ಉಡುಪಿ | ದಿನಗೂಲಿ ಮಾಡುವ ತಾಯಿಯ ಶ್ರಮಕ್ಕೆ ಬೆಲೆ ತಂದ ‘ಮಾನ್ಯ’: ಪಿಯುಸಿಯಲ್ಲಿ ವಿಶೇಷ ಸಾಧನೆ

Date:

ಇಂದು (ಏಪ್ರಿಲ್‌ 08) ಬುಧವಾರ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಕೆಲವು ವಿದ್ಯಾರ್ಥಿಗಳು ತಮ್ಮ ತಮ್ಮ ಫಲಿತಾಂಶ ನೋಡಿ ಫುಲ್‌ ಖುಷಿಯಾಗಿದ್ದರೆ, ಇನ್ನೂ ಕೆಲವು ವಿದ್ಯಾರ್ಥಿಗಳು ಇನ್ನಷ್ಟು ಅಂಕಗಳು ಬೇಕಿತ್ತು ಎನ್ನುವ ಲೆಕ್ಕಾಚಾರದಲ್ಲಿಯೇ ಇದ್ದಾರೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೂಲಿ ಕೆಲಸ, ಲಾರಿ ಚಾಲಕರ ಮಕ್ಕಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಯಾರೋ ಉಳ್ಳವರ ಸ್ವತ್ತಲ್ಲ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಎಸ್‌ಡಿಪಿಟಿ ಕಾಲೇಜಿನ ಮಾನ್ಯ ಎಸ್‌ ಪೂಜಾರಿ ಕೂಡ ಈ ಉದಾಹರಣೆಗೆ ಹೊರತಾಗಿಲ್ಲ.

- Advertisement -

ಶ್ರೀ ದುರ್ಗ ಪರಮೇಶ್ವರಿ ಟೆಂಪಲ್‌ ಪದವಿ ಪೂರ್ವ ಕಾಲೇಜು ಮಂದಾರ್ತಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಮಾನ್ಯ ಎಸ್‌ ಪೂಜಾರಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 95.16% ಪಡೆದಿದ್ದಾಳೆ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡಿರುವ ಮಾನ್ಯ, ತಾಯಿಯ ಶ್ರಮಕ್ಕೆ ಇಂದು ಬೆಲೆ ತಂದು ಕೊಟ್ಟಿದ್ದಾಳೆ. ಮಾನ್ಯ ತಾಯಿ ಗೇರು ಬೀಜ ಕಾರ್ಖಾನೆಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದು, ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಓದಿಸುತ್ತಿದ್ದಾರೆ. ಸದ್ಯ ಮಾನ್ಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಾಯಿ ವಿನೋದ ಹಾಗೂ ತಾನು ಕಲಿತ ಶಿಕ್ಷಣ ಸಂಸ್ಥೆಗೆ ಹೆಮ್ಮೆ ಪಡುವಂತೆ ಮಾಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಯಾವುದೇ ಟ್ಯೂಷನ್‌ಗೆ ಹೋಗದೇ ಕಾಲೇಜು ಪ್ರಾಧ್ಯಾಪಕರ ಸಹಾಯ ಪಡೆದು, ತಾನೇ ಹಗಲುಇರಳು ಶ್ರಮವಹಿಸಿ ಓದಿ ಉತ್ತಮ ಅಂಕ ಗಳಿಸಿರುವ ಮಾನ್ಯ ಸದ್ಯ ಮುಂದಿನ ಶಿಕ್ಷಣಕ್ಕಾಗಿ ಸಿ.ಎ(Chartered Accountant) ಮಾಡಲು ಹೆಜ್ಜೆ ಇಟ್ಟಿದ್ದಾಳೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಮ್ಮ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿರುವ ಮಾನ್ಯಳಾ ಶ್ರಮಕ್ಕೆ ಶ್ರೀ ದುರ್ಗ ಪರಮೇಶ್ವರಿ ಟೆಂಪಲ್‌ ಪದವಿ ಪೂರ್ವ ಕಾಲೇಜು ಮಂದಾರ್ತಿಯ ಪ್ರಾಂಶುಪಾಲರು, ಭೋದಕ ಹಾಗೂ ಭೋದಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...