ಹಾವೇರಿ, ಜಾನಪದ  ವಿವಿಗಳಿಗೆ ಅಗತ್ಯ ಅನುದಾನ ಒದಗಿಸಿ; ವಿವಿ ಉಳಿಸಿ ಹೋರಾಟ ಸಮಿತಿ ಒತ್ತಾಯ

Date:

ಜಿಲ್ಲೆಯ ಹಾವೇರಿ ವಿಶ್ವವಿದ್ಯಾಲಯ ಮತ್ತು ಜಗತ್ತಿನ ಏಕೈಕ ಜಾನಪದ ವಿಶ್ವವಿದ್ಯಾಲಯಗಳಿಗೆ ಮುಂಬರುವ 2026 ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಿ‌ ಈ ಎರಡೂ ವಿಶ್ವ ವಿದ್ಯಾಲಯಗಳು ಅಭಿವೃದ್ಧಿಯಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ವಿಶ್ವವಿದ್ಯಾಲಯ ಉಳಿಸಿ‌ ಹೋರಾಟ ಸಮಿತಿ ವತಿಯಿಂದ ಬುಧವಾರ ಮುಖ್ಯಮಂತ್ರಿಗಳು ಸಿದ್ಧರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜಿಲ್ಲೆಯಲ್ಲಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯ ಮತ್ತು ಜಗತ್ತಿನ ಏಕೈಕ ಜಾನಪದ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತ್ತಕೋತ್ತರ ಪದವಿಯ ವಿವಿಧ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ನೂರಾರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ ಬಹುತೇಕರು ಖಾಯಂಯೇತರ ಸಿಬ್ಬಂದಿಗಳಿದ್ದಾರೆ. ಸಂಬಳ ನೀಡಲಾಗದೇ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡುವ ಸ್ಥಿತಿ ನಿರ್ಮಾಣವಾಗಿದೆ” ಎಂದರು.

“ಅಲ್ಲದೇ ಅಗತ್ಯ ಅನುದಾನ ಇಲ್ಲದೇ, ಅಗತ್ಯ ಕಟ್ಟಡಗಳು, ಉಪಕರಣಗಳು, ಸಿಬ್ಬಂದಿ ಕೊರತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ವಿ.ವಿಗಳು ಅಭಿವೃದ್ಧಿ ಹೊಂದಲು ಸಮಸ್ಯೆಯಾಗುತ್ತಿದೆ. ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೂ ಸಹ ತೊಂದರೆಯಾಗುತ್ತಿದೆ” ಎಂದು ಹೇಳಿದರು.

“ಕೂಡಲೇ ಹಾವೇರಿ ವಿಶ್ವವಿದ್ಯಾಲಯ ಹಾಗೂ ಜಾನಪದ ವಿಶ್ವವಿದ್ಯಾಲಯಗಳಿಗೆ ಮುಂಬರುವ 2026 ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಿ‌, ಈ ಎರಡೂ ವಿಶ್ವ ವಿದ್ಯಾಲಯಗಳು ಅಭಿವೃದ್ಧಿಯಾಗಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿಯಲ್ಲಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಮುಖಂಡರು ಬಸವರಾಜ ಪೂಜಾರ, ಪರಿಮಳ ಜೈನ, ಸತೀಶ್ ಎಂ.ಬಿ, ಲಕ್ಷ್ಮೀಪ್ರಭ ಎಸ್ ಹುಲ್ಲೂರು, ಮಜೀದ್ ಎಸ್.ಎಚ್, ಮಂಜುನಾಥ ಸಣ್ಣಿಂಗಣ್ಣನವರ, ಖಲಂದರ ಅಲ್ಲಿಗೌಡ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...