ಕಲಬುರಗಿ | ಪ್ರತಿಭಟನಾನಿರತ ರೈತನ ಸಾವು; ಕೇಂದ್ರದ ನಡೆಗೆ ಖಂಡನೆ

Date:

ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖಾನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಶೆಲ್‍ಗಳನ್ನು ಸಿಡಿಸಿದ್ದು, ರೈತರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯನ್ನು ಖಂಡಿಸಿರುವ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು, ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಸಂಸದರ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಂಸದ ಡಾ. ಉಮೇಶ್ ಜಾಧವ್ ಅವರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಚುನಾವಣಾ ಬಾಂಡ್‍ಗಳ ಮೂಲಕ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿ ಸಾವಿರಾರು ಕೋಟಿ ರೂಪಾಯಿಗಳನ್ನು ಪಕ್ಷದ ನಿಧಿಯಾಗಿ ಸಂಗ್ರಹಿಸುತ್ತಿರುವ ಮೋದಿ ಸರ್ಕಾರವನ್ನು ಪ್ರತಿಭಟನಾಕಾರರು ಉಗ್ರವಾಗಿ ಖಂಡಿಸಿ, ರೈತರ ಬೇಡಿಕೆಗಳು ಇಡೆರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

ಪ್ರತಿಭಟನೆಯಲ್ಲಿ ಎಸ್‍ಕೆಎಂ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ಎಐಕೆಎಸ್ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಡಿಎಸ್‍ಎಸ್ ರಾಜ್ಯ ಸಂಚಾಲಕ ಎಸ್.ಆರ್.ಕೊಲ್ಲೂರ್, ರೈತ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ನಾಗೇಂದ್ರಪ್ಪ ಥಂಬೆ ಸೇರಿದಂತೆ ಪ್ರಮುಖರಾದ ಪದ್ಮಿನಿ ಕಿರಣಗಿ, ಎಂ.ಬಿ.ಸಜ್ಜನ್, ಮೇಘರಾಜ ಕಠಾರೆ, ಜಾವೇದ್ ಹುಸೇನ್, ನಾಗಯ್ಯ ಸ್ವಾಮಿ, ಸುಧಾಮ ಧನ್ನಿ, ಸಾಜೀದ್ ದಿಗ್ಗಾಂವಕರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...