- ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ
- ಭೂಮಿ ಹೋರಾಟ ಸಮಿತಿ ಮತ್ತು ಎಐಕೆಕೆಎಂಎಸ್ ನೇತೃತ್ವ
ತಾಲೂಕಿನ 14 ಹಳ್ಳಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ಧಾರವಾಡದ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಧಾರವಾಡದ ಭೂಮಿ ಹೋರಾಟ ಸಮಿತಿ ಮತ್ತು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ವರ್ಷಗಳಿಂದ ಧಾರವಾಡ ತಾಲೂಕಿನ ಗುಳೇದಕೊಪ್ಪ, ವೆಂಕಟಾಪುರ, ಮದಿಕೊಪ್ಪ ಕಲ್ಲಾಪುರ, ಸಿಂಗನಹಳ್ಳಿಯ ಫಲವತ್ತಾದ ಭೂಮಿಯನ್ನು, ಭೂ ಸ್ವಾಧೀನ ಕೈಬಿಡಬೇಕೆಂದು ಹಲವಾರು ಬಾರಿ ಪ್ರತಿಭಟನೆ ನಡೆಸಿ, ಸರ್ಕಾರದ ಗಮನಕ್ಕೆ ತಂದರು ಸಹಿತ ಇಲ್ಲಿಯವರೆಗೆ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡುವ ನಿರ್ಧಾರ ತೆಗೆದುಕೊಂಡಿಲ್ಲ, ಈ ಕೂಡಲೇ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? : ಚಿಕ್ಕಬಳ್ಳಾಪುರ |ವಿದ್ಯಾರ್ಥಿಗಳ ಕೊರತೆ ನೆಪ; ಸರ್ಕಾರಿ ಶಾಲೆಗೆ ಬೀಗ
ಸರ್ಕಾರವು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಾ, ಕಾರ್ಪೊರೇಟ್ ಕಂಪನಿಗಳ ಪರವಾದ ನೀತಿಯನ್ನು ಜಾರಿಗೆ ತರುತ್ತಿದೆ. ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಭೂಮಿ ಉಳಿಸಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಬೋಸ್ಲೆ, ರಾಣಪ್ಪ ಸಾವಂತನೂರ, ಮಂಜು ಕಲ್ಲಾಪುರ, ಸಿದ್ದಪ್ಪ ಬೋಸ್ಲೆ, ಎಐಕೆಕೆಎಂಎಸ್ ಜಿಲ್ಲಾ ಅಧ್ಯಕ್ಷೆ ದೀಪಾ ಧಾರವಾಡ, ಜಿಲ್ಲಾ ಉಪಾಧ್ಯಕ್ಷ ಹನುಮೇಶ ಹುಡೇದ, ಕಾರ್ಯದರ್ಶಿ ಶರಣು ಗೋನ್ವಾರ ಸೇರಿದಂತೆ ಹಲವರು ಹಾಜರಿದ್ದರು.