ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್

Date:

Advertisements

ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್(Basanagouda Patil Yatnal) ವಿರುದ್ಧ ಎಫ್‌ಐಆರ್(FIR) ದಾಖಲಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌.

“ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್‌, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದು, ಶಾಂತಿ ಸೌಹಾರ್ದತೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Advertisements

“ಯತ್ನಾಳ ಅವರು ‘ಬಾಳ ಸಾಬ್ ಠಾಕ್ರೆ ಮನೆಯಲ್ಲಿ ಮುಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂಬ ಆಧಾರರಹಿತ ಹೇಳಿಕೆ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆಯಿದೆ” ಎಂದು ದೂರುದಾರರು ತಿಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ವಿಜಯನಗರ | ಬೆಲೆ ಕುಸಿತ; ಈರುಳ್ಳಿ, ಟೊಮೆಟೊ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ

“ಯತ್ನಾಳ ಅವರ ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ(BNS)ಯ ಸೆಕ್ಷನ್‌ಗಳಾದ 196(ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಹೇಳಿಕೆ), 299(ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಶಾಂತಿ ಭಂಗಪಡಿಸುವ ಉದ್ದೇಶದಿಂದ) ಮತ್ತು 353(ಕೋಮು ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಗರ್ಭಗುಡಿಯ ಪ್ರಧಾನ ಅರ್ಚಕರನ್ನು ಮೆಚ್ಚಿಸಲು ಮಾನಸಿಕ ಅಸ್ವಸ್ಥರಂತೆ ವರ್ತಿಸುವ ಲಿಂಗಾಯತ,, ಶೋಚನೀಯ ಸ್ಥಿತಿ,,, ಆದರೆ ಇವರಿಗೆ ಸತ್ಯ ಗೊತ್ತಿದೆಯೋ ಇಲ್ಲವೋ,, ಇವರು ಯಾರನ್ನು ಮೆಚ್ಚಿಸಲು ತಮ್ಮ ಸ್ವಾಭಿಮಾನ ಬಿಟ್ಟು ದೊಂಬರಾಟ ಮಾಡುವರೋ ಅವರಿಗೆ ಮುಸ್ಲಿಂ ಸಮುದಾಯದ ಮೇಲೆ ಅಂತರಂಗದಲ್ಲಿ ಯಾವುದೇ ದ್ವೇಷ ಇಲ್ಲ, ಯಾಕೆಂದ್ರೆ ಅವರೊಂದಿಗೆ ಬೀಗತನ ಮಾಡಿದ್ದಾರೆ,,ನಿಜ ದ್ವೇಷ ಇರುವುದು ರಾಜ್ಯದಲ್ಲಿ ಬಹುಸಂಖ್ಯಾತ ಲಿಂಗಾಯತ ಒಕ್ಕಲಿಗ ಮತ್ತು ಹಿಂದುಳಿದ ವರ್ಗಗಳ ಮೇಲೆ,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X