾರಾಯಣ ನಾಗವಾರ ಸ್ಥಾಪಿತ) ರಾಜ್ಯ ಸಂಘಟನಾ ಕಾರ್ಯದರ್ಶಿ ದೇವಗಳ್ಳಿ ಸೋಮಶೇಖರ್ ಮೈಸೂರು ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒಳಮೀಸಲಾತಿ ಹಾಗೂ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಮಾರ್ಚ್.4ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ, ಹಕ್ಕೊತ್ತಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.

- Advertisement -

ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಕಳಿಸಿಕೊಡುವಂತೆ ಕೋರಲಾಗುವುದು. ಹಾಗೆಯೇ, ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಕಾರ್ಯಕರ್ತರು ನೇರವಾಗಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಒಳಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನಡೆಸಿರುವ ಅವೈಜ್ಞಾನಿಕ ರೋಸ್ಟರ್ ಬಿಂದುವಿನಿಂದಾಗಿ ನೇಮಕಾತಿಗಳಲಿ ‘ಬಿ’ ಮತ್ತು ‘ಸಿ’ ವರ್ಗಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಸರಿಪಡಿಸಬೇಕು. ರಾಜ್ಯದಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಭೂರಹಿತ ಬಡವರಿಗೆ ಕೂಡಲೇ ಸಾಗುವಳಿ ಹಕ್ಕುಪತ್ರ ಹಾಗೂ ಅವಕಾಶ ವಂಚಿತರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಅಲೆಮಾರಿ ಸಮುದಾಯ ಮತ್ತು ಪೌರ ಕಾರ್ಮಿಕ ವರ್ಗಕ್ಕೆ ಪ್ರತ್ಯೇಕವಾಗಿ ಮೀಸಲಾತಿ ನಿಗದಿಪಡಿಸಬೇಕು. ಎಸ್ಎಸ್ಪಿ-ಟಿಎಸ್ಪಿ ಹಣವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಂಡಿದ್ದು ಸರಿಸುಮಾರು ₹45 ಸಾವಿರ ಕೋಟಿ ರೂಪಾಯಿ ಹಣವನ್ನು ಗ್ಯಾರೆಂಟಿ ಯೋಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಂಡಿದೆ. ಮೂಲ ಉದ್ದೇಶಕ್ಕೆ ಮೀಸಲಿರಿಸಿದ್ದ ಹಣ ಬೇರೆಯದಕ್ಕೆ ಬಳಕೆ ಮಾಡಿರುವುದು ಖಂಡನಿಯ ಹಾಗೂ ಕಾಯ್ದೆ ದುರುಪಯೋಗವಾಗಿರುತ್ತದೆ.

ಎಸ್ಸಿ, ಎಸ್ಟಿ ಸಮುದಾಯಗಳ ತಲಾ ಆದಾಯ ಮಿತಿಯನ್ನು ₹2.5 ಲಕ್ಷ ರೂಪಾಯಿಯಿಂದ ₹15 ಲಕ್ಷ ರೂಪಾಯಿಗೆ ಏರಿಕೆ ಮಾಡಬೇಕು. ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಖಾಯಂ ಪ್ರಾಧ್ಯಪಕರನ್ನು ನೇಮಕಗೊಳಿಸಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರನ್ನು ಒದಗಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಬೇಕೆಂಬ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯುಗಧರ್ಮ | ಪ್ರಾಬಲ್ಯವನ್ನು ತಿರಸ್ಕರಿಸುವುದು ಭಾರತೀಯ ಒಕ್ಕೂಟದ ಧರ್ಮ

ಪತ್ರಿಕಾಗೋಷ್ಠಿಯಲ್ಲಿ ತಳೂರು ಪ್ರಸನ್ನ, ರಾಜಶೇಖರ ಕೋಟೆ, ಎಸ್ ಆರ್ ಎಸ್ ಮಂಜು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...