ಬೀದರ್ | ಅಪರಾಧ ತಡೆಗೆ ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯ: ಎಸ್‌ಪಿ ಚನ್ನಬಸವಣ್ಣ ಲಂಗೋಟಿ

Date:

  • ಜಗಳ, ಗಲಾಟೆ ನಡೆದಾಗ ತಕ್ಷಣ ಸಹಾಯವಾಣಿ 112ಗೆ ಸಂಪರ್ಕಿಸಿ
  • ದ್ವಿಚಕ್ರ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಎಸ್‌ಪಿ ಸೂಚನೆ

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮರ್ಪಕವಾದ ಪೊಲೀಸ್ ವ್ಯವಸ್ಥೆ ಇರಬೇಕು ಸಿಬ್ಬಂದಿ ದಕ್ಷ ಮತ್ತು ಪ್ರಾಮಾಣಿಕವಾಗಿ ನಿರ್ವಹಿಸುವಾಗ ಮಾತ್ರ ಸಮಾಜದಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು.

ಬೀದರ ಜಿಲ್ಲಾ ಪೊಲೀಸ್ ಮತ್ತು ಭಾಲ್ಕಿ ಉಪ-ವಿಭಾಗ ವತಿಯಿಂದ ಔರಾದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಪರಾಧ ಪ್ರಕರಣ ತಡೆಗೆ ಇಲಾಖೆ ಕಟ್ಟು-ನಿಟ್ಟಿನ ಹೆಜ್ಜೆ ಇಡಲು ಸಾರ್ವಜನಿಕರು ಸಹಕರಿಸಿದ್ದಲ್ಲಿ ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಟ್ಟಣದಲ್ಲಿ ಅಕ್ರಮ ಚಟುವಟಿಕೆ ತಡೆಯಲು ಎಲ್ಲೆಡೆ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಮನೆಗಳಿಗೂ ಸಿ.ಸಿ ಟಿವಿ ಕ್ಯಾಮರಾ ವ್ಯವಸ್ಥೆ ಇದ್ದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುತ್ತದೆ. ಜಗಳ, ಗಲಾಟೆ ನಡೆದಾಗ ತಕ್ಷಣ ಸಹಾಯವಾಣಿ 112 ಗೆ ಸಂಪರ್ಕಿಸಿದರೆ ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಹಾಜರಾಗಿ ಕೊರಿರುವ ಸಹಾಯವನ್ನು ನೀಡುವರು ಎಂದು ಮಾಹಿತಿ ನೀಡಿದರು.

ಈ ಸುದ್ದಿಓದಿದ್ದೀರಾ? ವಿಜಯಪುರ | ಗ್ರಾ.ಪಂನಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಬೀದರ, ಬಸವಕಲ್ಯಾಣ, ಹುಮನಾಬಾದದಲ್ಲಿ ಆಟೋ ನೊಂದಣಿ ಅಭಿಯಾನ ನಡೆಸಿದ್ದು, ಔರಾದ್‌ನಲ್ಲೂ ಆಟೊ ಚಾಲಕರಿಗೆ ಪ್ರತ್ಯೇಕವಾದ ಸಂಖ್ಯೆ ನೀಡಲಾಗುವುದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸಿದರು.

ಸಭೆಯಲ್ಲಿ ಭಾಲ್ಕಿ ಎ.ಎಸ್ಪಿ ಪೃಥ್ವಿಕ ಶಂಕರ , ಔರಾದ ಸಿಪಿಐ ಮಲ್ಲಿಕಾರ್ಜುನ ಸೇರಿದಂತೆ ದಸಂಸ ಮುಖಂಡ ಧನರಾಜ ಮುಸ್ತಾಪೂರೆ, ಕರವೇ ಮುಖಂಡ ಅನಿಲ ಹೆಡೆ ಹಾಗೂ ಪಟ್ಟಣದ ಮುಖಂಡರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...