ಗೋ ರಕ್ಷಣೆಯ ನೆಪದಲ್ಲಿ 2 ಲಕ್ಷ ರೂ.ಗೆ ಬೇಡಿಕೆ: ನಿರಾಕರಿಸಿದ್ದಕ್ಕೆ ಹತ್ಯೆಗೈದ ಪುನೀತ್‌ ಕೆರೆಹಳ್ಳಿ

Date:

  • ಹಣ ನೀಡದಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಹತ್ಯೆ
  • ಪುನೀತ್ ಕೆರೆಹಳ್ಳಿ, ಆತನ ಸಹಚರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಗೋರಕ್ಷಕರೆಂದು ಹೇಳಿಕೊಂಡಿದ್ದು, ಇದ್ರೀಸ್ ಪಾಷಾ ಅವರನ್ನು ಬಿಡುಗಡೆ ಮಾಡಲು 2 ಲಕ್ಷ ರೂಪಾಯಿ ನೀಡುವಂತೆ ಒತ್ತಡ ಹಾಕಿದ್ದು, ಹಣ ನೀಡದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹಣ ನೀಡದಿದ್ದಾಗ ಮಾರಕಾಸ್ತ್ರ ತೋರಿಸಿ ಬೆದರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಸಾತನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗೋ ರಕ್ಷಕರು ಎಂಬ ನೆಪದಲ್ಲಿ ಪುನೀತ್‌ ಕೆರೆಹಳ್ಳಿ ತಂಡದವರು  ಪೊದೆಯಲ್ಲಿ ಅವಿತಿದ್ದ ಇದ್ರೀಸ್ ಅವರನ್ನು ಎಳೆತಂದು ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಹಾಗಾಗಿ ಪುನೀತ್ ಹಾಗೂ ಆತನ ಸಹಚರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸ್ ಠಾಣೆಯ ಬಳಿ ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಜಾನುವಾರು ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದು, ಮೃತನ ಇಬ್ಬರು ಸಹಚರರ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಪುನೀತ್ ಕೆರೆಹಳ್ಳಿಯೇ ಕಂಟೈನರ್ ಚಾಲಕ ಸೈಯದ್ ಜಹೀರ್ ಎಂಬಾತನ ಮೇಲೆ ಅಕ್ರಮ ಗೋ ಸಾಗಾಟದ ದೂರು ದಾಖಲಿಸಿದ್ದನು.

ದೂರಿನ ಅನ್ವಯ ಪೊಲೀಸರು ಕಂಟೈನರ್ ಚಾಲಕ ಸೈಯದ್ ಜಹೀರ್ ಎಂಬಾತನನ್ನು ಬಂಧಿಸಿದಾಗ ಇದ್ರೀಸ್‌ ಪಾಷಾ ಅವರನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಪುನೀತ್ ಕೆರೆಹಳ್ಳಿಗಾಗಿ ಪೊಲೀಸರ ಶೋಧ ಕಾರ್ಯದಲ್ಲಿದ್ದಾರೆಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ

ಮೃತ ಇದ್ರೀಸ್ ಪಾಷಾ ಅವರ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ), 341 (ತಪ್ಪು ಸಂಯಮ), ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ ನಲ್ಲಿ 2 ಲಕ್ಷಕ್ಕೆ ಬೇಡಿಕೆ ಇಟ್ಟ ವಿಷಯವನ್ನೂ ಪ್ರಸ್ತಾಪಿಸಲಾಗಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದಕ್ಷಿಣ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ಬಿಜೆಪಿ ನಾಯಕರೊಂದಿಗೆ ಪುನೀತ್ ಕೆರೆಹಳ್ಳಿ ಇರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಘಟನೆಯನ್ನು ಕರ್ನಾಟಕ ಕಾಂಗ್ರೆಸ್ ಖಂಡಿಸಿದ್ದು, “ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ” ಎಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...