ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

Date:

Advertisements

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಕಲಬುರಗಿ,ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಬುಧವಾರ ಕಲಬುರಗಿ ಹಾಗೂ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ರಾಜ್ಯದಲ್ಲಿ ಇದುವರೆಗೂ ಆಡಳಿತ ನಡೆಸಿದ ಸರ್ಕಾರಗಳು ಶಿಕ್ಷಣದ ಗುಣಮಟ್ಟದ ಸುಧಾರಣೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸರ್ಕಾರವು ಶಿಕ್ಷಣದ ಖಾಸಗೀಕರಣಕ್ಕೆ ಉತ್ತೇಜನ ಕೊಡುತ್ತಿರುವುದು ಏಕೆ? ಸರ್ಕಾರಿ ಶಾಲೆಗಳು ಖಾಸಗೀಕರಣವಾದರೆ ಶೇ 80ಕ್ಕೂ ಅಧಿಕ ಬಡವರ ಮಕ್ಕಳಿಗೆ ಅನ್ಯಾಯವಾಗಲಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಸರ್ಕಾರಿ ಶಾಲೆಗಳ ಸುಧಾರಣೆಗೆ ಆಗ್ರಹಿಸಿ ಕಳೆದ ಎರಡು ವರ್ಷದಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬರುತ್ತಿದ್ದೇವೆ. ಆದರೆ, ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿನ ಎಲ್ಲ ಹುದ್ದೆಗಳು ಭರ್ತಿ ಆಗುವವರೆಗೂ ಶೇ 100ರಷ್ಟು ಅತಿಥಿ ಶಿಕ್ಷಕರನ್ನು ಭರ್ತಿ ಮಾಡಬೇಕು. ವಿಷಯವಾರು, ತರಗತಿವಾರು ಶಿಕ್ಷಕರನ್ನು ನೇಮಕ ಮಾಡಬೇಕು. ಶಿಕ್ಷಣದ ಗುಣಮಟ್ಟ ಸುಧಾರಣೆಗೆ ತಕ್ಷಣವೇ ಕ್ರಿಯಾ ಯೋಜನೆಯನ್ನು ರೂಪಿಸಿ, 3 ತಿಂಗಳ ಒಳಗಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ತರಗತಿ ಕೊಠಡಿಗಳು, ಬೆಂಚ್, ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ವ್ಯವಸ್ಥೆ ಕಲ್ಪಿಸಿ, ವಿದ್ಯಾರ್ಥಿನಿಯರಿಗೆ ಪ್ಯಾಡ್‌ಗಳ ವಿತರಣೆ ಮಾಡಬೇಕು. ಪ್ರತಿ ಶಾಲೆಗೆ ಒಬ್ಬ ಪರಿಚಾರಕರನ್ನು ನೇಮಿಸಬೇಕು. ಶಾಲೆಗಳ ಸ್ಥಿತಿಗತಿ ಕುರಿತು ಡಿಡಿಪಿಐ ಶ್ವೇತಪತ್ರ ಬಿಡುಗಡೆ ಮಾಡಬೇಕು. ಕೆಕೆಆರ್‌ಡಿಬಿ, ಶಿಕ್ಷಣ ಆಯುಕ್ತರು 2 ತಿಂಗಳ ಒಳಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 07 03 at 6.40.16 PM
ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಪ್ರಮುಖರಾದ ಗುರುನಾಥ, ರೇಷ್ಮಾ, ಸುನೀತಾ, ಪ್ರಕಾಶ್ ಆಳಂದ, ಮಹಾಲಕ್ಷ್ಮಿ, ಸುಶೀಲಮ್ಮ, ಮಲ್ಲಪ್ಪ, ಶರಣೆಗೌಡ, ವಿಜಯಲಕ್ಷ್ಮಿ, ಸವಿತಾ ವಿಜಯಲಕ್ಷ್ಮಿ,ಕಾಳಮ್ಮ, ಸ್ವಪ್ನಾ ರೀನಾ ಮತ್ತಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X