ಬೀದರ್‌ | ಕುಂದು ಕೊರತೆ : ಮೂಲ ಸೌಕರ್ಯ ಕಲ್ಪಿಸಿ, ಸ್ವಚ್ಛತೆಗೆ ಆದ್ಯತೆ ಕೊಡಿ

Date:

ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವೆಡೆ ಮನೆಯ ಗೋಡೆಗಳು ಕುಸಿಯುತ್ತಿವೆ. ಇನ್ನು ಹಳ್ಳಿಗಳಲ್ಲಿ ಸೂಕ್ತ ಚರಂಡಿ, ಸಿಸಿ ರಸ್ತೆ ಸೇರಿದಂತೆ ಶುದ್ಧ ಕುಡಿಯುವ ನೀರಿನ ಸಮಸ್ಯೆ  ಎದುರಾಗಿದೆ.

- Advertisement -

ಈ ಬಗ್ಗೆ ಈದಿನ.ಕಾಮ್‌ ಬೀದರ್‌ ಸಹಾಯವಾಣಿ ನಂಬರ್‌ಗೆ ಕಳುಹಿಸಿದ ಸಾರ್ವಜನಿಕರ ಕುಂದು ಕೊರತೆ ಇಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಭಾಲ್ಕಿ : ಎರಡು ದಶಗಳಿಂದ ಸಿಸಿ ರಸ್ತೆ, ಚರಂಡಿ ಕಾಣದ ಓಣಿ

ತಾಲೂಕಿನ ಗ್ರಾಮ ಪಂಚಾಯತ್‌ ಕೇಂದ್ರ ಸ್ಥಾನ ಹೊಂದಿರುವ ಬೀರಿ(ಬಿ) ಗ್ರಾಮದ ಎರಡನೇ ವಾರ್ಡ್‌ನ ಜನರು ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ.

ಗ್ರಾಮ ಪಂಚಾಯತ್‌ ಕಟ್ಟಡದ ಪಕ್ಕದಲ್ಲೇ ಇರುವ ಮರಾಠಾ ಬಡಾವಣೆಯಲ್ಲಿ ಕಳೆದ ಎರಡು ದಶಕಗಳ ಹಿಂದೆ ನಿರ್ಮಿಸಿದ ಸಿಸಿ ರಸ್ತೆ, ಚರಂಡಿ ಸಂಪೂರ್ಣ ಕಿತ್ತು ಹೋಗಿದೆ. ಹೀಗಾಗಿ ಮನೆಗಳಿಂದ ಬರುವ ಕೊಳಚೆ ನೀರು, ಮಳೆ ನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತಿದೆ.

beeri b problem
ಭಾಲ್ಕಿ ತಾಲೂಕಿನ ಬೀರಿ(ಬಿ) ಗ್ರಾಮದ ವಾರ್ಡ್‌ 2ರಲ್ಲಿ ಅಸ್ವಚ್ಛತೆ

ಜೆಜೆಎಂ ಕಾಮಗಾರಿಗಾಗಿ ಅಗೆದ ತೆಗ್ಗು ಹಾಗೇ ಮುಚ್ಚಿದ್ದಾರೆ. ಇದರಿಂದ ಓಣಿಯ ಜನರು ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಮಧ್ಯೆ ನೀರು ಸಂಗ್ರಹವಾದ ಕಾರಣ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಇದೆ. ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ.

ʼಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮ ಪಂಚಾಯತ್‌ ಅಧಿಕಾರಿಗಳು ತಕ್ಷಣವೇ ಎಚ್ಚೆತುಕೊಂಡು 2ನೇ ವಾರ್ಡ್ ನಲ್ಲಿ ರಸ್ತೆ, ಚರಂಡಿ ಸ್ವಚ್ಛಗೊಳಿಸಲು ಮುಂದಾಗಬೇಕು. ಹೊಸ ಸಿಸಿ ರಸ್ತೆ, ಚರಂಡಿ ನಿರ್ಮಿಸಲು ಯೋಜನೆ ರೂಪಿಸಬೇಕು ʼ ಎಂದು ಓಣಿಯ ನಿವಾಸಿ ಜೀವನ ಬಿರಾದರ್‌ ಆಗ್ರಹಿಸಿದ್ದಾರೆ.

ಬೀದರ್‌ : ಗೋರನಳ್ಳಿ(ಬಿ) ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿ

ಬೀದರ ತಾಲೂಕಿನ ಅಮಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗೋರನಳ್ಳಿ (ಬಿ) ಗ್ರಾಮದ ಚರ್ಚ್ ಪಕ್ಕದ ಓಣಿಯಲ್ಲಿ ಸಮರ್ಪಕ ರಸ್ತೆ, ಚರಂಡಿ ಇಲ್ಲದೆ ಮನೆಗಳ ಹೊಲಸು ನೀರು ರಸ್ತೆ ಮೇಲೆ ಹರಿದು ದುರ್ನಾತ ಬೀರುತ್ತಿದೆ.

ಸ್ವಲ್ಪ ಮಳೆಯಾದರೆ ಸಾಕು ರಸ್ತೆ ಕೆಸರು ಗದ್ದೆಯಂತಾಗುತ್ತಿದೆ. ಇದರಿಂದ ಪುಟ್ಟ ಮಕ್ಕಳು, ವೃದ್ಧರಿಗೆ ಓಡಾಡಲು ತುಂಬಾ ತೊಂದರೆ ಆಗುತ್ತಿದೆ.

ಗೋರನಳ್ಳಿ(ಬಿ)
ಬೀದರ್‌ ತಾಲೂಕಿನ ಗೋರನಳ್ಳಿ(ಬಿ) ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತು ಈ ಓಣಿಯ ಜನರಿಗೆ ಮೂಲ ಸೌಕರ್ಯ ಕಲ್ಪಿಸಿ ಸ್ಚಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಬೇಕು ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.

ಕಮಲನಗರ : ಕೆಸರು ಗದ್ದೆಯಂತಾದ ರಸ್ತೆ; ಪರದಾಟ

ಸತತವಾಗಿ ಸುರಿಯುತ್ತಿರುವ ಮಳೆಗೆ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ಪರಿಶಿಷ್ಟ ಜಾತಿಯ ಓಣಿಯ ರಸ್ತೆ ಕೆಸರಿನ ಗದ್ದೆಯಂತಾಗಿದೆ.

ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದರೂ ಜನರಿಗೆ ಸೂಕ್ತ ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಗ್ರಾಮಾಡಳಿತ ವಿಫಲವಾಗಿದೆ. ಇದರಿಂದ ಸ್ಥಳೀಯ ಶಾಲಾ ಮಕ್ಕಳು, ಓಣಿಯ ನಿವಾಸಿಗಳ ಓಡಾಡಕ್ಕೆ ಸಮಸ್ಯೆ ಆಗುತ್ತಿದೆ.

ಡಿಗ್ಗಿ ಗ್ರಾಮದಲ್ಲಿ ರಸ್ತೆ ಸಮಸ್ಯೆ
ಡಿಗ್ಗಿ ಗ್ರಾಮದ ದಲಿತ ಓಣಿಯಲ್ಲಿ ಕೆಸರು ಗದ್ದೆಯಂತಾದ ರಸ್ತೆ

ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೊಳಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಸ್ಥಳೀಯ ನಿವಾಸಿ ವಕೀಲರಾದ ಕಿರಣಕುಮಾರ್ ಆಗ್ರಹಿಸಿದ್ದಾರೆ.

ಔರಾದ್‌ : ಹೊಲಕ್ಕೆ ಹೋಗುವ ದಾರಿ ಯಾವುದಯ್ಯ?

ಔರಾದ ತಾಲೂಕಿನ ಗಡಿಕುಶನೂರ ಗ್ರಾಮದಿಂದ ಕೌಠಾ(ಬಿ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಚ್ಚಾ ರಸ್ತೆ ಭಾರೀ ಮಳೆಯಿಂದಾಗಿ ಕೆಸರು ಗದ್ದೆಯಾಗಿದೆ. ಎರಡೂ ಗ್ರಾಮದ ರೈತರು , ಕೃಷಿ ಕಾರ್ಮಿಕರು ಮಳೆ ಬಂದರೆ ಸಾಕು ಜಮೀನಿಗೆ ಹೋಗಲು ಪರದಾಡುತ್ತಿದ್ದಾರೆ.

WhatsApp Image 2024 07 23 at 12.56.07 PM
ಗಡಿಕುಶನೂರು ಗ್ರಾಮದ ರೈತರು ಹೊಲಗಳಿಗೆ ಹೋಗುವ ದಾರಿಯಲ್ಲಿ ಕೆಸರೇ ಕೆಸರು

ಹಿಂದಿನಿಂದಲೂ ಗ್ರಾಮಸ್ಥರು ಎತ್ತಿನ ಬಂಡಿ, ಟ್ರಾಕ್ಟರ್ ಸೇರಿದಂತೆ ರೈತರ ಓಡಾಟಕ್ಕೆ ಇದೊಂದೇ ದಾರಿಯಿದೆ. ಆದರೆ, ಒಮ್ಮೆಯೂ ಡಾಂಬರು ಕಾಣದ ಕಾರಣಕ್ಕೆ ರಸ್ತೆಯಲ್ಲಿ ಮೊಳಕಾಲುದ್ದ ಕೆಸರು ಸಂಗ್ರಹವಾದ ಪರಿಣಾಮ ರೈತರು ಹೊಲಗಳಿಗೆ ತೆರಳಲು ಹೈರಾಣಾಗುತ್ತಿದ್ದಾರೆ.

ಹೊಲದ ಹಾದಿ ದುರಸ್ತಿ ಬಗ್ಗೆ ಸ್ಥಳೀಯ ಶಾಸಕರಿಗೆ ಗಡಿಕುಶನೂರು ಗ್ರಾಮಸ್ಥರು ಮನವಿ ಮಾಡಿದರೂ ಅನುದಾನದ ಕೊರತೆಯ ನೆಪವೊಡ್ಡಿ ನಿರ್ಲಕ್ಷಿಸಿದ್ದಾರೆ ಎಂದು ಗ್ರಾಮದ ರೈತ ಜಗದೀಶ್ವರ ಬಿರಾದಾರ್ ಹೇಳುತ್ತಾರೆ.

– ನಿಮ್ಮ ಊರು, ನಗರ, ಪಟ್ಟಣದ ಕುಂದು ಕೊರತೆಗಳ ಪೋಟೋ, ವಿಡಿಯೋ ಮಾಹಿತಿಯನ್ನು
ಈದಿನ.ಕಾಮ್ ನ್ಯೂಸ್ ಬೀದರ್ ಸಹಾಯವಾಣಿ 9035053805 ವಾಟ್ಸಪ್ ನಂಬರ್‌ಗೆ ಕಳುಹಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...