ಒತ್ತುವರಿ ತೆರವು ಅಧಿಕಾರಿಗಳ ಪರ ಹಾಗೂ ವಿರುದ್ಧ ಪ್ರತಿಭಟನೆ

Date:

ಚಿಂತಾಮಣಿ:ರಸ್ತೆಗೆ ಅಡ್ಡಲಾಗಿ ನಿರ್ಮಿಸಿರುವ ಶೌಚಾಲಯವನ್ನು ಸ್ಥಳಾಂತರ ಗೊಳಿಸುವಂತೆ ಪಂಚಾಯಿತಿಯಿಂದ ನೋಟಿಸ್ ನೀಡಿದ್ದರು ನೋಟಿಸ್ ಗೆ ಕ್ಯಾರೆ ಎನ್ನದ ಒತ್ತುವರಿದಾರರು ಅಧಿಕಾರಿಗಳೇ ಖುದ್ದಾಗಿ ತೆರವು ಕಾರ್ಯಾಚರಣೆ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿದಾರರು ಚಿಂತಾಮಣಿ ನಗರದ ತಾಲೂಕು ಪಂಚಾಯಿತಿ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸಿದರು.

- Advertisement -

ಮಂಗಳವಾರ ಬೆಳಗ್ಗೆಯಿಂದ ಚಿಂತಾಮಣಿ ತಾಲ್ಲೂಕಿನ ಕುರುಬರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಕಲ್ಲು ಗ್ರಾಮದವರಾದ ನರಸಿಂಹಪ್ಪ ರವರ ಕುಟುಂಬದವರು ತಾಲೂಕು ಪಂಚಾಯಿತಿ ಆವರಣದ ಬಳಿ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಟ್ಟು ಪ್ರತಿಭಟನೆಗೆ ಮುಂದಾಗಿ ಮಾತನಾಡಿದವರು ಏಕಾಏಕಿ ಅಧಿಕಾರಿಗಳು ನಾವು ಕಟ್ಟಿಕೊಂಡಿರುವ ಮನೆ ಹಾಗೂ ಶೌಚಾಲಯವನ್ನು ತೆರುವುಗೊಳಿಸಿದ್ದಾರೆ ಇದರಿಂದ ನಮಗೆ ಅನ್ಯಾಯವಾಗಿದೆ ಅನ್ಯಾಯ ದೊರಕಿಸಿ ಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಇನ್ನೂ ಬುಧವಾರದ ಬೆಳಗ್ಗೆ ಅದೇ ತಾಲ್ಲೂಕು ಪಂಚಾಯಿತಿ ಎದುರುಗಡೆ ಸದರಿ ಗ್ರಾಮದ ಶಿವಣ್ಣ ರವರ ನೇತೃತ್ವದಲ್ಲಿ ಹಲವು ಮಂದಿ ಅಧಿಕಾರಿಗಳ ಪರವಾಗಿ ನಿಂತು ಪ್ರತಿಭಟನೆ ಮಾಡಿದ ಅವರುಗಳು ಸಹ ಮಾತನಾಡಿ ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿ ನರಸಿಂಹಪ್ಪ ರವರ ಕುಟುಂಬದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ!ಅಧಿಕಾರಿಗಳು ಕಾನೂನು ಬದ್ಧವಾಗಿ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಶೌಚಾಲಯವನ್ನು ತೆರವು ಗೊಳಿಸಿರುವುದು ಸರಿಯಾಗಿದೆ!ವಿನಾಕಾರಣ ಅಧಿಕಾರಿಗಳಿಗೆ ಈ ರೀತಿ ಪ್ರತಿಭಟನೆ ಮಾಡಿ ತೊಂದರೆ ನೀಡುವುದು ಸರಿ ಇಲ್ಲ ಎಂದು ದೂರಿದರು.

ಇನ್ನೂ ಇದನ್ನು ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ್ ರವರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಮಾತನಾಡಿದಾಗ ನರಸಿಂಹಪ್ಪ ರವರ ಕುಟುಂಬದವರು ರಸ್ತೆಗೆ ಅಡ್ಡಲಾಗಿ ಶೌಚಾಲಯವನ್ನು ನಿರ್ಮಿಸಿದ್ದರು.ಒತ್ತುವರಿದಾರರಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ನೀಡಿ ಶೌಚಾಲಯವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಓಡಾಡಲು ರಸ್ತೆ ಅನುಕೂಲ ಮಾಡಿಕೊಡಲಾಗಿದೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ..? ಅರಣ್ಯ ಅಧಿಕಾರಿಗಳ ಕಿರುಕುಳ ಇತ್ಯರ್ಥಕ್ಕೆ ರೈತರಿಂದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಮುನಿಸ್ವಾಮಿ, ಮಂಜುನಾಥ್,ಗೋವಿಂದಪ್ಪ,ದೇವರಾಜ್,ಆನಂದಮ್ಮ, ನಂದಿನಿ,ಶಿಲ್ಪ,ಪ್ರಭ,ಸೀತಮ್ಮ,ಮಾಲತಿ,ಕವಿತಮ್ಮ,ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...