ಅಕ್ಟೋಬರ್ 5ರಂದು ಸಾರಿಗೆ ನೌಕರರ ಪ್ರತಿಭಟನೆ

Date:

ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5 ರಂದು ಪ್ರತಿಭಟನೆ ನಡೆಸಲು ನಿರ್ಧಾರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ ಎಂದು ಸಾರಿಗೆ ನಿಗಮಗಳ ಅಧ್ಯಕ್ಷ ಎಚ್‌.ಡಿ ರೇವಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಕಳೆದ ವರ್ಷ 15% ವೇತನ ಹೆಚ್ಚಳ ಮಾಡಲಾಗಿದೆ. ಆದರೆ, ಆ ಪರಿಷ್ಕೃತ ವೇತನದ ಹಣ ಇನ್ನೂ ನೌಕರರಿಗೆ ದೊರೆತಿಲ್ಲ. ಆ ವೇತನ ಹಿಂಬಾಕಿ ಹಣವನ್ನು ಪಾವತಿಸಬೇಕು. ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ನಮ್ಮ ನೌಕರರನ್ನೇ ಚಾಲಕರಾಗಿ ನೇಮಿಸಬೇಕು. ಅಲ್ಲದೆ, ಈ ಹಿಂದೆ ಪ್ರತಿಭಟನೆ ನಡೆಸಿದ್ದ ಸಮಯದಲ್ಲಿ ವಜಾಗೊಳಿಸಿದ್ದ ಎಲ್ಲ ನೌಕರರನ್ನು ವಾಪಸ್‌ ಕೆಲಸಕ್ಕೆ ನೇಮಿಸಬೇಕೆಂಬ ಹಕ್ಕೊತ್ತಾಯಗಳನ್ನು ಸರ್ಕಾರ ಮುಂಡಿಟ್ಟಿದ್ದೇವೆ” ಎಂದು ಹೇಳಿದ್ದಾರೆ.

“ಬಿಎಂಟಿಸಿಯಲ್ಲಿ ನೌಕರರ ಆತ್ಮಹತ್ಯೆ ಪ್ರಕರಣಗಳ ಹೆಚ್ಚುತ್ತಿವೆ. ಆ ಬಗ್ಗೆ ಗಮನಹರಿಸಿ, ನೌಕರರ ಆತ್ಮಹತ್ಯೆಗಳನ್ನು ತಡೆಯಬೇಕು. ನೌಕರರಿಗೆ ಶೇ.8.33 ಬೋನಸ್ ಕೊಡಬೇಕು. ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳನ್ನ ಭೇಟಿ ಮಾಡಲು ಹಾಕಿರುವ ನಿರ್ಬಂಧ ತೆಗೆಯಬೇಕು. ನೌಕರರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು” ಎಂದು ಕೆಎಸ್‌ಆರ್‌ಟಿಸಿ ವರ್ಕರ್ ಫೆಡರೇಶನ್ ಅಧ್ಯಕ್ಷ ಅನಂತ ಸುಬ್ಬರಾವ್ ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಕ್ಟೋಬರ್ 5ರಂದು ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಹೋರಾಟಕ್ಕೆ ಇಳಿಯುತ್ತಿದ್ದು, ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಬಹುದು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಬೆಂಗಳೂರನ್ನು ಅವಹೇಳನ‌ ಮಾಡುತ್ತಿರುವುದು ನಮ್ಮವರೇ: ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ್‌ ವಾಗ್ದಾಳಿ

ನಮ್ಮವರೇ ಬೆಂಗಳೂರನ್ನು ಅವಹೇಳನ‌ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...