ಬೀದರ್‌ | ಕನಿಷ್ಠ ಬೆಂಬಲ ಬೆಲೆಗೆ ಕಡಲೆ ಕಾಳು ಖರೀದಿ : ಕ್ವಿಂಟಾಲ್‌ಗೆ 5,650 ದರ ನಿಗದಿ

Date:

ಕಡಲೆ ಕಾಳು ಖರೀದಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

- Advertisement -

2024-25ನೇ ಸಾಲಿಗೆ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಪ್ರತಿ ಕ್ವಿಂಟಾಲಿಗೆ ₹5,650 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜ.28ರಂದು ನಡೆದ ಸಭೆಯ ನಡವಳಿಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 85 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಎಂಎಸ್‌ಪಿ ದರದಲ್ಲಿ ರೈತರಿಂದ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 20 ಕ್ವಿಂಟಾಲ್‌ನಂತೆ ಈಂಕಿ ಗುಣಮಟ್ಟದ ಕಡಲೆ ಕಾಳು ಮಾರಾಟ ಮಾಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗೂಡ್ಸ್‌ ವಾಹನ – ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಖರೀದಿ ಕೇಂದ್ರಗಳು ಲಾಗಿನ್ ಕ್ರೆಡೆನ್ಸಿಯಲ್ಸ್‌ ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ಕಡಲೆಕಾಳು ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಡಲೆ ಮಾರಾಟ ಮಾಡುವ ಮೂಲಕ ಈ ಯೋಜನೆ ಲಾಭ ಪಡೆದುಕೊಳ್ಳಲು ಜಿಲ್ಲಾಡಳಿತ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...