ಕೋಲಾರ | ಉದ್ಯಮ ಕಟ್ಟಿ, ಉದ್ಯೋಗದಾತರಾಗಿ : ಮಂಗಳಾನಂದನಾಥ ಸ್ವಾಮೀಜಿ ಕರೆ

Date:

Advertisements

ಜಿಲ್ಲೆಯ ಒಕ್ಕಲಿಗರು ಅರಿವಿನ ಮತ್ತು ಆರ್ಥಿಕ ಪರಿಸ್ಥಿತಿಯ ಕೊರತೆಯಿಂದಾಗಿ ಉದ್ಯಮ ಕ್ಷೇತ್ರದಿಂದ ಹಿಂದಿದ್ದಾರೆ. ಕೇವಲ ಕೃಷಿಗೆ ಸೀಮಿತವಾಗದೆ ಉದ್ಯಮಗಳನ್ನು ಕಟ್ಟಿ, ಉದ್ಯೋಗದಾತರಾಗಿ ಎಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಕರೆ ನೀಡಿದರು.

ಕೋಲಾರ ನಗರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಭಾನುವಾರ ಉದ್ಯಮಿ ಒಕ್ಕಲಿಗ ಫಸ್ಟ್ ಸರ್ಕಲ್ ಸೊಸೈಟಿಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗಹಿಸಿ ಅವರು ಮಾತನಾಡಿದರು.

ಕೋಲಾರ ಜಿಲ್ಲೆಯ ಜನ ಶ್ರಮಜೀವಿಗಳು. ಬದಲಾವಣೆಗನುಗುಣವಾಗಿ ಸ್ಪರ್ಧೆ ಎದುರಿಸಲು ಸನ್ನದ್ದರಾಗಬೇಕು. ವಿವಿಧ ಕ್ಷೇತ್ರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಿ, ಮುಂದಿನ ಪೀಳಿಗೆಗೆ ಸಹಕಾರಿಯಾಗುವಂತೆ ಮಾಡಬೇಕು ಎಂದರು.

Advertisements
ಕೋಲಾರ 12

ರಾಜ್ಯ ಜಲಸಾರಿಗೆ ಮಂಡಳಿಯ ಸಿಇಒ ಜಯರಾಮ್ ರಾಯಪುರ ಮಾತನಾಡಿ, ಗಂಗರು, ಅರಸರ ಕಾಲದಿಂದಲೂ ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯವನ್ನು ಕಟ್ಟಿ ಆಳಿದ್ದಾರೆ. ನಾವುಗಳು ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು. ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ, ಉದ್ಯೋಗ ನೀಡುವ ಉದ್ಯಮಿಯಾಗಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಒಕ್ಕಲಿಗರು ರಾಜಕೀಯದಲ್ಲಿ ಬಲಿಷ್ಠವಾಗಿದ್ದಾರೆ. ಆದರೆ ಉದ್ಯಮ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ. ಸಮುದಾಯವು ಕಡಿಮೆ ಇರುವ ದಕ್ಷಿಣ ಕನ್ನಡ ಜಿಲ್ಲೆಗೆ ಹೋಲಿಕೆ ಮಾಡಿದರೆ ಇಲ್ಲಿ ಶೇ.1ರಷ್ಟು ಮಾತ್ರವೇ ಉದ್ಯಮದಲ್ಲಿ ಇದ್ದಾರೆ. ಇದರಲ್ಲಿ ರಾಜಕಾರಣಿಗಳ ಹೊಣೆಗಾರಿಕೆ ಹೆಚ್ಚಾಗಬೇಕು. ಸಮುದಾಯದಲ್ಲಿ ಪರಸ್ಪರ ಒಗ್ಗಟ್ಟಿನಿಂದ ಅರಿವು, ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಕೈಜೋಡಿಸಿ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜಿಲ್ಲೆಯ ಜನ ಕೃಷಿಯ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ್ದಾರೆ. ಆದರೆ ಉದ್ಯಮದಲ್ಲಿ ಅರಿವಿನ ಕೊರತೆಯಿಂದ ಕೈಗಾರಿಕೆಗಳನ್ನ ಸ್ಥಾಪಿಸಿ, ಕೈ ಸುಟ್ಟುಕೊಂಡಿದ್ದಾರೆ ಯುವಕರಿಗೆ ಮಾರ್ಗದರ್ಶನ ನೀಡಿದರೆ ಭವಿಷ್ಯದ ಉದ್ಯಮಗಳಾಗಲಿದ್ದು ಬೇರೆಯವರಿಗೂ ಉದ್ಯೋಗ ನೀಡುವಂತಾಗುತ್ತಾರೆ ಎಂದರು.

ಫಸ್ಟ್ ಸರ್ಕಲ್ ಸೊಸೈಟಿ ಜಿಲ್ಲಾ ಗೌರವ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಮಾತನಾಡಿ, ಮನುಷ್ಯನ ಜೀವನಕ್ಕೆ ಉದ್ಯೋಗ ಮುಖ್ಯವಾಗಿದೆ. ಒಕ್ಕಲಿಗ ಉಪ ಜಾತಿಗಳಿಂದ ಸಮುದಾಯಕ್ಕೆ ಮಾರಕವಾಗಿದೆ. ನಮ್ಮಲ್ಲಿಯೇ ಒಗ್ಗಟ್ಟಿಲ್ಲ. ಉಪಜಾತಿಗಳ ಮನಸ್ಥಿತಿಯಿಂದ ಹೊರಬಂದು ನಾವು ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಉದ್ಯಮ ಮಾಡಿ ಬೇರೆಯವರನ್ನು ಬೆಳೆಸುವ ಗುಣ ಬೆಳೆಸಿಕೊಳ್ಳೋಣ ಎಂದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಬಿಸಿ ಗಾಳಿ ಬೀಸುತ್ತಿದೆ – ತಾಪಮಾನ ಏರುತ್ತಿದೆ; ಪ್ರಕೃತಿ ತಿರುಗಿ ಬೀಳಲಿದೆ!

ಕಾರ್ಯಕ್ರಮದಲ್ಲಿ ಎಂಎಲ್‌ಸಿ ಇಂಚರ ಗೋವಿಂದರಾಜು, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಐಎಎಸ್ ಅಧಿಕಾರಿ ಕೆ.ಆರ್.ನಂದಿನಿ, ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್, ನೀರಾವರಿ ಹೋರಾಟಗಾರ ಆಂಜನೇಯರೆಡ್ಡಿ, ಉದ್ಯಮಿ ಡೆಕ್ಕನ್ ರಾಮಕೃಷ್ಣಪ್ಪ, ವೈದ್ಯ ಕೃಷ್ಣಪ್ಪ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X