ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ

Date:

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡುವಂತೆ ಸೂಚಿಸಿದರು.

- Advertisement -

ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಜನರನ್ನು ಸತಾಯಿಸಬಾರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಕಾಲ ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡದಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಆದ್ದರಿಂದ, ಅಧಿಕಾರಿಗಳು ಸಮಯವನ್ನು ವ್ಯರ್ಥ ಮಾಡದೆ ಕಚೇರಿ ಕೆಲಸವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು.

ಕರ್ತವ್ಯದ ದಿನಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕಚೇರಿ ಕೆಲಸ ಮಾಡಿದ್ದಲ್ಲಿ, ಎಷ್ಟೇ ಒತ್ತಡ ಇದ್ದರೂ ಸಹ ಸಾರ್ವಜನಿಕ ಕೆಲಸಗಳನ್ನು ಪೂರ್ಣಗೊಳಿಸಬಹುದು, ಆ ನಿಟ್ಟಿನಲ್ಲಿ ಇಚ್ಛಾಶಕ್ತಿ ಇರಬೇಕು ಎಂದು ಸಲಹೆ ಮಾಡಿದರು.

ಮೇ ಕೊನೆ ವಾರದಲ್ಲಿ ಜಿಲ್ಲೆಗೆ ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ, ಮುಂಗಾರು ಸಂದರ್ಭದಲ್ಲಿ ಕಳೆದ ಬಾರಿಯಂತೆಯೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸರ್ಕಾರದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕು. ದಾಖಲಾತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಮಹಾ ಲೇಖಪಾಲಕರ ಆಡಿಟ್ ಕಂಡಿಕೆಗಳಿಗೆ ಮಾಹಿತಿ ನೀಡಲು ಬಾಕಿ ಇದ್ದು, ಕೂಡಲೇ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ವಿವಿಧ ಇಲಾಖೆಗಳು ಈಗಿನಿಂದಲೇ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಜೊತೆಗೆ ಪ್ರಗತಿ ಸಾಧಿಸಬೇಕು.

ಈ ಸುದ್ದಿ ಓದಿದ್ದೀರಾ? ಮೈಸೂರು | ವ್ಯಸನ ಮುಕ್ತ ಜೀವನಕ್ಕೆ ಆದರ್ಶ ಮೌಲ್ಯಗಳು ಅಡಿಗಲ್ಲಾಗಬೇಕು : ಡಾ. ಜೆ. ಲೋಹಿತ್

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ, ಕಾರ್ಮಿಕ ಅಧಿಕಾರಿ ಕಾವೇರಿ, ತಹಶೀಲ್ದಾರರಾದ ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಹೇಮಂತ್ ಕುಮಾರ್, ತಾಪಂ.ಇಒಗಳು, ಕೃಷಿ, ಸೆಸ್ಕ್, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...