ಚಿತ್ರದುರ್ಗ | ಶುದ್ಧ, ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಶುದ್ಧ ಮತ್ತು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಮೊಳಕಾಲ್ಮುರು ಪಟ್ಟಣದಲ್ಲಿ 15,000 ಜನಸಂಖ್ಯೆ ಇದ್ದು, ಹಲವು ವರ್ಷಗಳಿಂದ ಜನರು ನೀರಿನ ಅಭಾವ ಮತ್ತು ಸಮಸ್ಯೆ ಎದುರಿಸುತ್ತಾ ಬಂದಿದ್ದಾರೆ. 8-10 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡುತ್ತಿದ್ದು, ಜನರು ಪರದಾಡುವಂತಾಗಿದೆ. ಪೂರೈಕೆಯಾಗುವ ನೀರು ಕೂಡ ಅಶುದ್ಧವಾಗಿದೆ ಎಂದು ಆರೋಪಿಸಿದರು.

ರಂಗಯ್ಯನ ದುರ್ಗಾ ಜಲಾಶಯದಿಂದ ಬರುವ ನೀರನ್ನು ಶುದ್ಧೀಕರಣ ಮಾಡದ ಕಾರಣ ಅಶುದ್ಧ ನೀರು ನಾಗರಿಕರಿಗೆ ಪೂರೈಕೆಯಾಗುತ್ತದೆ. ಈ ನೀರಿನಲ್ಲಿ ಸ್ನಾನ ಮಾಡಿದರೆ ತುರಿಕೆ ಮತ್ತು ಚರ್ಮರೋಗಗಳು ಬರುತ್ತದೆ ಎಂದು ದೂರಿದರು.

Advertisements

ಅಶುದ್ಧ ನೀರನ್ನು ಸಂಗ್ರಹಿಸಿ ತೋರಿಸಿ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಮನವಿ ಸಲ್ಲಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಮತ್ತು ಶಾಸಕರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ನೀರನ್ನು ಎರಡು ದಿನಗಳಿಗೊಮ್ಮೆ ಪೂರೈಸಬೇಕು ಎಂದು ಆಗ್ರಹಿಸಿದ ಅವರು, ಕೂಡಲೇ ಅಧಿಕಾರಿಗಳು ಮತ್ತು ಆಡಳಿತವರ್ಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ನಿವಾಸಿಗಳಾದ ರಾಘವೇಂದ್ರ, ಸಂತೋಷ್, ಏಕಬೋಟೆ ರಾಜು, ಮಂಜುನಾಥ್, ನರೇಶ್, ರಾಮಕೃಷ್ಣ, ರೇಖಾ, ಎರಿಸ್ವಾಮಿ ಸುಮಿತ್ರ, ನೀಲಾ, ವೀರಮ್ಮ ಹಾಗೂ ಇತರು ಭಾಗವಹಿಸಿದ್ದರು.

ನಂತರ ಪ್ರತಿಭಟನಾಕಾರರು ಹಾನಗಲ್ ರಸ್ತೆಯ ರಂಗಯನದುರ್ಗ ಜಲಾಶಯದ ನೀರಿನ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X