ಬೆಂಗಳೂರು | ರೈತರ ಸಾಲ ಮನ್ನಾ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಫೆಬ್ರವರಿ 16ರಿಂದ ಆರಂಭವಾಗುವ ರಾಜ್ಯ ಬಜೆಟ್‌ ಅಧಿವೇಶನದಲ್ಲಿ ಕೃಷಿಗೆ ಹೆಚ್ಚು ಅನುದಾನ ನೀಡಬೇಕು. ತೆಲಗಾಂಣದಲ್ಲಿ ಕಾಂಗ್ರೆಸ್‌ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಅದೇ ರೀತಿ, ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಕಬ್ಬಿನ ಎಫ್‌ಆಆರ್‌ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಈಗಾಗಲೇ ಕಬ್ಬು ಕಟಾವು, ಸಾಗಣಿಕೆ ದರವೆಂದು ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಹಣ ಕಡಿತ ಮಾಡಿ ರೈತರನ್ನು ವಂಚಿಸುತ್ತಿವೆ. ರೈತರಿಗೆ ಕಡಿತ ಮಾಡಿರುವ ಹೆಚ್ಚುವರಿ ಹಣವನ್ನು ರೈತರಿಗೆ ವಾಪಸ್‌ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿ ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, “2022- 23ರ ಸಾಲಿನಲ್ಲಿ ಎಫ್‌ಆರ್‌ಪಿ ಮೇಲೆ ಟನ್‌ ಕಬ್ಬಿಗೆ 150 ರೂ. ಹೆಚ್ಚುವರಿ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ಅದರಂತೆ, ಸಕ್ಕರೆ ಕಾರ್ಖಾನೆಗಳು ರೈತರಿಗೆ ಹೆಚ್ಚವರಿ ದರವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವೇ ಸರ್ಕಾರವೇ ರೈತರಿಗೆ ಪಾವತಿಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

“ತೆಲಂಗಾಣ ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರವೇ ವಿಮಾ ಕಂತು ಪಾವತಿಸಿ 5 ಲಕ್ಷ ರೂಪಾಯಿಯ ಜೀವ ವಿಮೆ ಪಾಲಿಸಿ ಕೊಟ್ಟಿದೆ. ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಸಿಗುತ್ತದೆ. ಇದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.

“ರೈತರ ಎಲ್ಲ ಕೃಷಿ ಉತ್ಪನ್ನಗಳನ್ನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಪಂಜಾಬ್, ಹರಿಯಾಣ, ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲ ಹೋಬಳಿ ಕೇಂದ್ರಗಳಲ್ಲಿ ಎಂಎಸ್‌ಪಿ ಖರೀದಿ ಕೇಂದ್ರ ತೆರೆಯಬೇಕು. ರೈತರ ಉತ್ಪನ್ನಗಳನ್ನು ಖರೀದಿಸುವಾಗ, ರೈತರಿಂದ ಖರೀದಿಸುವ ಮಿತಿಯನ್ನ ರದ್ದುಗೊಳಿಸಿ ರೈತರು ಮಾರಾಟ ಮಾಡುವಷ್ಟು ಉತ್ಪನ್ನಗಳನ್ನು ಖರೀದಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಬರಗಾಲ ಪೀಡಿತ ಪ್ರದೇಶದ ರೈತರಿಗೆ ನೀರು ಬಿಡದೆ, ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಅಚ್ಚುಕಟ್ಟು ರೈತರಿಗೆ ವಂಚನೆ ಮಾಡಲಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಎಕರೆಗೆ 25,000 ರೂ. ಪರಿಹಾರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ರೈತರು ಬೆಳೆದ ಎಲ್ಲ ಪೌಷ್ಟಿಕ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಹೆಚ್ಚುವರಿ ಬೆಲೆಯೊಂದಿಗೆ ಬೆಂಬಲ ನಿಗದಿ ಮಾಡಬೇಕು.
  • ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಸರ್ಕಾರವೇ ಕಡ್ಡಾಯವಾಗಿ ಖರೀದಿಸುವ ವ್ಯವಸ್ಥೆ ಜಾರಿಗೆ ಬರಬೇಕು.
  • ರೈತರಿಂದ ಪೌಷ್ಟಿಕ ಸಿರಿಧಾನ್ಯಗಳನ್ನು ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು.
  • ರೈತರ ಎಲ್ಲ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು. ಬೆಳೆವಿಮೆ ಪದ್ದತಿಯ ಕೆಲವು ನೀತಿಗಳು ಬದಲಾಗಬೇಕು. ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ವೈಜ್ಞಾನಿಕವಾಗಿ ಸಂಪೂರ್ಣ ಪರಿಹಾರ ಸಿಗುವಂತಾಗಬೇಕು.
  • ಕೃಷಿ ಸಾಲ ನೀತಿ ಬದಲಾಗಬೇಕು. ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು. ಎಲ್ಲ ರೈತರಿಗೂ ಕೇವಲ ಪಹಣಿ ಪತ್ರ ಆಧರಿಸಿ ಕನಿಷ್ಠ 5 ಲಕ್ಷ ಆಧಾರರಹಿತ ಬಡ್ಡಿ ಇಲ್ಲದ ಸಾಲ ಕೊಡಿಸುವ ಯೋಜನೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಜಾರಿಯಾಗಬೇಕು.
  • ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಮೇಳಗಳನ್ನು ಆಚರಿಸುವಾಗ ರಾಷ್ಟ್ರೀಯ ರೈತ ದಿನದಂದು ಆಚರಿಸಬೇಕು. ಡಿಸೆಂಬರ್ 23ರಂದು ದಿವಂಗತ ಎಂ.ಡಿ ನಂಜುಂಡಸ್ವಾಮಿ ಹೆಸರಿನಲ್ಲಿ ರೈತ ದಿನವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು.
  • ಸಕ್ಕರೆ ಕಾರ್ಖಾನೆಗಳ ಹಾಗೂ ಕಟಾವು ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಮನರೇಗಾ ಯೋಜನೆಯ ಕಾರ್ಮಿಕರನ್ನು ಕಬ್ಬು ಕಟಾವು ಹಾಗೂ ಬಿತ್ತನೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು.
  • ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು. ಇಳುವರಿಯಲ್ಲಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು. ಕಬ್ಬಿನ ಎಥನಾಲ್ ಉತ್ಪಾದನಾ ಲಾಭದ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು.
  • ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಬೆಂಕಿ ಅನಾಹುತವಾದಾಗ ಸುಟ್ಟು ಹೋದ ಕಬ್ಬಿಗೆ ಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇ.25ರಷ್ಟು ಕಡಿತ ಮಾಡುವುದನ್ನು ಕೈ ಬಿಟ್ಟು, ಎಫ್‌ಆರ್‌ಪಿ ಹಣವನ್ನು ರೈತರಿಗೆ ಪೂರ್ತಿ ಪಾವತಿ ಆಗಬೇಕು.
  • ಕೃಷಿ ಉತ್ಪನ್ನಗಳಿಗೆ ಎಪಿಎಂಸಿಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು.
  • ಕೃಷಿಗೆ ಬಳಸುವ ಕೀಟನಾಶಕ, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು, ಟ್ಯಾಕ್ಟರ್ ಬಿಡಿಭಾಗಗಳಿಗೆ ವಿಧಿಸುವ ಜಿಎಸ್‌ಟಿ ರದ್ದುಗೊಳಿಸಬೇಕು.
  • ಕಾಡಂಚಿನಲ್ಲಿ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆ, ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರ ನೀಡಿ ಯೋಜನೆ ರೂಪಿಸಬೇಕು. ಪರಿಹಾರ ಹೆಚ್ಚಳ ಮಾಡಬೇಕು. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ 8 ಲಕ್ಷಕ್ಕೂ ಹೆಚ್ಚು ಬಗರ್ ಹುಕ್ಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಬೇಕು.
  • ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದಾಗಬೇಕು.
  • 60 ವರ್ಷ ತುಂಬಿದ ರೈತರಿಗೆ ಮಾಸಿಕ ಭತ್ಯೆಯಾಗಿ ಕನಿಷ್ಠ 10,000 ರೂ. ನೀಡುವ ಪಿಂಚಣಿ ಯೋಜನೆ ಜಾರಿಗೆ ತರಬೇಕು.
  • ಕೃಷಿಯಿಂದ ರೈತರು ವಲಸೆ ಹೋಗುವುದನ್ನ ತಪ್ಪಿಸಲು, ಕೃಷಿಯಲ್ಲಿ ತೊಡಗಿರುವ ರೈತರ ಮಗನನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ನೀಡುವ ಯೋಜನೆ ಜಾರಿಗೆ ಬರಬೇಕು.
  • ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ಕೃಷಿ ಜಮೀನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಅವಶ್ಯಕತೆಯಿದ್ದ ಸಂದರ್ಭದಲ್ಲಿ ರೈತರನ್ನ ಉದ್ದಿಮೆಗಳಲ್ಲಿ ಪಾಲುದಾರರನ್ನಾಗಿ ಮಾಡಬೇಕು.
  • ಗ್ರೀನ್ ಬರ್ಡ್ಸ್ ಆಗೋ ಕಂಪನಿಯಲ್ಲಿ ಠೇವಣಿಯಿಟ್ಟು ಹಣ ಕಳೆದುಕೊಂಡಿರುವ 1.5 ಲಕ್ಷ ಬಡ ಜನರಿಗೆ ಕಂಪನಿಯಿಂದ ಮುಟ್ಟುಗೋಲು ಹಾಕಿರುವ ಆಸ್ತಿಯನ್ನು ಹರಾಜು ಮಾಡಿ, ಹಣ ಕೊಡಿಸಬೇಕು.
  • ರಾಜ್ಯ ಬಜೆಟ್ ಮಂಡನೆಯಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು. ರೈತರ ಅಭಿವೃದ್ಧಿಗೆ ಪೂರ್ವಕವಾದ ಯೋಜನೆಗಳನ್ನು ಜಾರಿಗೆ ತರಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Railhead saala manna madi elru thiinno anna beleyode raitha avara saala manna madoke yaake sarkara bejavabdari thorstide

    First raithara saaala manna maadi plzzzzzzzzz

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X