ಮೈಸೂರು | ವಾಣಿಜ್ಯ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ–ಯುವ ಕಾಂಗ್ರೆಸ್ ಆಕ್ರೋಶ

Date:

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹993ಕ್ಕೆ ಏರಿಸಿರುವುದು ಸಣ್ಣ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಹಾಗೂ ಸಾಮಾನ್ಯ ಜನರ ಮೇಲೆ ಮತ್ತೊಂದು ಭಾರೀ ಹೊರೆ ಆಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ನಾಗೇಶ್ ಕರಿಯಪ್ಪ ಮಾತನಾಡಿ, ನಿರಂತರ ಬೆಲೆ ಏರಿಕೆಗಳಿಂದ ಸಣ್ಣ ಉದ್ಯಮಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಊಟದ ದರ ಹೆಚ್ಚಳಕ್ಕೂ ಕಾರಣವಾಗುತ್ತಿದೆ. ಇದರಿಂದ ಸಾಮಾನ್ಯ ಜನರ ಜೀವನ ಮತ್ತಷ್ಟು ಕಷ್ಟಕರವಾಗುತ್ತಿದೆ ಎಂದು ಹೇಳಿದರು. ಸರ್ಕಾರವು ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದು, ಬೆಲೆ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ತೆರಿಗೆಗಳ ಭಾರವೇ ಇಂತಹ ಅನಿಯಂತ್ರಿತ ಬೆಲೆ ಏರಿಕೆಗಳಿಗೆ ಕಾರಣವಾಗಿದ್ದು, ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರತಿಭಟನಾಕಾರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮಂಡಿಸಿದರು. ವಾಣಿಜ್ಯ ಗ್ಯಾಸ್ ಸಿಲಿಂಡರ್ ಮೇಲಿನ ಜಿಎಸ್ಟಿ ಹಾಗೂ ಇತರ ತೆರಿಗೆಗಳನ್ನು ತಕ್ಷಣ ಕಡಿಮೆ ಮಾಡಬೇಕು, ಸಣ್ಣ ವ್ಯಾಪಾರಿಗಳಿಗೆ ಸಬ್ಸಿಡಿ ನೀಡಬೇಕು ಹಾಗೂ ಗ್ಯಾಸ್ ಬೆಲೆ ಸ್ಥಿರಗೊಳಿಸಲು ಸ್ಪಷ್ಟ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರದಲ್ಲಿ ಕಾಗದರಹಿತ ನೋಂದಣಿಗೆ ಚಾಲನೆ: ಕಾವೇರಿ 2.0 ಪೋರ್ಟಲ್ ಮೂಲಕ ನೂತನ ವ್ಯವಸ್ಥೆ ಆರಂಭ

‘ಬೆಲೆ ಏರಿಕೆ ನಿಲ್ಲಿಸಿ–ಜನರ ಬದುಕು ಉಳಿಸಿ’ ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?

ಪ್ರತಿಭಟನೆಯಲ್ಲಿ ಕೃಷ್ಣರಾಜ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಆರ್. ಹೊಯ್ಸಳ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೀರ್ ಕುಸ್ರು, ಗ್ರಾಮಾಂತರ ಉಪಾಧ್ಯಕ್ಷ ಶಶಾಂಕ್ ಗೌಡ, ರೋಹಿತ್ ಸಿಂಗ್, ವಿವೇಕ್, ಕರಣ್, ಶಾರುಖ್, ಸಮರ್ಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...