ಯಾದಗಿರಿ | ಪ್ರಚೋದನಕಾರಿ ಹೇಳಿಕೆ ಆರೋಪ : ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

Date:

Advertisements

ಕೋಮುಭಾವನೆ ಧಕ್ಕೆ ಹಾಗೂ ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ ಸೇರಿ ಐವರ ವಿರುದ್ಧ ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿ ಹಿಂದೂ-ಮುಸ್ಲಿಂ ಬಗ್ಗೆ ಪ್ರಚೋದನಕಾರಿ ನೀಡುವ ರೀತಿಯಲ್ಲಿ ಮಾತನಾಡಿದ್ದರು. ಹೀಗಾಗೊ ಗಲಭೆಗೆ ಪ್ರಚೋದನೆ ನೀಡುವ ರೀತಿ ಮಾತನಾಡಿದ್ದು ವಿಡಿಯೊದಲ್ಲಿ ಕಂಡು ಬಂದಿದ್ದರಿಂದ ಕಲಂ 299, 192 ಬಿಎನ್‌ಎಸ್ -2023 ಅಡಿಯಲ್ಲಿ ಪಿಎಸ್‌ಐ ಶ್ಯಾಮಸುಂದರ್ ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರತಾಪ ಸಿಂಹ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಗಣೇಶ ವಿಸರ್ಜನೆ ವೇಳೆ ಮಾತನಾಡಿ, ʼಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾʼ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ವಿಪಕ್ಷದವರ ರಾಜಕೀಯ ದುರುದ್ದೇಶ‌ ಬಯಲು ಮಾಡುತ್ತೇವೆ: ಸಚಿವ ಪರಮೇಶ್ವರ್

ಕಾರ್ಯಕ್ರಮದ ಆಯೋಜಕರಾದ ಕರಣ ಸುಬೇದಾರ, ಶಿವಕುಮಾರ ಶಿರವಾಳ, ಗುರುರಾಜ ಕಾಮಾ, ನಾಗಭೂಷಣ ಸೇರಿ ಐವರು ವಿರುದ್ಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X