ಬೀದರ್‌ | ಗುತ್ತಿಗೆದಾರ ಸಚಿನ್‌ ಪಾಂಚಾಳ್ ನಿಗೂಢ ಸಾವಿನ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Date:

ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ ಗ್ರಾಮದ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್ ನಿಗೂಢ ಸಾವಿನ ಬಗ್ಗೆ ತನಿಖೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ‌ ನಡೆಸಲಾಯಿತು.

- Advertisement -

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಗೃಹ‌ ಸಚಿವರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಚಿನ್ ಪಾಂಚಾಳ್ ನಿಗೂಢ ಸಾವಿನ ಘಟನೆ ವಿಷಾದನೀಯ. ಬಡ ಕುಟುಂಬದಲ್ಲಿ ಹುಟ್ಟಿದ ಸಚಿನ್ ತನ್ನ‌ ಉಪಜೀವನಕ್ಕಾಗಿ ವ್ಯವಹಾರ ಮಾಡುವಾಗ ಏನೋ ಏರುಪೇರಾಗಿದೆ. ಸಚಿನ್‌ ಸಾವಿನಿಂದ ಅವರ ಮೇಲೆ ಅವಲಂಬಿತ ಕುಟುಂಬದ ಸದಸ್ಯರು ಬೀದಿ ಪಾಲಾಗುವ ಸ್ಥಿತಿ ಬಂದೊಗಿದೆ. ಇಡೀ ಸಾವಿನ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಸಚಿನ್ ಕುಟುಂಬಸ್ಥರಿಗೆ‌ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹೊಟ್ಟೆಯಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ತಾಯಿಯೂ ಮರಣ

ಪ್ರತಿಭಟನೆಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಸುಲೋಚನಾ ವಿಶ್ವಕರ್ಮ, ಯುವ ಘಟಕದ ಅದ್ಯಕ್ಷ ಪ್ರಶಾಂತ ವಿಶ್ವಕರ್ಮ, ಮಹಾಸಭಾದ ಉಸ್ತುವಾರಿ ಅಶೋಕ ಪೊದ್ದಾರ್‌, ಉಪಾಧ್ಯಕ್ಷ ಸೋಮನಾಥ ಪಾಂಚಾಳ್, ರಾಜಕುಮಾರ ಪಾಂಚಾಳ್, ಕೃಷ್ಣಮಚಾರಿ, ಮಹಾದೇವ ಪಾಂಚಾಳ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...