ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯ ಒದಗಿಸಿ: ಕರವೇ ಒತ್ತಾಯ 

Date:

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಸೌಲಭ್ಯ ಹಾಗೂ ರಶೀದಿಗೆ ಮುನ್ನ ತುರ್ತು ಚಿಕಿತ್ಸೆಗೆ ಮೊದಲು ಆದ್ಯತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಗುರುವಾರದಂದು ಜಿಲ್ಲಾ ಸರ್ಜನ್ ಸಿ ಮೋಹನ್‌ ಕುಮಾರ್‌ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. 

- Advertisement -

“ಜಿಲ್ಲಾ ಆಸ್ಪತ್ರೆಯ ಶೌಚಾಲಯ ಸೇರಿದಂತೆ ಹಲವು ಕಡೆ ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ರೋಗಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ನೀರು ಹಾಗೂ ಶೌಚಾಲಯದ ಸಮಸ್ಯೆ ಎದ್ದುಕಾಣುತ್ತಿದೆ. ಅಲ್ಲದೆ, ಹೊರಾಂಗಣದಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆಯಿಂದ ಇನ್ನಷ್ಟು ಸಮಸ್ಯೆಗಳು ಉದ್ಭವಿಸುತ್ತಿವೆ” ಎಂದು ಕರವೇ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್ ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಇತ್ತೀಚಿನ ಆಹಾರ ಪದ್ಧತಿಯಿಂದ ಖಾಯಿಲೆಗಳು ಹೆಚ್ಚುತ್ತಿವೆ: ಡಾ ಸುಂದರ ಗೌಡ 

“ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುವ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲವೆಂಬ ಆರೋಪಗಳು ಕೇಳಿಬರುತ್ತಿವೆ. ಕಳೆದ ಕೆಲ ದಿನಗಳ ಹಿಂದೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವೇಳೆ ರೋಗಿಗಳ ಪರದಾಟ ಹೇಳತೀರದಾಗಿದೆ. ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕೆಲವು ವೈದ್ಯರು ಖಾಸಗಿ ಕ್ಲಿನಿಕ್‌ಗಳನ್ನು ತೆರೆದಿದ್ದಾರೆ. ಕ್ಲಿನಿಕ್‌ನಲ್ಲಿ ರೋಗಿಗಳಿಗೆ ತೋರುವ ವಿಶೇಷ ಕಾಳಜಿಯನ್ನು, ಸರ್ಕಾರಿ ಆಸ್ಪತ್ರೆಯ ಕರ್ತವ್ಯದಲ್ಲಿ ತೋರದೆ ರೋಗಿಗಳಿಗೆ ತಾರತಮ್ಯ ಮಾಡುತ್ತಿದ್ದಾರೆ” ಎಂದು ಕರವೇ ಕಾರ್ಯಕರ್ತರು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...