ಮಂಡ್ಯ | ಏ.21ರಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನಾ ಸಭೆ

Date:

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಏಪ್ರಿಲ್.21ರಂದು ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ.

- Advertisement -

ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ, ಬೆಳಗ್ಗೆ 11 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಲಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಈ ಸುದ್ದಿ ಓದಿದ್ದೀರಾ? ಮೈಸೂರು | ಜಾಗೃತ ಕರ್ನಾಟಕ ಸಂಘಟನೆಯಿಂದ ಯುವಜನರಿಗೆ ಏ.20ರಂದು ಭಾಷಣ–ಪ್ರಬಂಧ ಸ್ಪರ್ಧೆ

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ದರವನ್ನು ಕಾನೂನುಬದ್ಧವಾಗಿ ಜಾರಿಗೊಳಿಸದಿರುವುದನ್ನು ಖಂಡಿಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ, ಗೋಹತ್ಯೆ ನಿಷೇಧ ಹಾಗೂ ಸಂರಕ್ಷಣೆ ಕಾಯ್ದೆಗಳ ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೂ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಗುತ್ತಿದೆ.

ಪ್ರಮುಖ ಒತ್ತಾಯಗಳು:

  • ಕಬ್ಬಿನ ಬಾಕಿ ₹100 ಹಣವನ್ನು ತಕ್ಷಣ ಪಾವತಿಸುವುದು.
  • ಕೆ.ಆರ್.ಎಸ್. ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳು ಮತ್ತು ಕಾಲುವೆಗಳಿಗೆ ನೀರು ಬಿಡುಗಡೆ.
  • ಬ್ಯಾಂಕ್‌ಗಳಲ್ಲಿ ಒತ್ತೆ ಇಟ್ಟಿರುವ ಒಡವೆಗಳ ನವೀಕರಣ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ.
  • ಎನ್‌ಎಚ್-275ರಲ್ಲಿ ಅಪೂರ್ಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದು
  • ಕೃಷಿ ಪಂಪ್‌ಸೆಟ್‌ಗಳ ಅಕ್ರಮ-ಸಕ್ರಮ ಯೋಜನೆಯಲ್ಲಿ ರೈತರಿಗೆ ಅನುಕೂಲ ಕಲ್ಪಿಸುವುದು

ಜಿಲ್ಲೆಯ ರೈತರು, ಕೃಷಿ ಕಾರ್ಮಿಕರು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ರೈತ ಸಂಘ ಮನವಿ ಮಾಡಿದೆ.

ಈ ಕುರಿತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಲಿಂಗಪ್ಪಾಜಿ ಹಾಗೂ ಖಜಾಂಚಿ ಎಸ್.ಕೆ. ರವಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...