ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದಿಂದ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿಯ ಎಸ್‌ಸಿ-ಎಸ್‌ಟಿ ಸರಕಾರಿ, ಅರೆ ಸರಕಾರಿ ನೌಕರರ ಜಿಲ್ಲಾ ಸಂಘದ ವತಿಯಿಂದ ಯಾದಗಿರಿ ನಗರದ ಸುಭಾಷಚಂದ್ರ ವೃತ್ತದಿಂದ, ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರಮಾಣದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ದಲಿತ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.