ಮಂಡ್ಯ | ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

Date:

ರಾಜ್ಯದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡುವಂತೆ ಹಾಗೂ ರಾಜ್ಯಪಾಲರು ಒಳಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ಒತ್ತಾಯಿಸಿ ಮಾದಿಗ ಸಮುದಾಯದ ಸಂಘಟನೆಗಳು ಪ್ರತಿಭಟನೆ ನಡೆಸಿದರು.

- Advertisement -

ಮಂಡ್ಯ ನಗರದ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ವಿರುದ್ಧ ಘೋಷಣೆ ಕೂಗಿದರು, ಒಳಮೀಸಲಾತಿ ಜಾರಿ ಮಾಡದೆ ಅನ್ಯಾಯ ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕರ್ನಾಟಕ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಎನ್.ಆರ್. ಚಂದ್ರಶೇಖರ್ ಮಾತನಾಡಿ, ಸಂವಿಧಾನದ ಆಶಯದಂತೆ ಪರಿಶಿಷ್ಟರು ಮೀಸಲಾತಿ ಹಂಚಿಕೊಳ್ಳಲು ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಕೂಡಲೇ ಅಂಕಿತ ಹಾಕಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಈಗಾಗಲೇ ಆದೇಶ ಮಾಡಿರುವಂತೆ ಜಿಲ್ಲಾಡಳಿತ ಹಾಗೂ ತಹಶೀಲ್ದಾರ್ ಗಳು ಪರಿಶಿಷ್ಟ ಜಾತಿ ಮಾದಿಗ ಜನಾಂಗಕ್ಕೆ ಪ್ರವರ್ಗ-ಎ ಮಾದಿಗ ಎಂದೇ ಜಾತಿ ದೃಡೀಕರಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಪ್ರತಿಭಟನೆಯಲ್ಲಿ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಸಿ.ಕೆ. ಪಾಪಯ್ಯ, ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಕಾಂತರಾಜು, ಮುಖಂಡರಾದ ಬಿ. ಕೃಷ್ಣ, ಹೆಚ್.ಎಂ. ಪುಟ್ಟರಾಜು, ಜಿಪಂ ಮಾಜಿ ಅಧ್ಯಕ್ಷ ಕುಮಾರ್, ಚಾಮನಹಳ್ಳಿ ಮಂಜು, ಬಾಳೆಹೊನ್ನಿಗೆ ಕುಮಾರ್, ಕನ್ನಲಿ ಕೆಂಪಯ್ಯ, ಗೋವಿಂದಯ್ಯ, ಶಂಭುನಳ್ಳಿ ರವಿಕುಮಾರ್, ಚಿಕ್ಕಲಿಂಗಯ್ಯ, ಬಿಜಿ ಪುರ, ಮಂಜು, ಪುಟ್ಟರಾಜು ಕಡಬ, ರಂಜಿತ್, ಸ್ವಾಮಿ ಎಲೆಚಾಕನಹಳ್ಳಿ, ಎಂ. ಪಿ. ಚಂದ್ರಶೇಖರ್, ಹುಲಿವಾನ ಅಂಬುಜಿ, ಬಸರಾಳು ಶ್ರೀನಿವಾಸ್, ಹಂಪಾಪುರ ಶಿವಭೋರ, ಪ್ರಸನ್ನ, ಸಿ.ಬಿ. ಬೋರಯ್ಯ, ರಾಚಯ್ಯ, ಮಲ್ಲೇಶ್, ಚಂದ್ರು, ಸುರೇಶ್, ಉಮೇಶ್ ಹಾಗೂ ಶಿವಕುಮಾರ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...