ರಾಮನಗರ | ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

Date:

  • ನಾವು ಯಾರನ್ನೂ ಹತ್ಯೆ ಮಾಡಿಲ್ಲ; ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಲಿದೆ
  • ಎಚ್‌ಡಿಕೆ, ಸಿದ್ದರಾಮಯ್ಯ, ಡಿಕೆಶಿ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ

ರಾಮನಗರ ಜಿಲ್ಲೆಯ ಕನಕಪುರ ಬಳಿಯ ಸಾತನೂರು ಸಮೀಪ ಹಸು ಸಾಗಿಸುತ್ತಿದ್ದ ಇದ್ರೀಸ್‌ ಪಾಷ ಅವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾದ ಪ್ರಕರಣದ ಪ್ರಮುಖ ಆರೋಪಿ, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ” ಎಂದು ಹೇಳಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ

“ಮಂಡ್ಯದಿಂದ ಹಲಗೂರು, ಸಾತನೂರು ಮಾರ್ಗವಾಗಿ ನಿರಂತರವಾಗಿ ಜಾನುವಾರು ಸಾಗಣೆ ಆಗುತ್ತಿದ್ದು, ಇದಕ್ಕೆ ರಾಜಕಾರಣಿಗಳ ಕೃಪಾಕಟಾಕ್ಷವೂ ಇದೆ. ಇದ್ರೀಸ್‌ ಪಾಷನನ್ನು ನಾನು ಹತ್ಯೆ ಮಾಡಿದ್ದೇನೆಂದು ಹೇಳಲಾಗುತ್ತಿದೆ. ಎಫ್‌ಐಆರ್‌ ಪ್ರತಿಯನ್ನು ತಿದ್ದುಪಡಿ ಮಾಡಲಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಸತ್ಯಾಂಶವನ್ನು ಬಯಲಿಗೆಳೆಯಬೇಕು. ನನಗೆ ನ್ಯಾಯ ಬೇಕು” ಎಂದು ವಿಡಿಯೋದಲ್ಲಿ ಪುನೀತ್‌ ಕೆರೆಹಳ್ಳಿ ಹೇಳಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...