ಉಡುಪಿ | ದ್ವಿತೀಯ ಪಿ.ಯು.ಸಿ ಪರೀಕ್ಷೆ ಶಾಂತಿಯುತ ನಡೆಸಲು ಕಟ್ಟುನಿಟ್ಟಿನ ಕ್ರಮ

Date:

ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ಯತೆಯನ್ನು ಕಾಪಾಡುವುದರೊಂದಿಗೆ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವಿಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-01 ನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದ್ವಿತೀಯ ಪಿಯುಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮೂಲವಾಗಿರುವುದರ ಜೊತೆಗೆ ಬಹಳ ಮಹತ್ವದ್ದಾಗಿದ್ದು, ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ದೋಷರಹಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆಯನ್ನು ಬರೆಯುವ ವಾತಾವರಣವನ್ನು ಕಲ್ಪಿಸಬೇಕು ಎಂದರು.

1009652172

ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 17,181 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದು, ಇದರಲ್ಲಿ 16,657 ಹೊಸ ವಿದ್ಯಾರ್ಥಿಗಳು, 383 ಖಾಸಗಿ ಅಭ್ಯರ್ಥಿಗಳು, 135 ಪುನರಾವರ್ತಿತ ಅಭ್ಯರ್ಥಿಗಳು, 6 ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ಇದ್ದು, ಪರೀಕ್ಷೆಯು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಿಗದಿತ ದಿನಾಂಕಗಳಲ್ಲಿ ನಡೆಯಲಿದೆ ಎಂದರು.

ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷೆಯನ್ನು ಬರೆಯಲು ಪ್ರವೇಶಿಸಲು ಅನುಮತಿ ನೀಡಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಮೊಬೈಲ್, ಸ್ಮಾರ್ಟ್ ವಾಚ್, ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಹಿತಿಯನ್ನು ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆ ಪತ್ರಿಕೆ ಮೂಲಕ ಆರ್ಥಿಕ ಲಾಭಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.

1009652173

ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ಕೇಂದ್ರ ಸುತ್ತ ಮುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚಿಸಲು ಕ್ರಮವಹಿಸಲಾಗುವುದು. ಅಪರಿಚಿತ ವ್ಯಕ್ತಿಗಳು ಕೇಂದ್ರದ ಸುತ್ತಮುತ್ತ ಓಡಾಡದಂತೆ ಎಚ್ಚರವಹಿಸಲಾಗುವುದು ಎಂದರು.

ಪ್ರತೀ ಪರೀಕ್ಷಾ ಕೆಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ಮೂರು ಜನ ಸದಸ್ಯರ ಸಮಿತಿಯನ್ನು ಮಾಡಲಾಗಿದ್ದು, ಇವರ ವಾಹನಕ್ಕೆ ಪೋಲಿಸ್ ಸಿಬ್ಬಂದಿ ನೇಮಿಸಬೇಕು. ಪ್ರಶ್ನೆ ಪತ್ರಿಕೆ ಸಾಗಾಣಿಕೆ ಮಾಡುವ ವಾಹನಕ್ಕೆ ಜಿ.ಪಿ. ಎಸ್ .ಅಳವಡಿಸಿ ಮಾನಿಟರ್ ಮಾಡಲು ವ್ಯವಸ್ಥೆ ಮಾಡಲಾಗಿದೆ. 24*7 ಸಿ.ಸಿ.ಟಿ.ವಿ ಕಣ್ಗಾವಿನಲ್ಲಿಯೇ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣೀಕರಿಸಿರುವ ಮತ್ತು ವಿತರಿಸುವ ಬಗ್ಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಅಳವಡಿಸಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ಆಸನ, ಬೆಳಕು, ಫ್ಯಾನ್, ಕುಡಿಯುವ ನೀರು ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ವೈದ್ಯರನ್ನೊಳಗೊಂಡ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಅವಶ್ಯಕತೆಗನುಗುಣವಾಗಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಇಲಾಖೆಯಿಂದ ತಾಲ್ಲೂಕು ಮತ್ತು ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಜಾಗೃತದಳದ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.

ಸಭೆಗೆ ಮುನ್ನ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಪಿಯುಸಿ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಗೊಂದಲ ಹಾಗೂ ಧೈರ್ಯಗೆಡದಂತೆ ನಿರಾತಂಕವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆಗಳನ್ನು ಮಾಡಿಕೊಡಬೇಕು. ಪರೀಕ್ಷೆ ಕುರಿತು ಯಾವುದೇ ರೀತಿಯ ವದಂತಿಗಳು, ಸೋಷಿಯಲ್ ಮೀಡಿಯಾದಲ್ಲಿನ ನಕಲಿ ಸುದ್ದಿಗಳಿಗೆ ಕಿವಿಗೊಡದೆ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಸಿಸಿ ಟಿವಿ, ವೆಬ್‌ಕಾಸ್ಟಿಂಗ್ ಮತ್ತು ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ,, ಡಿಡಿಪಿಯು ಮಾರುತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರರುಗಳು, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...