ಬೆಂಗಳೂರು | ಪ್ಯಾಲೆಸ್ತೀನ್ ಸ್ವಾತಂತ್ರ್ಯಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಮೊಳಗಿದ ಘೋಷ

Date:

Advertisements

ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಮನವನ್ನು ನಿಲ್ಲಿಸಬೇಕು. ಭಾರತವು ಪ್ಯಾಲೆಸ್ತೀನ್ ಪರವಾಗಿ, ಪ್ಯಾಲೆಸ್ತೀನಿಯರ ಉಳಿವಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಲವಾರು ಮಂದಿ ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಪ್ಯಾಲೆಸ್ತೀನಿ ಪರ ಪ್ರತಿಭಟನೆಗಳಿಗೆ ಅವಕಾಶ ಕೊಡದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್ ಮೇಲಿನ ಇಸ್ತೇಲ್ ದಬ್ಬಾಳಿಕೆ ಮತ್ತು ನರಮೇಧವನ್ನು ಹಲವಾರು ವರ್ಷಗಳಿಂದ ಹಲವು ದೇಶಗಳು ವಿರೋಧಿಸಿವೆ. ಇಸ್ತೇಲಿನ ಪ್ರಜ್ಞಾವಂತ ನಾಗರಿಕರು ಪ್ಯಾಲೆಸ್ತೀನ್ ವಿರುದ್ಧದ ಇಸ್ತೇಲ್ ನೀತಿಯನ್ನು ಮತ್ತು ಯಹೂದಿಗಳ ಪರವಾದ ಧೋರಣೆಗಳನ್ನು ಖಂಡಿಸಿದ್ದಾರೆ. ಇಡೀ ಜಗತ್ತು ಪ್ಯಾಲೆಸ್ತೀನಿಯರ ಪರ ನಿಲ್ಲಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಕಳೆದ 75 ವರ್ಷಗಳಲ್ಲಿ ಇಸ್ರೇಲ್‌ ಸಾವಿರಾರು ಪ್ಯಾಲೆಸ್ತೀನಿಯರನ್ನು ಕೊಂದಿದೆ. ಹಿಂಸಿಸಿದೆ. ಪ್ಯಾಲೆಸ್ತೀನ್ ಭೂ ಭಾಗವನ್ನು ಆಕ್ರಮಿಸಿಕೊಂಡಿದೆ. ಇಸ್ತೇಲ್‌ ನೀತಿಯನ್ನು ಹಲವಾರು ರಾಷ್ಟ್ರಗಳು ವಿರೋಧಿಸಿವೆ. ಭಾರತದ ಮಹಾತ್ಮಾ ಗಾಂಧಿ, ಜವಾಹರಲಾಲ್‌ ನೆಹರು ಸೇರಿದಂತೆ ಹಲವರು ಹಾಗೂ ಭಾರತದಲ್ಲಿ ಆಡಳಿತ ನಡೆಸಿದ ಸರ್ಕಾರಗಳು ಖಂಡಿಸಿವೆ. ಆದರೆ, ಈಗ ಬಿಜೆಪಿ ಸರ್ಕಾರ ಪ್ಯಾಲೆಸ್ತೀನಿ ಪರ ನಿಲುವು ಮಂಡಿಸಿದೆ, ತಟಸ್ಥವಾಗಿ ಉಳಿದಿದೆ. ಇದು ಖಂಡನೀಯ” ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು. ಪ್ಯಾಲೆಸ್ತೀನಿಯರ ಸ್ವಾತಂತ್ರ್ಯ ಮತ್ತು ಉಳಿವಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು” ಎಂದು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್ 1

ಈ ನಡುವೆ, ಪ್ಯಾಲೆಸ್ತೀನಿ ಪರವಾದ ಕಾರ್ಯಕ್ರಮಗಳು, ಸಭೆಗಳನ್ನು ನಡೆಸಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, “ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ಧೋರಣೆಗಳನ್ನು ಜನರ ಮೇಲೆ ಹೇರುತ್ತಿವೆ. ಪೊಲೀಸರು ಸಂವಿಧಾನದಿಂದ ಆಯ್ಕೆಯಾದವರು. ಅವರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಮನ” ಎಂದು ಕಿಡಿಕಾರಿದ್ದಾರೆ.

“ಕಾಂಗ್ರೆಸ್‌ ಚುನಾವಣೆಗೂ ಮುನ್ನ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಸಾಕಷ್ಟು ಮಾತನಾಡಿತ್ತು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ರಾಜಕಾರಣಕ್ಕಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ ಕಡೆಗಣಿಸುತ್ತಿದೆ. ಕಾಂಗ್ರೆಸ್‌ ವರಿಷ್ಠರೇ ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಅದನ್ನು ಅನುಸರಿಸಲು ಕಾಂಗ್ರೆಸ್‌ ಸರ್ಕಾರ ಹಿಂದೇಟು ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿಯೂ ಮುಸ್ಲಿಮರ 2ಬಿ ಮೀಸಲಾತಿಯನ್ನು ಮರಳಿ ತರುತ್ತೇವೆ. ಜಾತಿ ಗಣತಿಯನ್ನು ಸ್ವೀಕರಿಸಿ, ಬಿಡುಗಡೆ ಮಾಡುತ್ತೇವೆ. ಸದಾಶಿವ ಆಯೋಗ, ಕಾಂತರಾಜ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುತ್ತೇವೆಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಭರವಸೆ ನೀಡಿತ್ತು. ಆದರೆ, ಈಗ ಅದಾವುದನ್ನೂ ಮಾಡದೆ, ಮೌನವಾಗಿದೆ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X