ಬೆಂಗಳೂರು | ರೈತರ ಸಾಲ ಮನ್ನಾ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Date:

ಫೆಬ್ರವರಿ 16ರಿಂದ ಆರಂಭವಾಗುವ ರಾಜ್ಯ ಬಜೆಟ್‌ ಅಧಿವೇಶನದಲ್ಲಿ ಕೃಷಿಗೆ ಹೆಚ್ಚು ಅನುದಾನ ನೀಡಬೇಕು. ತೆಲಗಾಂಣದಲ್ಲಿ ಕಾಂಗ್ರೆಸ್‌ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಅದೇ ರೀತಿ, ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.

- Advertisement -

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಕಬ್ಬಿನ ಎಫ್‌ಆಆರ್‌ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಈಗಾಗಲೇ ಕಬ್ಬು ಕಟಾವು, ಸಾಗಣಿಕೆ ದರವೆಂದು ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಹಣ ಕಡಿತ ಮಾಡಿ ರೈತರನ್ನು ವಂಚಿಸುತ್ತಿವೆ. ರೈತರಿಗೆ ಕಡಿತ ಮಾಡಿರುವ ಹೆಚ್ಚುವರಿ ಹಣವನ್ನು ರೈತರಿಗೆ ವಾಪಸ್‌ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಪ್ರತಿಭಟನೆಯಲ್ಲಿ ಮಾತನಾಡಿ ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, “2022- 23ರ ಸಾಲಿನಲ್ಲಿ ಎಫ್‌ಆರ್‌ಪಿ ಮೇಲೆ ಟನ್‌ ಕಬ್ಬಿಗೆ 150 ರೂ. ಹೆಚ್ಚುವರಿ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ಅದರಂತೆ, ಸಕ್ಕರೆ ಕಾರ್ಖಾನೆಗಳು ರೈತರಿಗೆ ಹೆಚ್ಚವರಿ ದರವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವೇ ಸರ್ಕಾರವೇ ರೈತರಿಗೆ ಪಾವತಿಸಬೇಕು” ಎಂದು ಆಗ್ರಹಿಸಿದ್ದಾರೆ.

“ತೆಲಂಗಾಣ ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರವೇ ವಿಮಾ ಕಂತು ಪಾವತಿಸಿ 5 ಲಕ್ಷ ರೂಪಾಯಿಯ ಜೀವ ವಿಮೆ ಪಾಲಿಸಿ ಕೊಟ್ಟಿದೆ. ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಸಿಗುತ್ತದೆ. ಇದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.

“ರೈತರ ಎಲ್ಲ ಕೃಷಿ ಉತ್ಪನ್ನಗಳನ್ನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಪಂಜಾಬ್, ಹರಿಯಾಣ, ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲ ಹೋಬಳಿ ಕೇಂದ್ರಗಳಲ್ಲಿ ಎಂಎಸ್‌ಪಿ ಖರೀದಿ ಕೇಂದ್ರ ತೆರೆಯಬೇಕು. ರೈತರ ಉತ್ಪನ್ನಗಳನ್ನು ಖರೀದಿಸುವಾಗ, ರೈತರಿಂದ ಖರೀದಿಸುವ ಮಿತಿಯನ್ನ ರದ್ದುಗೊಳಿಸಿ ರೈತರು ಮಾರಾಟ ಮಾಡುವಷ್ಟು ಉತ್ಪನ್ನಗಳನ್ನು ಖರೀದಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಬರಗಾಲ ಪೀಡಿತ ಪ್ರದೇಶದ ರೈತರಿಗೆ ನೀರು ಬಿಡದೆ, ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಅಚ್ಚುಕಟ್ಟು ರೈತರಿಗೆ ವಂಚನೆ ಮಾಡಲಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಎಕರೆಗೆ 25,000 ರೂ. ಪರಿಹಾರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ರೈತರು ಬೆಳೆದ ಎಲ್ಲ ಪೌಷ್ಟಿಕ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಹೆಚ್ಚುವರಿ ಬೆಲೆಯೊಂದಿಗೆ ಬೆಂಬಲ ನಿಗದಿ ಮಾಡಬೇಕು.
  • ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಸರ್ಕಾರವೇ ಕಡ್ಡಾಯವಾಗಿ ಖರೀದಿಸುವ ವ್ಯವಸ್ಥೆ ಜಾರಿಗೆ ಬರಬೇಕು.
  • ರೈತರಿಂದ ಪೌಷ್ಟಿಕ ಸಿರಿಧಾನ್ಯಗಳನ್ನು ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು.
  • ರೈತರ ಎಲ್ಲ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು. ಬೆಳೆವಿಮೆ ಪದ್ದತಿಯ ಕೆಲವು ನೀತಿಗಳು ಬದಲಾಗಬೇಕು. ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ವೈಜ್ಞಾನಿಕವಾಗಿ ಸಂಪೂರ್ಣ ಪರಿಹಾರ ಸಿಗುವಂತಾಗಬೇಕು.
  • ಕೃಷಿ ಸಾಲ ನೀತಿ ಬದಲಾಗಬೇಕು. ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು. ಎಲ್ಲ ರೈತರಿಗೂ ಕೇವಲ ಪಹಣಿ ಪತ್ರ ಆಧರಿಸಿ ಕನಿಷ್ಠ 5 ಲಕ್ಷ ಆಧಾರರಹಿತ ಬಡ್ಡಿ ಇಲ್ಲದ ಸಾಲ ಕೊಡಿಸುವ ಯೋಜನೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಜಾರಿಯಾಗಬೇಕು.
  • ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಮೇಳಗಳನ್ನು ಆಚರಿಸುವಾಗ ರಾಷ್ಟ್ರೀಯ ರೈತ ದಿನದಂದು ಆಚರಿಸಬೇಕು. ಡಿಸೆಂಬರ್ 23ರಂದು ದಿವಂಗತ ಎಂ.ಡಿ ನಂಜುಂಡಸ್ವಾಮಿ ಹೆಸರಿನಲ್ಲಿ ರೈತ ದಿನವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು.
  • ಸಕ್ಕರೆ ಕಾರ್ಖಾನೆಗಳ ಹಾಗೂ ಕಟಾವು ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಮನರೇಗಾ ಯೋಜನೆಯ ಕಾರ್ಮಿಕರನ್ನು ಕಬ್ಬು ಕಟಾವು ಹಾಗೂ ಬಿತ್ತನೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು.
  • ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು. ಇಳುವರಿಯಲ್ಲಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು. ಕಬ್ಬಿನ ಎಥನಾಲ್ ಉತ್ಪಾದನಾ ಲಾಭದ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು.
  • ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಬೆಂಕಿ ಅನಾಹುತವಾದಾಗ ಸುಟ್ಟು ಹೋದ ಕಬ್ಬಿಗೆ ಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇ.25ರಷ್ಟು ಕಡಿತ ಮಾಡುವುದನ್ನು ಕೈ ಬಿಟ್ಟು, ಎಫ್‌ಆರ್‌ಪಿ ಹಣವನ್ನು ರೈತರಿಗೆ ಪೂರ್ತಿ ಪಾವತಿ ಆಗಬೇಕು.
  • ಕೃಷಿ ಉತ್ಪನ್ನಗಳಿಗೆ ಎಪಿಎಂಸಿಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು.
  • ಕೃಷಿಗೆ ಬಳಸುವ ಕೀಟನಾಶಕ, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು, ಟ್ಯಾಕ್ಟರ್ ಬಿಡಿಭಾಗಗಳಿಗೆ ವಿಧಿಸುವ ಜಿಎಸ್‌ಟಿ ರದ್ದುಗೊಳಿಸಬೇಕು.
  • ಕಾಡಂಚಿನಲ್ಲಿ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆ, ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರ ನೀಡಿ ಯೋಜನೆ ರೂಪಿಸಬೇಕು. ಪರಿಹಾರ ಹೆಚ್ಚಳ ಮಾಡಬೇಕು. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ 8 ಲಕ್ಷಕ್ಕೂ ಹೆಚ್ಚು ಬಗರ್ ಹುಕ್ಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಬೇಕು.
  • ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದಾಗಬೇಕು.
  • 60 ವರ್ಷ ತುಂಬಿದ ರೈತರಿಗೆ ಮಾಸಿಕ ಭತ್ಯೆಯಾಗಿ ಕನಿಷ್ಠ 10,000 ರೂ. ನೀಡುವ ಪಿಂಚಣಿ ಯೋಜನೆ ಜಾರಿಗೆ ತರಬೇಕು.
  • ಕೃಷಿಯಿಂದ ರೈತರು ವಲಸೆ ಹೋಗುವುದನ್ನ ತಪ್ಪಿಸಲು, ಕೃಷಿಯಲ್ಲಿ ತೊಡಗಿರುವ ರೈತರ ಮಗನನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ನೀಡುವ ಯೋಜನೆ ಜಾರಿಗೆ ಬರಬೇಕು.
  • ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ಕೃಷಿ ಜಮೀನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಅವಶ್ಯಕತೆಯಿದ್ದ ಸಂದರ್ಭದಲ್ಲಿ ರೈತರನ್ನ ಉದ್ದಿಮೆಗಳಲ್ಲಿ ಪಾಲುದಾರರನ್ನಾಗಿ ಮಾಡಬೇಕು.
  • ಗ್ರೀನ್ ಬರ್ಡ್ಸ್ ಆಗೋ ಕಂಪನಿಯಲ್ಲಿ ಠೇವಣಿಯಿಟ್ಟು ಹಣ ಕಳೆದುಕೊಂಡಿರುವ 1.5 ಲಕ್ಷ ಬಡ ಜನರಿಗೆ ಕಂಪನಿಯಿಂದ ಮುಟ್ಟುಗೋಲು ಹಾಕಿರುವ ಆಸ್ತಿಯನ್ನು ಹರಾಜು ಮಾಡಿ, ಹಣ ಕೊಡಿಸಬೇಕು.
  • ರಾಜ್ಯ ಬಜೆಟ್ ಮಂಡನೆಯಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು. ರೈತರ ಅಭಿವೃದ್ಧಿಗೆ ಪೂರ್ವಕವಾದ ಯೋಜನೆಗಳನ್ನು ಜಾರಿಗೆ ತರಬೇಕು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 7 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ!

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ 7 ಸರ್ಕಾರಿ...

ಕೋಲಾರ | ಪಂಚಾಯತಿ ನಿಮ್ಮಪ್ಪನ ಆಸ್ತಿಯಾ? ವಸೂಲಿಗೆ ಇಳಿದಿದ್ದೀರಾ? PDOಗೆ ತರಾಟೆ!

"ಪಂಚಾಯಿತಿಯನ್ನು ನಿಮ್ಮ ಅಪ್ಪನ ಆಸ್ತಿ ಅಂದುಕೊಂಡಿದ್ದೀಯಾ? ಇಲ್ಲಿಗೆ ರಾಜನಂತೆ ಆಗಿದ್ದೀಯಾ, ವಸೂಲಿಗೆ...

ಚಿಕ್ಕಬಳ್ಳಾಪುರ | ಹಿರಿಯ ಸಾಹಿತಿ ಹಾಗೂ ಕಲಾವಿದ ಗೊಲ್ಲಹಳ್ಳಿ ಶಿವಪ್ರಸಾದ್‌ರವರಿಗೆ ಪತ್ರಕರ್ತರ ಸಂಘದಿಂದ ಹೃದಯಸ್ಪರ್ಶಿ ಸನ್ಮಾನ

​ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ...

ಬಾಗೇಪಲ್ಲಿ | ರೆಡ್ಡಿಕೆರೆಗೆಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸ ಕೆರೆಯಾಂಗಣಕ್ಕೆ: ಜಲಮೂಲ ಕಲುಷಿತ

ಪಟ್ಟಣದ ಹೊರವಲಯದ ರೆಡ್ಡಿಕೆರೆಗೆ ಹಳೆ ಕಟ್ಟಡಗಳ ತ್ಯಾಜ್ಯ ಮತ್ತು ಇತರೆ ಕಸವನ್ನು...