ಅತಿಥಿ ಉಪನ್ಯಾಸಕರ ಉದ್ಯೋಗ ಭದ್ರತೆಗೆ ಸಂಘದ ಒತ್ತಾಯ

Date:

ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಉದ್ಯೋಗ ಭದ್ರತೆ ನೀಡಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಒತ್ತಾಯಿಸಿದೆ.

ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮನಿ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಆಗ ಅವರನ್ನು ಭೇಟಿ ಮಾಡಿ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದ್ದೆವು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಈಗ, ಅವರೇ ಮುಖ್ಯಮಂತ್ರಿಯಾಗಿದ್ದಾರೆ. ನಮಗೆ ಉದ್ಯೋಗ ಭದ್ರತೆ ಒದಗಿಸಬೇಕು” ಎಂದರು.

“ಕಾಂಗ್ರೆಸ್‌ ತನ್ನ ಪ್ರಣಾಳಿಯಲ್ಲಿಯೂ ನಮ್ಮ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದೆ. ಹೀಗಾಗಿ, ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಅತಿಥಿ ಉಪನ್ಯಾಸಕರಿಗೆ ವರ್ಷದಲ್ಲಿ ಹತ್ತು ತಿಂಗಳ ಬದಲು, ಇಡೀ ವರ್ಷದ ವೇತನ ನೀಡಬೇಕು” ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ವಿನೋದಚಂದ ಪೀಟರ್, ಪ್ರೊ. ದಿವ್ಯಾ ಪರಾಂಡೆ, ಪ್ರೊ. ವಿಜಯಲಕ್ಷ್ಮಿ ಜೋಶಿ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ...

ಧಾರವಾಡ | ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳ ಬಂಧನ

ಧಾರವಾಡದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಕೊಲೆ...

ಧಾರವಾಡ | ಕುಸ್ತಿಪಟುಗಳ ಹೋರಾಟ ಬೆಂಬಲಿಸಿದವರ ಬಂಧನ ಖಂಡಿಸಿ ಪ್ರತಿಭಟನೆ

ಬ್ರಿಜ್ ಭೂಷಣ್ ಪರವಾಗಿ ಕೇಂದ್ರ ಸರ್ಕಾರ ನಿಂತಿರುವುದು ನಿಜಕ್ಕೂ ಖಂಡನೀಯ ಕುಸ್ತಿಪಟುಗಳ ಹೋರಾಟ...

ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

'ಕೇಂದ್ರ ಸರ್ಕಾರಕ್ಕೆ 9 ವರ್ಷ, ನರೇಂದ್ರ ಮೋದಿ ಆಡಳಿತ ಮುಂದುವರೆಯಲಿʼ 'ಐದು ಗ್ಯಾರಂಟಿಗಳ...