ಬೀದರ್‌ | ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ : ಧ್ಯಾನೇಶ್ವರ ನಿರಗುಡಿ

Date:

Advertisements


ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು ಯಾವುದೇ ಶಾಪ-ಪಾಪದಿಂದ ಬರುವುದಿಲ್ಲ, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರ ಜಿಲ್ಲೆಯು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡಿ ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ‘ಹುತಾತ್ಮದಿನ’ ಅಂಗವಾಗಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ʼಒಟ್ಟಾಗಿ ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೊಣʼ ಎಂಬ ಘೋಷಣೆಯೊಂದಿಗೆ ನಗರದಲ್ಲಿ ನಡೆದ ಅರಿವು ಅಭಿಯಾನದ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

WhatsApp Image 2025 01 30 at 7.45.25 PM
ನಗರದ ಮುಖ್ಯರಸ್ತೆಗಳಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಕುಷ್ಠರೋಗ ಕುರಿತು ಅರಿವು ಅಭಿಯಾನ ನಡೆಸಿದರು.

ʼಕುಷ್ಠರೋಗ ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಬಂಧಪಟ್ಟಿದ್ದು, ದೇಹದ ಯಾವುದೇ ಭಾಗದಲ್ಲಿ ಸ್ವರ್ಶ ಜ್ಞಾನವಿಲ್ಲದ ತಿಳಿ, ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು ಕಂಡು ಬಂದರೆ ಅದು ಕುಷ್ಠರೋಗದ ಲಕ್ಷಣಗಳು ಇರಬಹುದು. ಯಾವುದೇ ತರಹದ ಮಚ್ಚೆಗಳು ಕಂಡು ಬಂದಲ್ಲಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗದ ಲಕ್ಷಣ ಕಂಡು ಬಂದರೆ ಬಹು ಔಷಧಿ ಚಿಕಿತ್ಸೆಯಿಂದ ಗುಣಪಡಿಸಬಹುದು. ಇದಕ್ಕೆ ಯಾವುದೇ ರೀತಿಯ ಹೆದರುವ ಅಗತ್ಯವಿಲ್ಲʼ ಎಂದು ಹೇಳಿದರು.

Advertisements

ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ರಾಜಶೇಖರ ಪಾಟೀಲ್ ಮಾತನಾಡಿ, ʼಜಿಲ್ಲೆಯಲ್ಲಿ 92 ಜನ ಕುಷ್ಠರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸಕ್ತ ವರ್ಷ 85 ಹೊಸ ಪ್ರಕರಣಗಳು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪರ್ಶ್ ಕುಷ್ಠರೋಗ ಜಾಗೃತಿ ಪಾಕ್ಷಿಕ ಅಭಿಯಾನವನ್ನು ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಗಾಂಧೀಜಿ ಅವರ ಕುಷ್ಠರೋಗ ಮುಕ್ತ ಭಾರತ ನಿರ್ಮಾಣ ಕನಸನ್ನು ಈಡೇರಿಸೋಣ‌ʼ ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭಾಲ್ಕಿ ತಾಲ್ಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಮಾಹಾದೇವ ಮಾಳಗೆ, ಡಾ.ಶಂಕ್ರಪ್ಪ ಬೊಮ್ಮಾ, ಡಾ.ದಿಲೀಪ ಡೊಂಗರೆ, ವೀರಶೆಟ್ಟಿ ಚನ್ನಶೆಟ್ಟಿ, ಡಾ.ಅನೀಲ ಚಿಂತಾಮಣಿ, ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪಾ ಕಾಂಬಳೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಓಂಕಾರ ಮಲ್ಲಿಗೆ, ಅನಿತಾ, ಮೋಹನದಾಸ, ಸಿಬ್ಬಂದಿಗಳಾದ ಡಾ.ರೇಣುಕಾ, ಗೋರಖನಾಥ, ಅಬ್ದುಲ್ ಹೈ, ಇಮಾನುವೇಲ್, ಶಾಮರಾವ, ಮಹಮ್ಮದ್ ಅಫಜಲೋದ್ದೀನ್, ರಮೇಶ, ಸಾಗರ, ರಾಘವೇಂದ್ರ, ಜಾವೀದ್ ಕಲ್ಯಾಣಕರ್, ಅಶೋಕ, ಜ್ಯೋತಿ, ಮಲ್ಲಿಕಾರ್ಜುನ ಗುಡ್ಡೆ, ಪ್ರಮೋದ ರಾಠೋಡ, ಪರುಶುರಾಮ್, ಸಿಮಪ್ಪಾ, ರೇಣುಕಾ ತಾಂದಳೆ , ಶರಣಬಸಪ್ಪ, ಜಿಲಾನಿ, ರಾಕೇಶ, ಸುರೇಶ, ರೇವಣಪ್ಪಾ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X