ಮೈಸೂರು | ಕೇಂದ್ರ ಗ್ರಂಥಾಲಯಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ

Date:

ಎಐಡಿವೈಓ ಮತ್ತು ಸಾರ್ವಜನಿಕ ಗ್ರಂಥಾಲಯದ ಓದುಗರ ಬಳಗದಿಂದ ಗ್ರಂಥಾಲಯದ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು.

- Advertisement -

ಮೈಸೂರಿನ ಕುವೆಂಪು ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿದಿನ ನೂರಾರು ಜನ ವಿದ್ಯಾರ್ಥಿಗಳು ಮತ್ತು ನಾಗರಿಕರು ಓದುತ್ತಾರೆ. ಆದರೆ, ಈ ಗ್ರಂಥಾಲಯದಲ್ಲಿ ಮೂಲಭೂತ ಅವಶ್ಯಕತೆಗಳ ಕೊರತೆ ಎದ್ದು ಕಾಣುತ್ತಿದೆ. ಅವಶ್ಯಕತೆಗೆ ತಕ್ಕಂತೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಮತ್ತು ನಿರ್ವಹಣೆ ಇಲ್ಲದಿರುವುದರಿಂದ ಓದುಗರು ದಿನನಿತ್ಯ ಕಷ್ಟಪಡುವಂತಾಗಿದೆ. ಸಮಾಜದಲ್ಲಿ ಓದುಗರ ಸಂಖ್ಯೆ ಕ್ರಮೇಣ ಕ್ಷೀಣಿಸುತ್ತಿರುವುದು ವಿಷಯವೇ. ಇದರ ಮಧ್ಯೆಯೂ ನೂರಾರು ಜನ ಗ್ರಂಥಾಲಯಕ್ಕೆ ಬಂದು ಓದುತ್ತಿರುವುದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಾರ್ವಜನಿಕರ ಹಣದಲ್ಲಿ ಸರ್ಕಾರಿ ಗ್ರಂಥಾಲಯ ತೆರೆದ ಮೇಲೆ ಅದಕ್ಕೆ ಬೇಕಾಗುವ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವುದು ಇಲಾಖೆಯದ್ದೇ ಕರ್ತವ್ಯ ಮತ್ತು ಜವಾಬ್ದಾರಿ. ಹಾಗಾಗಿ, ಜ್ಞಾನಾರ್ಜನೆಗಾಗಿ ಬರುವ ಓದುಗರಿಗೆ ಉತ್ತಮ ವಾತಾವರಣ ನಿರ್ಮಿಸಲು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈ ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ ಎಂದು ಎಐಡಿವೈಓ ಜಿಲ್ಲಾ ಅಧ್ಯಕ್ಷ ಟಿ. ಆರ್. ಸುನಿಲ್ ಹೇಳಿದರು.

ಗ್ರಂಥಾಲಯದ ಓದುಗರಾದ ಶಿವಾನಂದ ಮಾತನಾಡಿ, ‘ಈ ಹಿಂದೆ ವಾಟರ್ ಪ್ಯೂರಿಫೈಯರ್‌ನ್ನು ನಮ್ಮ ಹಣದಲ್ಲೇ ರಿಪೇರಿ ಮಾಡಿಸಿದ್ದೆವು. ಅದು ಮತ್ತೆ ದುರಸ್ತಿಗೆ ಬಂದಿದೆ. ಗ್ರಂಥಾಲಯದ ಹೊರಾಂಗಣದಲ್ಲಂತೂ ಕಳೆ ಬೆಳೆದು ಕಸದ ತೊಟ್ಟಿಯಂತಾಗಿದೆ. ಅಲ್ಲಿ ಕುಳಿತು ಊಟ ಮಾಡಲು ಕೂಡ ಒಂದು ವ್ಯವಸ್ಥೆ ಇಲ್ಲ. ಈ ಸಮಸ್ಯೆಗಳನ್ನು ಪರಿಹರಿಸಬೇಕು’. ‘ನಮ್ಮಿಂದ ಸಂಗ್ರಹಿಸುವ ತೆರಿಗೆಯಲ್ಲಿ ಗ್ರಂಥಾಲಯ ಸೆಸ್ ಅನ್ನು ತೆಗೆದುಕೊಳ್ಳಲಾಗುತ್ತದೆ . ಸರಿಯಾದ ಸಂದರ್ಭಕ್ಕೆ ಲೈಬ್ರರಿಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಟಿ ನರಸೀಪುರ | ಭತ್ತ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿದ ರೈತ ಸಂಘ

ಗ್ರಂಥಪಾಲಕರಿಗೆ ಮತ್ತು ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಉಪ ನಿರ್ದೇಶಕರಾದ ಬಿ ಮಂಜುನಾಥ್ ಮನವಿ ಸ್ವೀಕರಿಸಿ, ಎರಡು ವಾರದೊಳಗೆ ಹೊಸ ನೀರಿನ ಘಟಕವನ್ನು ಸ್ಥಾಪಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಶೌಚಾಲಯಗಳ ದುರಸ್ತಿ ಹಾಗೂ ಹೊರಾಂಗಣದಲ್ಲಿ ಬೆಳೆದಿರುವ ಗಿಡ ಗಂಟಿಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಪ್ರತಿಭಟನೆಯಲ್ಲಿ ಎಸ್. ಸುಮ, ಜಿಲ್ಲಾ ಕಾರ್ಯದರ್ಶಿ ನೀತುಶ್ರೀ, ಪೂರ್ಣಿಮಾ, ರಣಜಿತ್, ಓದುಗರಾದ ಅನುಪ್, ಮೌನೇಶ್, ರವಿ, ವೀರೇಶ್, ಮೇಘ, ಮಾಲ, ಮಮತಾ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...