ವಿಜಯಪುರ | ಪಿಎಸ್ಐ ಪರಶುರಾಮ ಪ್ರಕರಣವನ್ನು ಸಿಬಿಐಗೆ ವಹಿಸಿ: ದಲಿತ ಸಂಘಟನೆಗಳ‌ ಒಕ್ಕೂಟ ಆಗ್ರಹ

Date:

ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅನುಮಾನಾಸ್ಪದವಾಗಿ ಸಾವಿಗಿಡಾದ ಪಿಎಸ್ಐ ಪರಶುರಾಮ ಅವರ ಸಾವಿನ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ದಲಿತ ಸಂಘಟನೆಗಳ‌ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ದಲಿತ ಮುಖಂಡ ಪರಶುರಾಮ ಲಂಬು ಅವರ ನೇತೃತ್ವದಲ್ಲಿ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ರ್ಯಾಲಿ ಹೊರಟು ಜಿಲ್ಲಾಧಿಕಾರಿಕಾರಿಗಳ ಮುಖಾಂತರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪರಶುರಾಮ ಸಾವಿನ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವಹಿಸಬೇಕು. ಯಾದಗಿರಿಯ ಶಾಸಕರಾದ ಚನ್ನಾರಡ್ಡಿ ಹಾಗೂ ಆತನ ಮಗ ಹಂಪನಗೌಡ ಇವರನ್ನು ಕಿರುಕುಳದ ಹಿನ್ನೆಲೆಯಲ್ಲಿ ಪಿಎಸ್ಎ ಪರಶುರಾಮ ಅನುಮಾನಾಸ್ಪದ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಪಿಎಸ್‌ಐ ಪತ್ನಿ ನೀಡಿರುವ ದೂರಿನ ಆಧಾರದ ಮೇಲೆ ಶಾಸಕ ಹಾಗೂ ಅವನ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕೂಡಲೇ ಇವರನ್ನು ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.

ವಿಜಯಪುರ2

ರಾಜ್ಯ ಮತ್ತು ಕೇಂದ್ರ ಸರ್ಕಾರವು ಗಂಭೀರವಾಗಿ ಈ ಪ್ರಕರಣವನ್ನು ಪರಿಗಣಿಸಬೇಕು. ಇಲ್ಲಿಯವರೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ. ದಲಿತ ವರ್ಗಕ್ಕೆ ಸೇರಿದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಭಯಬೀತರಾಗಿದ್ದಾರೆ. ವರ್ಗಾವಣೆ, ಹಣ ಬೇಡಿಕೆ ಅಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕಬೇಕು, ಪಿ.ಎಸ್.ಐ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ರಮೇಶ ಕವಲಗಿ, ಮತಿನ್‌ ಕುಮಾರ ದೇವದಾರ, ಪರಶುರಾಮ ಛಲವಾದಿ, ಅಜಯ ಬೋರಗಿ, ವೀರೇಶ್ ವಾಲಿಕಾರ, ಮಾರುತಿ ಬೂದಿಹಾಳ, ಶಾಸ್ತ್ರಿ ಹೊಸಮನಿ, ಹಣಮಂತ ನಾಟೆಕಾರ, ಚೆನ್ನು ಕಟ್ಟಿಮನಿ, ಯಮನಪ್ಪ ಸಿದರೆಡ್ಡಿ, ಮಹಾದೇವ ಕಾಂಬಳೆ, ರಮೇಶ ಛಲವಾದಿ, ಗೋಪಿ ಛಲವಾದಿ, ಸುರೇಶ ಸಿಂಗೆ, ರಮೇಶ ಬೋರಗಿ, ರಾಜಶೇಖರ ಕುದರಿ, ದಯಾನಂದ ಹಾಯಲ್ಯಾಳ, ಸುನಿಲ್ ಸೂರ್ಯವಂಶಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...