ಧರ್ಮಸ್ಥಳ ಧರ್ಮಾಧಿಕಾರಿ ಪರ ಪ್ರತಿಭಟನೆ; ಸೌಜನ್ಯ ಕುಟುಂಬದ ಮೇಲೆ ಹಲ್ಲೆಗೆ ಯತ್ನ

Date:

ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್‌ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್‌ ಫಾರ್ ಸೌಜನ್ಯ’ ಎಂಬ ಪ್ಲೆಕಾರ್ಡ್‌ ಹಿಡಿದು ಕಾಣಿಸಿಕೊಂಡಿದ್ದಾರೆ. ಅವರು ಮತ್ತು ಸೌಜನ್ಯ ಸಹೋದರ ಸುಭಾಷ್‌ ಚಂದ್ರ ಮೇಲೆ ಪ್ರತಿಭಟನಾನಿರತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾನೆ.

ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಪ್ರಕರಣದ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಮೂವರು ಜೈನ್‌ಗಳು ಸೌಜನ್ಯಳನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದಾರೆಂದು ಸೌಜನ್ಯ ಕುಟುಂಬ ಮೊದಲಿನಿಂದಲೂ ಆರೋಪಿಸುತ್ತಾ ಬಂದಿದೆ. ಇದೀಗ, ರಾಜ್ಯಾದ್ಯಂತ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಧರ್ಮಸ್ಥಳದ ಅವಹೇಳನವಾಗುತ್ತಿದೆಯೆಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಆರೋಪಿಸಿದ್ದಾರೆ. ಅವರ ಬೆಂಬಲಿಗರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ, ‘ತನ್ನ ಮಗಳಿಗೆ ನ್ಯಾಯ ಬೇಕು’ ಎಂದು ವೇದಿಕೆ ಮುಂಭಾಗದಲ್ಲಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಧರ್ಮಾಧಿಕಾರಿ ಬೆಂಬಲಿಗನೊಬ್ಬ ಪೊಲೀಸರ ಮುಂದೆಯೇ ಸುಭಾಷ್‌ ಚಂದ್ರ ಅವರ ಶರ್ಟ್‌ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಲು ಯತ್ನಿಸಿದ್ದಲ್ಲದೆ, ಬೆರಳು ತೋರಿಸಿ ಬೆದರಿಕೆ ಒಡ್ಡಿದ್ದಾನೆ. ಇದೇ ವ್ಯಕ್ತಿ ಬೆಂಗಳೂರಿನಲ್ಲಿ ಸೌಜನ್ಯ ಪರ ನಡೆದ ಪ್ರತಿಭಟನೆಯಲ್ಲಿ ಸೌಜನ್ಯ ಸೋದರಮಾವ ವಿಠಲ್‌ ಮೇಲೂ ಹಲ್ಲೆಗೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾಧ್ಯಮದವರೊಂದಿಗೆ ಮಾತನಾಡಿದ ಸೌಜನ್ಯ ತಾಯಿ ಕುಸುಮಾವತಿ, “ಇಲ್ಲಿ ನೆರೆದಿರುವವರು ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೋರಾಟ ಮಾಡುತ್ತಿಲ್ಲ. ಇದು ಸೌಜನ್ಯ ಪರ ಹೋರಾಟವಲ್ಲ. ಇಲ್ಲಿ ಯಾರೂ ಸೌಜನ್ಯ ಪರ ಪ್ಲೆಕಾರ್ಡ್‌ ಹಿಡಿದಿಲ್ಲ. ಘೋಷಣೆ ಕೂಗಿಲ್ಲ. ಸೌಜನ್ಯ ಪ್ರಕರಣ ದೇಶದ ಗಮನ ಸೆಳೆಯುತ್ತಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅನ್ಯಾಯಗಳು ಜಗತ್ತಿಗೆ ಗೊತ್ತಾಗುತ್ತದೆ ಎಂಬ ಕಾರಣಕ್ಕೆ ನಮ್ಮ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಈ ಹೋರಾಟ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೌಜನ್ಯ ಪರ ಹೋರಾಟಗಾರರು ಧರ್ಮಾಧಿಕಾರಿಯ ಹೆಸರು ಹೇಳುತ್ತಿಲ್ಲ. ಧರ್ಮಸ್ಥಳದಲ್ಲಿ ನಡೆದ ಘಟನೆಗೆ ಧರ್ಮಸ್ಥಳದ ಹೆಸರು ಹೇಳದೆ, ಇನ್ಯಾವ ಹೆಸರು ಹೇಳಬೇಕು. ನಾವು ಧರ್ಮಸ್ಥಳದವರೇ, ಧರ್ಮಸ್ಥಳದಲ್ಲಿಯೇ ಹುಟ್ಟಿ-ಬೆಳೆದ ಹೆಣ್ಣುಮಗುವನ್ನು ಅತ್ಯಾಚಾರಗೈದು, ಕೊಲೆ ಮಾಡಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಇಲ್ಲಿ ನೆರೆದಿರುವವರು ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕೆಂದಷ್ಟೇ ನಾವು ಕೇಳುತ್ತಿದ್ದೇವೆ” ಎಂದು ಹೇಳಿದ್ದಾರೆ.

“ನನ್ನ ಮಗಳಿಗೆ ಅನ್ಯಾಯ ಆಗಿದೆ. ನಾನು ನ್ಯಾಯ ಕೇಳುವುದು ತಪ್ಪೇ. ನಾವು ಶಂಕಿಸಿರುವ ಮೂವರ ವಿರುದ್ಧ ತನಿಖೆ ಮಾಡಲಿ. ಸರ್ಕಾರ ಎಸ್‌ಐಟಿ ರಚಿಸಿ, ಪ್ರಕರರಣವನ್ನು ಮರುತನಿಖೆ ಮಾಡಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಆಗ ಧರ್ಮಸ್ಥಳದಲ್ಲಿ ನನ್ನ ಮಗಳ ಮೇಲಾದ ಕೃತ್ಯ, ಮತ್ತೊಬ್ಬ ಹೆಣ್ಣು ಮಗಳ ಮೇಲಾಗದಂತೆ ತಡೆಯಬಹುದು. ಧರ್ಮಸ್ಥಳದ ಹೆಸರು ಹಾಳಾಗದಂತೆಯೂ ತಡೆಯಬಹುದು” ಎಂದು ಕುಸುಮಾವತಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸೌಜನ್ಯ ಸಹೋದರ ಸುಭಾಷ್‌ ಚಂದ್ರ, “ಸೌಜನ್ಯಳನ್ನು ಹಂತಕರು ಕೊಂದು 11 ವರ್ಷಗಳಾಗಿವೆ. ಇಂದಿಗೂ ನ್ಯಾಯ ಸಿಕ್ಕಿಲ್ಲ. ನಮ್ಮ ಕುಟುಂಬಕ್ಕೂ ಅನ್ಯಾಯ ಆಗಿದೆ. ನ್ಯಾಯ ಕೇಳಲು ಹೋದರೆ, ನಮ್ಮ ಮೇಲೆಯೇ ಹಲ್ಲೆ ಮಾಡುತ್ತಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...